AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರ: ವಿಡಿಯೋ ವೈರಲ್​

ಇಲ್ಲೊಬ್ಬ ಬೈಕ್​ ಸವಾರ ಒಂದೇ ದಿನ ಎರಡು ಅಪಘಾತದಿಂದ ಪಾರಾಗಿದ್ದಾನೆ. ಈ ಘಟನೆ ಮಂಗಳೂರಿನ ಬಳಿ ನಡೆದಿದೆ.  ಮಂಗಳೂರಿನ ಮಲ್ಯಾರಪದವು ಮಾರ್ಗವಾಗಿ ಮಲಾರ್​ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರ: ವಿಡಿಯೋ ವೈರಲ್​
TV9 Web
| Edited By: |

Updated on:Jan 10, 2022 | 5:26 PM

Share

ಒಂದು ಬಾರಿ ಅಪಘಾತದಿಂದ ಪಾರಾದರೆ  ಜೀವ ಉಳಿಯಿತು ಎಂದು ಖುಷಿ ಪಡುತ್ತೇವೆ. ಅಂತಹದ್ದರಲ್ಲಿ ಇಲ್ಲೊಬ್ಬ ಬೈಕ್​ ಸವಾರ ಒಂದೇ ದಿನ ಎರಡು ಅಪಘಾತದಿಂದ ಪಾರಾಗಿದ್ದಾನೆ. ಈ ಘಟನೆ ಮಂಗಳೂರಿನ ಬಳಿ ನಡೆದಿದೆ. ಬೈಕ್​ ಸವಾರ ಮಂಗಳೂರಿನ ಮಲ್ಯಾರಪದವು ಮಾರ್ಗವಾಗಿ ಮಲಾರ್​ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಅಪಘಾತದಿಂದ ಬಚಾವ್​ ಆದ ವ್ಯಕ್ತಿಯನ್ನು ಮಲಾರ್​ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. 

ವ್ಯಕ್ತಿ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಇಂದು ಘಟನೆ ನಡೆದಿದೆ.  ಮಲ್ಯಾರಪದವು ಊರಿನ ಶಾಲೆಯ ಬಳಿ​ ವೇಗವಾಗಿ ಹೋಗುತ್ತಿದ್ದ ಸವಾರನ ಎದುರು ಸಿಟಿ ಬಸ್​ ಒಂದು ರೋಡ್​ ಕ್ರಾಸ್​ ಮಾಡುತ್ತಿತ್ತು. ಈ ವೇಳೆ  ಕೂದಲೆಳೆ ಆಂತರದಿಂದ ಬೈಕ್​ ಸವಾರ ತಪ್ಪಿಸಿಕೊಂಡಿದ್ದಾನೆ. ಅಲ್ಲಿಂದ ಮುಂದಕ್ಕೆ ಹೋದ ಬೈಕ್​ ಸವಾರ, ಬೈಕ್​ ಅನ್ನು ನಿಯಂತ್ರಣಕ್ಕೆ ತರಲಾಗದೆ ಮೀನಿನ ಕಾರ್ಖಾನೆ ಬಳಿ ಇದ್ದ ಅಂಗಡಿ ಮತ್ತು ಮರದ ನಡುವೆ ಇದ್ದ ಸಣ್ಣ ಜಾಗದಲ್ಲಿ ಸ್ಕೂಟರ್​ಅನ್ನು ನುಗ್ಗಿಸಿಕೊಂಡು ಹೋಗಿದ್ದಾನೆ. ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್​ ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರನನ್ನು ಕಂಡು ಕಂಡು ನೆಟ್ಟಿಗರು ಬೆರಗಾಗಿದ್ದಾರೆ.

Published On - 5:19 pm, Mon, 10 January 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್