Viral: ರೀಲ್ಸ್‌ಗಾಗಿ ಬೆಟ್ಟದಲ್ಲಿ ಸ್ಟಂಟ್‌ ಮಾಡಲು ಹೋಗಿ ಆಯ ತಪ್ಪಿ ಕೆಳಗೆ ಬಿದ್ದ ಯುವಕ; ವಿಡಿಯೋ ವೈರಲ್‌

ವಿಡಿಯೋ ಮತ್ತು ರೀಲ್ಸ್‌ ಮಾಡುವ ಸಲುವಾಗಿ ಕೆಲವರು ಅಪಾಯಕಾರಿ ಸಾಹಸಗಳನ್ನು ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ಯುವಕ ಕೂಡಾ ಬೆಟ್ಟದ ತುದಿಯಲ್ಲಿ ನಿಂದು ಕಸರತ್ತು ಮಾಡಲು ಹೋಗಿದ್ದು, ಆತ ಬ್ಯಾಕ್‌ಫ್ಲಿಪ್‌ ಮಾಡುವ ಸಂದರ್ಭದಲ್ಲಿ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದ್ದಾನೆ. ಈ ಆಘಾತಕಾರಿ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 31, 2024 | 5:35 PM

ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗುವ ಸಲುವಾಗಿ ರೀಲ್ಸ್‌ ಮಾಡುವವರು ಹಲವಾರು ಸಾಹಸಗಳನ್ನು ಮಾಡುತ್ತಿರುತ್ತಾರೆ. ಅದರಲ್ಲಿ ಚಿತ್ರ ವಿಚಿತ್ರ ಸಾಹಸಗಳನ್ನು ಮಾಡಲು ಹೋಗಿ ಪ್ರಾಣಕ್ಕೆ ಆಪತ್ತು ತಂದುಕೊಂಡವರೂ ಇದ್ದಾರೆ. ಹೀಗೆ ರೀಲ್ಸ್‌ ಮಾಡಲು ಹೋಗಿ ಪಜೀತಿಗೆ ಸಿಲುಕಿಕೊಂಡವರ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಇಂತಹದ್ದೇ ಘಟನೆಯೊಂದು ನಡೆದಿದ್ದು, ಯುವಕನೊಬ್ಬ ರೀಲ್ಸ್‌ಗಾಗಿ ಬೆಟ್ಟದ ತುದಿಯಲ್ಲಿ ನಿಂತು ಕಸರತ್ತು ಮಾಡಲು ಹೋಗಿದ್ದು, ಆತ ಬ್ಯಾಕ್‌ಫ್ಲಿಪ್‌ ಮಾಡುವ ಸಂದರ್ಭದಲ್ಲಿ ಆಯತಪ್ಪಿ ದೊಪ್ಪನೆ ಪ್ರಪಾತಕ್ಕೆ ಬಿದ್ದಿದ್ದಾನೆ. ಈ ಆಘಾತಕಾರಿ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಸ್ಟಂಟ್‌, ಬಗೆ ಬಗೆಯ ಕಸರತ್ತುಗಳನ್ನು ಮಾಡಲು ಹೋಗಿ ತಮಗೆ ತಾವೇ ಅಪಾಯ ತಂದುಕೊಂಡ ಹಲವರಿದ್ದಾರೆ. ಅದೇ ರೀತಿ ಇಲ್ಲೊಬ್ಬ ಯುವಕ ಕೂಡಾ ಸ್ಟೈಲ್‌ ಆಗಿ ಬ್ಯಾಕ್‌ಫ್ಲಿಪ್‌ ಮಾಡಲು ಹೋಗಿ ಆಯತಪ್ಪಿ ಬೆಟ್ಟದ ಕೆಳಗೆ ಬಿದ್ದಿದ್ದಾನೆ. ಈ ಘಟನೆ ಯಾವಾಗ, ಎಲ್ಲಿ ನಡೆದದ್ದು ಎಂಬುದರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಈ ಕುರಿತ ಪೋಸ್ಟ್‌ ಒಂದನ್ನು cctividiots ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು ʼಇನ್ನೊಬ್ಬ ಯುವಕ ಈ ಮೂರ್ಖನನ್ನು ಹಿಡಿಯಲು ಪ್ರಯತ್ನಿಸಿದನುʼ ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಯುವಕನೊಬ್ಬ ಬ್ಯಾಕ್‌ಫ್ಲಿಪ್‌ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಕಸರತ್ತು ಮಾಡುವ ವೇಳೆ ಆತ ಆಯ ತಪ್ಪಿ ಬೆಟ್ಟದ ಕೆಳಗೆ ಬಿದ್ದಿದ್ದಾನೆ. ಅಲ್ಲಿದ್ದ ಯುವಕ ಆತನನ್ನು ಹಿಡಿಯಲು ಪ್ರಯತ್ನಿಸಿದರೂ ಆತನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಇನ್‌ಸ್ಟಾಗ್ರಾಮ್‌ನಲ್ಲಿ ಸರಳವಾಗಿ ಪರಭಾಷಿಕರಿಗೆ ಕನ್ನಡ ಕಲಿಸುವ ಪ್ರಯತ್ನದಲ್ಲಿ ಯುವತಿಯರು…

ಇಂದು ಮಧ್ಯಾಹ್ನ ಹಂಚಿಕೊಂಡ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆತ ಬಿದ್ದ ಏಟಿಗೆ ಖಂಡಿತವಾಗಿಯೂ ಆತನ ಮೂಳೆಗಳು ಮುರಿದಿರುತ್ತವೆʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼವಿಡಿಯೋಗಾಗಿ ಜೀವವನ್ನೇ ಪಣಕ್ಕಿಡುವ ಅವಶ್ಯಕತೆ ಇತ್ತೇ?ʼ ಎಂದು ಪ್ರಶ್ನಿಸಿದ್ದಾರೆ. ಇನ್ನೊಬ್ಬ ಬಳಕೆದಾರರು ʼಆತ ಉದ್ದೇಶಪೂರ್ವಕವಾಗಿ ಮುಂದೆ ಓಡಿ ಬೆಟ್ಟದಿಂದ ಕೆಳಗೆ ಬಿದ್ದಂತಿದೆʼ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ