Video Viral: ರೈಲಿನ ಇಂಜಿನ್ ಅಡಿಯಲ್ಲಿ ಕುಳಿತು 290 ಕಿ.ಮೀ ಪ್ರಯಾಣಿಸಿದ ವ್ಯಕ್ತಿ

ಮಧ್ಯಪ್ರದೇಶದ ಜಬಲ್ಪುರದಲ್ಲಿ ದಾನಪುರ ಎಕ್ಸ್‌ಪ್ರೆಸ್ ರೈಲಿನ ಇಂಜಿನ್ ಅಡಿಯಲ್ಲಿ ಕುಳಿತು ವ್ಯಕ್ತಿಯೊಬ್ಬ 290 ಕಿಮೀ ಪ್ರಯಾಣಿಸಿದ ಅಪಾಯಕಾರಿ ಘಟನೆ ಬೆಳಕಿಗೆ ಬಂದಿದೆ. ಜಬಲ್ಪುರ ರೈಲು ನಿಲ್ದಾಣದ ಬಳಿ ರೋಲಿಂಗ್ ಪರೀಕ್ಷೆಯ ಸಮಯದಲ್ಲಿ ರೈಲಿನ ಸಿಬ್ಬಂದಿ ಕೋಚ್ ಅಡಿಯಲ್ಲಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಅಡಗಿರುವುದು ತಿಳಿಬಂದಿದೆ. ರೈಲ್ವೇ ರಕ್ಷಣಾ ಪಡೆ ಆತನನ್ನು ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Video Viral: ರೈಲಿನ ಇಂಜಿನ್ ಅಡಿಯಲ್ಲಿ ಕುಳಿತು 290 ಕಿ.ಮೀ ಪ್ರಯಾಣಿಸಿದ ವ್ಯಕ್ತಿ
Man Found Hiding Under Train Coach
Follow us
ಅಕ್ಷತಾ ವರ್ಕಾಡಿ
|

Updated on: Dec 27, 2024 | 3:10 PM

ಮಧ್ಯಪ್ರದೇಶ: ದಾನಪುರ ಎಕ್ಸ್‌ಪ್ರೆಸ್‌ನ ಕೋಚ್‌ನಡಿಯಲ್ಲಿ ವ್ಯಕ್ತಿಯೊಬ್ಬ ಸಿಕ್ಕಿಬಿದ್ದಿರುವ ವಿಚಿತ್ರ ಘಟನೆ ಮಧ್ಯಪ್ರದೇಶದ ಜಬಲ್‌ಪುರದದಲ್ಲಿ ನಡೆದಿದೆ. ಈತ ಇಟಾರ್ಸಿಯಿಂದ ಜಬಲ್‌ಪುರದವರೆಗೆ (290 ಕಿಮೀ) ರೈಲಿನ ಬೋಗಿಯ ಕೆಳಗೆ, ಚಕ್ರಗಳ ನಡುವೆ ಅಡಗಿ ಕುಳಿತುಕೊಂಡು ಪ್ರಯಾಣಿಸಿರುವುದು ತನಿಖೆಯ ವೇಳೆ ತಿಳಿದುಬಂದಿದೆ.

ಜಬಲ್ಪುರ ರೈಲು ನಿಲ್ದಾಣದ ಬಳಿ ರೋಲಿಂಗ್ ಪರೀಕ್ಷೆಯ ಸಮಯದಲ್ಲಿ ರೈಲಿನ ಸಿಬ್ಬಂದಿ ಕೋಚ್ ಅಡಿಯಲ್ಲಿ ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಅಡಗಿರುವುದು ತಿಳಿಬಂದಿದೆ. ಆಘಾತಕ್ಕೊಳಗಾದ ನೌಕರರು ಕೂಡಲೇ ಸ್ಥಳಕ್ಕೆ ಆರ್‌ಪಿಎಫ್‌ಗೆ ಕರೆ ಮಾಡಿದ್ದಾರೆ. ರೈಲಿನಡಿಯಿಂದ ವ್ಯಕ್ತಿ ಹೊರಬರುತ್ತಿರುವ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗುತ್ತಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Viral Video: ರೀಲ್ಸ್​ಗಾಗಿ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸವಾರಿ ಹೊರಟ ವ್ಯಕ್ತಿ

ವ್ಯಕ್ತಿ ಮದ್ಯದ ಅಮಲಿನಲ್ಲಿದ್ದು, ಆ ವ್ಯಕ್ತಿ ಎಲ್ಲಿಂದ ಬಂದವನು ಅಥವಾ ರೈಲಿನ ಟ್ರಾಲಿಯನ್ನು ಹೇಗೆ ಪ್ರವೇಶಿಸಿದನು ಎಂಬುದು ಸ್ಪಷ್ಟವಾಗಿಲ್ಲ. ರೈಲ್ವೇ ರಕ್ಷಣಾ ಪಡೆ ವ್ಯಕ್ತಿಯನ್ನು ಬಂಧಿಸಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ. ವಿಚಾರಣೆ ಮುಂದುವರೆದಂತೆ ಹೆಚ್ಚಿನ ವಿವರಗಳು ಬಹಿರಂಗಗೊಳ್ಳಲಿವೆ.

ಇದನ್ನೂ ಓದಿ: ಶ್ರೀಮಂತ ಸಿಂಗಲ್​ ಹುಡುಗರೇ ಈಕೆಯ ಟಾರ್ಗೆಟ್!; ಏಳನೇ ಮದುವೆಯ ವೇಳೆ ಸಿಕ್ಕಿಬಿದ್ದ ಯುವತಿ

@FreePressMP ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಡಿಸೆಂಬರ್​ 26ರಂದು ಹಂಚಿಕೊಂಡಿರುವ ಈ ವಿಡಿಯೋವನ್ನು ಈಗಾಗಲೇ ಒಂದೇ ದಿನದಲ್ಲಿ ಸಾವಿರಾರು ಜನರು ವೀಕ್ಷಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ