Video: ಬಿಳಿ ಬಣ್ಣದ ಕುರ್ತಾ ಧರಿಸಿ ವೈರಲ್ ಆದ ವ್ಯಕ್ತಿ, ಕಾರಣ ಇದೇ ನೋಡಿ

ಬಿಳಿ ಬಣ್ಣದ ಕುರ್ತಾ ಧರಿಸಿರುವ ವ್ಯಕ್ತಿಯೊಬ್ಬ ವೈರಲ್ ಆಗಿದ್ದಾನೆ. ಇದಕ್ಕೆ ಕಾರಣವಾಗಿದ್ದು ಆತನು ಧರಿಸಿರುವ ಬಟ್ಟೆ. ಹೌದು, ಈ ಕುರ್ತಾ ಹಿಂಬದಿಯಲ್ಲಿ ನೀಲಿ ಬಣ್ಣದಲ್ಲಿ ಪಟ್ಟಿಯೊಂದು ಕಾಣುತ್ತಿದೆ. ಇದರ ಹಿಂದಿನ ಸತ್ಯ ತಿಳಿದ್ರೆ ನೀವು ಶಾಕ್ ಆಗ್ತೀರಾ. ಈ ವಿಡಿಯೋ ಸದ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಕುರಿತಾದ ಕಂಪ್ಲೀಟ್ ಮಾಹಿತಿ ಇಲ್ಲಿದೆ.

Video: ಬಿಳಿ ಬಣ್ಣದ ಕುರ್ತಾ ಧರಿಸಿ ವೈರಲ್ ಆದ ವ್ಯಕ್ತಿ, ಕಾರಣ ಇದೇ ನೋಡಿ
ವೈರಲ್‌ ವಿಡಿಯೋ
Image Credit source: Instagram

Updated on: Jul 21, 2026 | 11:09 AM

ಸೋಶಿಯಲ್ ಮೀಡಿಯಾದಲ್ಲಿ (social media) ವೈರಲ್ ಆಗುವ ಕೆಲ ವಿಡಿಯೋಗಳು ನೆಟ್ಟಿಗರ ಹುಬ್ಬೇರಿಸುವಂತೆ ಮಾಡುತ್ತದೆ. ಇದೀಗ ಇಲ್ಲೊಬ್ಬ ವ್ಯಕ್ತಿಯು ಬಿಳಿ ಬಣ್ಣದ ಕುರ್ತಾ ಧರಿಸಿ ವೈರಲ್ ಆಗಿದ್ದಾನೆ. ಈ ಕುರ್ತಾ ಮೇಲೆ ನೀಲಿ ಪಟ್ಟಿ ಮೇಲೆ ವೆಸ್ಟೆರ್ನ್ ರೈಲ್ವೆ (western railway) ಎಂದು ಬರೆಯಲಾಗಿದೆ. ಹೌದು, ಈ ವ್ಯಕ್ತಿ ರೈಲ್ವೆಯಲ್ಲಿನ ಬೆಡ್ ಶೀಟ್ ನಿಂದಲೇ ಕುರ್ತಾ ಹೊಲಿಸಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಂಜಿತ್ ಸಿಂಗ್ (Ranjeeth Singh) ಹೆಸರಿನ ಇನ್ಸ್ಟಾಗ್ರಾಂನಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ವ್ಯಕ್ತಿಯೊಬ್ಬ ಬಿಳಿ ಬಣ್ಣದ ಕುರ್ತಾ ಧರಿಸಿ ಮಾರ್ಕೆಟ್ ನಲ್ಲಿ ತರಕಾರಿ ಖರೀದಿ ಮಾಡುತ್ತಿರುವುದನ್ನು ಕಾಣಬಹುದು. ಆತ ಧರಿಸಿರುವ ಕುರ್ತಾದ ಮೇಲೆ ನೀಲಿ ಪಟ್ಟಿ ಮೇಲೆ ವೆಸ್ಟೆರ್ನ್ ರೈಲ್ವೆ ಎಂದು ಬರೆದಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮುಂಬೈ ನಿಲ್ದಾಣದಲ್ಲಿ ಹೈಡ್ರಾಮಾ: ಯುವತಿಯ ಕಾಲು ಹಿಡಿದು ಹಠ ಮಾಡುತ್ತಾ ಪ್ಲಾಟ್‌ಫಾರ್ಮ್ ಮೇಲೆ ಮಲಗಿದ ಯುವಕ

ಈ ಕ್ಲಿಪಿಂಗ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಐದು ವರ್ಷ ಕಳೆದ್ರು ಈ ಬಟ್ಟೆ ಏನು ಹಾಳಾಗಲ್ಲ ಎಂದು ಹೇಳಿದ್ದಾರೆ. ಮತ್ತೊಬ್ಬರು, ಬ್ರಾಂಡೆಡ್ ಬಟ್ಟೆ ಎಂದಿದ್ದಾರೆ. ಇನ್ನೊಬ್ಬರು, ಬಟ್ಟೆ ಖರೀದಿಸಲು ಕಷ್ಟವಿರಬಹುದು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Loading...
Unable to load recommendations.
Follow Us