Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇನ್ ಸ್ಟೆಂಟ್ ಕರ್ಮ; ತೊಂದರೆ ಕೊಡಲು ಬಂದವನ ಸೊಂಟಕ್ಕೆ ಒದ್ದು ತಕ್ಕ ಪಾಠ ಕಲಿಸಿದ ಹಸು

ಕೆಲವೊಂದು ತರ್ಲೆ ಹುಡುಗರು ಏನಾದರೊಂದು ಕಿತಾಪತಿ ಮಾಡುತ್ತಲೇ ಇರುತ್ತಾರೆ. ಅದೇ ರೀತಿ ಇಲ್ಲೊಬ್ಬ ಯುವಕ ಹಸುವಿಗೆ ತೊಂದರೆ ಕೊಡಲು ಬಂದಿದ್ದು, ಇದರಿಂದ ಕೋಪಗೊಂಡ ಹಸು ಆತನ ಸೊಂಟಕ್ಕೆ ಒದ್ದು ತಕ್ಕ ಪಾಠ ಕಲಿಸಿದೆ. ಸದ್ಯ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಇನ್ಸ್ಟೆಂಟ್ ಕರ್ಮ ಅಂದ್ರೆ ಇದೇ ಅಲ್ವೇ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

Viral Video: ಇನ್ ಸ್ಟೆಂಟ್ ಕರ್ಮ; ತೊಂದರೆ ಕೊಡಲು ಬಂದವನ ಸೊಂಟಕ್ಕೆ ಒದ್ದು ತಕ್ಕ ಪಾಠ ಕಲಿಸಿದ ಹಸು
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Apr 14, 2024 | 2:13 PM

ಕರ್ಮ ಎನ್ನುವುದು ಎಲ್ಲರನ್ನು ಕಾಡುತ್ತದೆ. ಯಾರನ್ನೂ ಬಿಡುವುದಿಲ್ಲ, ಇಂದಲ್ಲದಿದ್ದರೂ ನಾಳೆಯಾದರೂ ಇದರ ಪ್ರತಿಫಲ ಕಾಣುತ್ತದೆ. ಹೀಗೆ ನಾವು ಮಾಡಿದ ಒಳ್ಳೆಯ ಮತ್ತು ಕೆಟ್ಟ ಕೆಲಸಗಳ ಪ್ರತಿಫಲ ನಮಗೆ ಸಿಕ್ಕೇ ಸಿಗುತ್ತದೆ ಎಂದು ಕರ್ಮ ಎಂಬ ಕಾನ್ಸೆಪ್ಟ್ ಅನ್ನು ಬಹುತೇಕ ಹೆಚ್ಚಿನವರು ನಂಬುತ್ತಾರೆ. ಇನ್ನೂ ಅದೆಷ್ಟೋ ಜನರು ಇನ್ಸ್ಟೆಂಟ್ ಕರ್ಮವನ್ನು ನಂಬುತ್ತಾರೆ.ಇದಕ್ಕೆ ಸೂಕ್ತ ಉದಾಹರಣೆಯೆಂಬಂತೆ ಇಲ್ಲೊಂದು ವಿಡಿಯೋ ವೈರಲ್ ಆಗಿದ್ದು, ಹಸುವೊಂದು ತನಗೆ ತೊಂದರೆ ಕೊಡಲು ಬಂದ ಯುವಕನ ಸೊಂಟಕ್ಕೆ ಒದ್ದು, ತಕ್ಕ ಪಾಠ ಕಲಿಸಿದೆ. ಇದೆಲ್ಲವೂ ಕರ್ಮದ ಫಲ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಈ ವೈರಲ್ ವಿಡಿಯೋವನ್ನು @gharkekalesh ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಇನ್ಸ್ಟೆಂಟ್ ಕರ್ಮ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ. ವೈರಲ್ ವಿಡಿಯೋದಲ್ಲಿ ರಾತ್ರಿ ಹೊತ್ತಲ್ಲಿ ಒಂದಷ್ಟು ಪೋಲಿ ಹುಡುಗರು ಹಾಡನ್ನು ಹಾಡುತ್ತಾ ಹಸುಗಳ ಹತ್ತಿರ ಬರುವಂತಹ ದೃಶ್ಯವನ್ನು ಕಾಣಬಹುದು. ಅದರಲ್ಲಿದ್ದ ಯುವಕನೊಬ್ಬ ಹಸುವಿನ ಕತ್ತನ್ನು ಹಿಡಿದು ಅದಕ್ಕೆ ತೊಂದರೆ ಕೊಡಲು ಹೋಗಿದ್ದು, ಇದರಿಂದ ಕೋಪಗೊಂಡ ಆ ಹಸು ಆತನ ಸೊಂಟಕ್ಕೆ ಒದ್ದು ತಕ್ಕ ಪಾಠ ಕಲಿಸಿದೆ.

ಇದನ್ನೂ ಓದಿ: ವಿಚಿತ್ರ ನಂಬಿಕೆ; ತಮ್ಮ ಇಚ್ಛೆಗೆ ತಕ್ಕ ಗಂಡ ಸಿಗಲು ಯುವತಿಯರು ಇಲ್ಲಿ ಬ್ರಾ ನೇತು ಹಾಕಿ ಹೋಗುತ್ತಾರೆ!

ಏಪ್ರಿಲ್ 11 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2.8 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಇನ್ಸ್ಟೆಂಟ್ ಕರ್ಮ ಅಂದ್ರೆ ಇದೇ ಅಲ್ವೇ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್