ಆಸ್ಪತ್ರೆಯ ಬಿಲ್​​ ಪಾವತಿಸಲಾಗದೇ ಪತ್ನಿಯನ್ನೇ ಕೊಂದ ಪತಿ

ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ ದಿನದಿಂದ ಆರ್ಥಿಕವಾಗಿ ಕಷ್ಟದಲ್ಲಿದ್ದೇನೆ ಹಾಗೂ ಮಾನಸಿಕವಾಗಿ ನೊಂದಿದ್ದೇನೆ. ಈ ಕಾರಣದಿಂದಲೇ ತನ್ನ ಪತ್ನಿಯನ್ನು ಕೊಲ್ಲಲು ನಿರ್ಧರಿಸಿದೆ ಎಂದು ಪತಿ ಪೊಲೀಸರ ಮುಂದೆ ಒಪ್ಪಿಕೊಂಡಿರುವುದನ್ನು ಫಾಕ್ಸ್ ವರದಿ ಮಾಡಿದೆ.

ಆಸ್ಪತ್ರೆಯ ಬಿಲ್​​ ಪಾವತಿಸಲಾಗದೇ ಪತ್ನಿಯನ್ನೇ ಕೊಂದ ಪತಿ
ಸಾಂದರ್ಭಿಕ ಚಿತ್ರ
Follow us
ಅಕ್ಷತಾ ವರ್ಕಾಡಿ
|

Updated on:May 07, 2024 | 4:37 PM

ಅಮೆರಿಕಾ: ಐಸಿಯುನಲ್ಲಿ ಮಲಗಿರುವ ತನ್ನ ಪತ್ನಿಯನ್ನೇ ಪತಿಯೊಬ್ಬ ಕತ್ತು ಹಿಸುಕಿ ಕೊಂದಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ. ಆರೋಪಿ ರೋನಿ ವಿಗ್ಸ್ ಅನ್ನು ಪೊಲೀಸರು ಬಂಧಿಸಿದ್ದು, ಈ ವೇಳೆ ಆಸ್ಪತ್ರೆಯ ಬಿಲ್​​ ಪಾವತಿಸಲು ದುಡ್ಡಿಲ್ಲದ ಕಾರಣ ಪತ್ನಿಯನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಮಿಸೌರಿಯ ಇಂಡಿಪೆಂಡೆನ್ಸ್‌ನಲ್ಲಿರುವ ಸೆಂಟರ್‌ಪಾಯಿಂಟ್ ಮೆಡಿಕಲ್ ಸೆಂಟರ್‌ನಲ್ಲಿ ಶುಕ್ರವಾರ ರಾತ್ರಿ 11:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಐಸಿಯುನಲ್ಲಿದ್ದ ರೋಗಿಯನ್ನು ಕೊಲ್ಲಲು ಪ್ರಯತ್ನಿಸಿರುವುದನ್ನು ಗಮನಿಸಿದ ಆಸ್ಪತ್ರೆಯ ಸಿಬ್ಬಂದಿಗಳು ತಡೆಯಲು ಪ್ರಯತ್ನಿಸಿದ್ದಾರೆ. ಆದರೆ ಅದಾಗಲೇ ಮಹಿಳೆಯ ಪ್ರಾಣ ಪಕ್ಷಿ ಹಾರಿ ಹೋಗಿದ್ದು, ಆಸ್ಪತ್ರೆಯ ಸಿಬ್ಬಂದಿ ಪೊಲೀಸ್ ಅಧಿಕಾರಿಯನ್ನು ಸಂಪರ್ಕಿಸಿ ಮೃತ ಮಹಿಳೆಯ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ವಿಧವೆಯರ ಗ್ರಾಮ;ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರೆ!

ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ ದಿನದಿಂದ ಆರ್ಥಿಕವಾಗಿ ಕಷ್ಟದಲ್ಲಿದ್ದೇನೆ ಹಾಗೂ ಮಾನಸಿಕವಾಗಿ ನೊಂದಿದ್ದೇನೆ. ಈ ಕಾರಣದಿಂದಲೇ ತನ್ನ ಪತ್ನಿಯನ್ನು ಕೊಲ್ಲಲು ನಿರ್ಧರಿಸಿದೆ ಎಂದು ಪತಿ ಪೊಲೀಸರ ಮುಂದೆ ಒಪ್ಪಿಕೊಂಡಿರುವುದಾಗಿ ಫಾಕ್ಸ್ ವರದಿ ಮಾಡಿದೆ. ವಿಗ್ಸ್ ಈ ಹಿಂದೆ ಹಿಂದಿನ ಆಸ್ಪತ್ರೆಯಲ್ಲೂ ಅವಳನ್ನು ಎರಡು ಬಾರಿ ಕೊಲ್ಲಲು ಪ್ರಯತ್ನಿಸಿದ್ದ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:37 pm, Tue, 7 May 24

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ