Video Viral: ರೀಲ್​ಗೆ ಪೋಸ್​​ ನೀಡಲು ಹೋಗಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಬೈಕ್​​ ಸವಾರ ಸಾವು

ಬೈಕ್​ನ ಹಿಂದೆ ಕುಳಿತಿರುವಾತ ರೀಲ್​​​ ಮಾಡಲು ಪ್ರಾರಂಭಿಸುತ್ತಿದ್ದಂತೆ​ ಚಾಲಕ ಹಿಂದಕ್ಕೆ ತಿರುಗಿ ಪೋಸ್​​ ನೀಡಲು ಪ್ರಾರಂಭಿಸಿದ್ದಾನೆ. ಇದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ್ದು, ಬೈಕ್​​​ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ವರದಿಗಳ ಪ್ರಕಾರ, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

Video Viral: ರೀಲ್​ಗೆ ಪೋಸ್​​ ನೀಡಲು ಹೋಗಿ ಡಿವೈಡರ್‌ಗೆ ಢಿಕ್ಕಿ ಹೊಡೆದು  ಬೈಕ್​​ ಸವಾರ ಸಾವು
ರೀಲ್​ಗೆ ಪೋಸ್​​ ನೀಡಲು ಹೋಗಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಬೈಕ್​​ ಸವಾರ ಸಾವು
Follow us
ಅಕ್ಷತಾ ವರ್ಕಾಡಿ
|

Updated on:Jul 06, 2024 | 5:20 PM

ಮಹಾರಾಷ್ಟ್ರ: ರೀಲ್ಸ್​ಗೆ ಪೋಸ್​​ ನೀಡಲು ಹೋಗಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬೈಕ್​​ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಮಹಾರಾಷ್ಟ್ರದ ಧುಲೆ-ಸೋಲಾಪುರ ಹೆದ್ದಾರಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಬೈಕಿನ ಹಿಂದಿನ ಸೀಟಿನಲ್ಲಿ ಕುಳಿತ್ತಿದ್ದ ಗೆಳೆಯನ ರೀಲ್ಸ್​​​ಗೆ ಚಾಲಕ ಪೋಸ್​​ ಕೊಡಲು ಹೋಗಿದ್ದಾನೆ. ಈ ವೇಳೆ ಗಾಡಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ಇಬ್ಬರು ಗೆಳೆಯರು ಹೆಲ್ಮೆಟ್ ಇಲ್ಲದೆ ಹೆದ್ದಾರಿಯಲ್ಲಿ ರೈಡ್​​​ ಹೋಗುತ್ತಿರುವುದನ್ನು ಕಾಣಬಹುದು. ಹಿಂದೆ ಕುಳಿತಿರುವಾತ ರೀಲ್ಸ್​​ ಮಾಡಲು ಪ್ರಾರಂಭಿಸುತ್ತಿದ್ದಂತೆ ಬೈಕ್​ ಚಾಲಕ ಹಿಂದಕ್ಕೆ ತಿರುಗಿ ಪೋಸ್​​ ನೀಡಲು ಪ್ರಾರಂಭಿಸಿದ್ದಾನೆ. ಇದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ್ದು, ಬೈಕ್​​​ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಗಾಳಿಗೆ ಹಾರಿ ರಸ್ತೆಗೆ ಬಿದ್ದಿದ್ದಾರೆ. ವರದಿಗಳ ಪ್ರಕಾರ, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ವೈರಲ್​​  ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹಾಡು ಹಗಲೇ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಿತ್ತು ಪರಾರಿಯಾದ ಖದೀಮರು

@atuljmd123 ಎಂಬ ಟ್ವಿಟರ್​​ ಖಾತೆಯಲ್ಲಿ ಈ ಅಪಘಾತದ ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು ರೀಲ್ಸ್​​​ ಹುಚ್ಚು ಬಿಟ್ಟು ಬಿಡಿ ಎಂದು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Sat, 6 July 24

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ