ಮಹಾರಾಷ್ಟ್ರ: ರೀಲ್ಸ್ಗೆ ಪೋಸ್ ನೀಡಲು ಹೋಗಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಮಹಾರಾಷ್ಟ್ರದ ಧುಲೆ-ಸೋಲಾಪುರ ಹೆದ್ದಾರಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಬೈಕಿನ ಹಿಂದಿನ ಸೀಟಿನಲ್ಲಿ ಕುಳಿತ್ತಿದ್ದ ಗೆಳೆಯನ ರೀಲ್ಸ್ಗೆ ಚಾಲಕ ಪೋಸ್ ಕೊಡಲು ಹೋಗಿದ್ದಾನೆ. ಈ ವೇಳೆ ಗಾಡಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಇಬ್ಬರು ಗೆಳೆಯರು ಹೆಲ್ಮೆಟ್ ಇಲ್ಲದೆ ಹೆದ್ದಾರಿಯಲ್ಲಿ ರೈಡ್ ಹೋಗುತ್ತಿರುವುದನ್ನು ಕಾಣಬಹುದು. ಹಿಂದೆ ಕುಳಿತಿರುವಾತ ರೀಲ್ಸ್ ಮಾಡಲು ಪ್ರಾರಂಭಿಸುತ್ತಿದ್ದಂತೆ ಬೈಕ್ ಚಾಲಕ ಹಿಂದಕ್ಕೆ ತಿರುಗಿ ಪೋಸ್ ನೀಡಲು ಪ್ರಾರಂಭಿಸಿದ್ದಾನೆ. ಇದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ್ದು, ಬೈಕ್ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಗಾಳಿಗೆ ಹಾರಿ ರಸ್ತೆಗೆ ಬಿದ್ದಿದ್ದಾರೆ. ವರದಿಗಳ ಪ್ರಕಾರ, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
चलती बाइक पर रील बनाना दो युवकों को पड़ा महंगा..बाइक का हुआ एक्सीडेंट..बाइक चला रहे शख्स की हादसे में मौके पर ही मौत..जबकि रील बना रहा दूसरा शख्स गंभीर रुप से घायल..ये हादसा #Dhule–#Solapur हाईवे पर #Beed बाईपास पर हुआ..वीडियों शोशल मीडिया पर तेज़ी से हो रहा वायरल@indiatvnews pic.twitter.com/dG8mJm5Jbj
— Atul singh (@atuljmd123) July 6, 2024
ಇದನ್ನೂ ಓದಿ: ಹಾಡು ಹಗಲೇ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಿತ್ತು ಪರಾರಿಯಾದ ಖದೀಮರು
@atuljmd123 ಎಂಬ ಟ್ವಿಟರ್ ಖಾತೆಯಲ್ಲಿ ಈ ಅಪಘಾತದ ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು ರೀಲ್ಸ್ ಹುಚ್ಚು ಬಿಟ್ಟು ಬಿಡಿ ಎಂದು ಕಾಮೆಂಟ್ ಮಾಡಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:19 pm, Sat, 6 July 24