
ಉತ್ತರ ಪ್ರದೇಶ: ಕಾರಿನಲ್ಲಿ ಇಬ್ಬರು ಯುವತಿಯರ ಜೊತೆ ಯುವಕನೊಬ್ಬ ಸರಸದಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಇನ್ನೋವಾ ಕಾರಿನೊಳಗೆ ಇಬ್ಬರು ಮಹಿಳೆಯರನ್ನು ತಬ್ಬಿಕೊಳ್ಳುತ್ತಾ ಯುವಕ ಎಂಜಾಯ್ ಮಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಈ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಪ್ರದೇಶದ ಲಕ್ನೋ-ಅಯೋಧ್ಯೆ ಎನ್ಎಚ್ 27 ರಲ್ಲಿ ನಡೆದಿದೆ.
ಸಿಟಿ ಕೊಟ್ವಾಲಿ ಪ್ರದೇಶದ ವ್ಯಾಪ್ತಿಯಲ್ಲಿರುವ ಸಫೇದಾಬಾದ್ನಲ್ಲಿರುವ ಕಾಳಿಕಾ ಹವೇಲಿ ರೆಸ್ಟೋರೆಂಟ್ನ ಪಾರ್ಕಿಂಗ್ ಪ್ರದೇಶದಲ್ಲಿ ಇನ್ನೋವಾ ಕಾರಿನೊಳಗಿನ ಯುವಕನ ಸರಸ ಸಲ್ಲಾಪದ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್ ಫೋನ್ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಇದನ್ನೂ ಓದಿ: ವರದಕ್ಷಿಣೆಗಾಗಿ ಹೆಂಡತಿಯ ಮರ್ಮಾಂಗದೊಳಗೆ ಲಟ್ಟಣಿಗೆ ತುರುಕಿ ಹಿಂಸಿಸಿ ಕೊಂದ ಗಂಡ
@Nishantjournali ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಆಗಸ್ಟ್ 12ರಂದು ಹಂಚಿಕೊಂಡಿರುವ ಈ ವಿಡಿಯೋ ಎರಡೇ ದಿನದಲ್ಲಿ 6ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಈ ವೈರಲ್ ವಿಡಿಯೊಗೆ ಪ್ರತಿಕ್ರಿಯಿಸಿದ ಬಾರಾಬಂಕಿ ಪೊಲೀಸರು ಎನ್ಎಚ್ -27ರ ರೆಸ್ಟೋರೆಂಟ್ ಮುಂದೆ ಈ ಘಟನೆ ನಡೆದಿದೆ. ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದೃಢಪಡಿಸಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:56 am, Wed, 14 August 24