Viral Video: ಮೂರು ನಾಗರ ಹಾವುಗಳೊಂದಿಗೆ ಯುವಕನ ಸಾಹಸ: ಸಿಟ್ಟಿಗೆದ್ದು ಕಚ್ಚಿದ ಹಾವು

ಇಲ್ಲೊಬ್ಬ ಯುವಕ ಮೂರು ನಾಗರಹಾವಿನೊಂದಿಗೆ ಆಟವಾಡಿದ್ದಾನೆ. ಕೊನೆಗೆ ಒಂದು ಹಾವು ಆತನ ಕಾಲಿಗೆ ಕಚ್ಚಿಕೊಂಡಿರುವ ಭಯಾನಕ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ

Viral Video: ಮೂರು ನಾಗರ ಹಾವುಗಳೊಂದಿಗೆ ಯುವಕನ ಸಾಹಸ: ಸಿಟ್ಟಿಗೆದ್ದು ಕಚ್ಚಿದ ಹಾವು
ಯುವಕ
Follow us
TV9 Web
| Updated By: Pavitra Bhat Jigalemane

Updated on:Mar 17, 2022 | 1:04 PM

ನಾಗರ ಹಾವಿನೊಂದಿಗ ಆಟವೆಂದರೆ ಜೀವವನ್ನು ಪಣಕ್ಕಿಡುವ ಆಟ ಎಂದು ಹೇಳುತ್ತಾರೆ. ಇಲ್ಲೊಬ್ಬ ಯುವಕ ಮೂರು ನಾಗರಹಾವಿನೊಂದಿಗೆ ಆಟವಾಡಿದ್ದಾನೆ. ಕೊನೆಗೆ ಒಂದು ಹಾವು ಆತನ ಕಾಲಿಗೆ ಕಚ್ಚಿಕೊಂಡಿರುವ ಭಯಾನಕ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾಜ್ ಸಯೀದ್ ಎನ್ನುವ ಯುವಕ ಮೂರು ನಾಗರ ಹಾವುಗಳ ಎದುರು ಕುಳಿತು ಅವುಗಳೊಂದಿಗೆ ಆಟವಾಡಿದ್ದಾನೆ. ಟ್ವಿಟರ್​ನಲ್ಲಿ ಈ ಆತಂಕಕಾರಿ ವಿಡಿಯೋವನ್ನು ಐಎಫ್ಎ​ಸ್​ ಅಧಿಕಾರಿ ಸುಸಾಂತ್​ ನಂದ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ ಯುವಕ ಮೂರು ಹಾವುಗಳ ಎದುರು ಕುಳಿತು ಕೈಗಳನ್ನು ಆಡಿಸುತ್ತಾನೆ. ಅದಕ್ಕೆ ತಕ್ಕಂತೆ ಹಾವುಗಳು ಕುಣಿಯುತ್ತವೆ. ಅವುಗಳ ತಲೆಯನ್ನು ಮುಟ್ಟಿ ಹಾವುಗಳಿಗೆ ಕೋಪತರಿಸಿದ್ದಾನೆ. ಇದರಿಂದ ಇಂದು ಹಾವು ಹಾರಿ ಆತನ ಕಾಲಿಗೆ ಕಚ್ಚಿ ಹಿಡಿದಿದೆ. ಇದನ್ನು ನೋಡಿ ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ. ತಜ್ಞರು ಕೂಡ ಇದು ಅಪಾಯಕಾರಿ ಎಂದಿದ್ದಾರೆ.

ಸ್ನೇಕ್‌ಬೈಟ್ ಹೀಲಿಂಗ್ ಅಂಡ್ ಎಜುಕೇಶನ್ ಸೊಸೈಟಿಯ ಅಧ್ಯಕ್ಷೆ ಮತ್ತು ಸಂಸ್ಥಾಪಕಿ ಪ್ರಿಯಾಂಕಾ ಕದಮ್  ಫೇಸ್‌ಬುಕ್ ನಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದು ಸಯದ್ ಅವರನ್ನು ಹಾವು ಕಚ್ಚಿದ ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಗೆ ದಾಖಲಿಆದ ಸೈಯದದ ಅವರಿಗೆ 46 ಆ್ಯಂಟಿ ಬಯೋಟಿಕ್​ಗಳನ್ನು ನಿಡಲಾಗಿದೆ ಎಂದು ವರದಿ ತಿಳಿಸಿದೆ.

ಸೈಯದ್​ 20 ವರ್ಷದ ಯುವಕ. ಈತ ಹಾವಿನ ಬಗೆಗೆ ಹೆಚ್ಚು ಉತ್ಸಾಹಿಯಾಗಿದ್ದು, ತಮ್ಮ ತಪ್ಪಾದ ಸಾಹಸದ ಕಾರಣ ಹಾವಿನ ಕಡಿತಕ್ಕೆ ಒಳಗಾಗಿದ್ದಾರೆ. ಸದ್ಯ ಶಿರಸಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ. ಸದ್ಯ ವೈರಲ್​ ಆದ ಭಯಾನಕ ವಿಡಿಯೋ 22 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.

ಇದನ್ನೂ ಓದಿ:

ರಸ್ತೆ ಬದಿ ನಿಂತು ಕಚ್ಚಾ ಬಾದಾಮ್​ ಹಾಡಿಗೆ ಡ್ಯಾನ್ಸ್​ ಮಾಡಿದ ಮಹಿಳೆ: 8 ಮಿಲಿಯನ್​​ಗೂ ಅಧಿಕ ವೀಕ್ಷಣೆ ಪಡೆದ ವಿಡಿಯೋ

Published On - 12:08 pm, Thu, 17 March 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ