Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ರೋಡಲ್ಲಿ ಚೆಲ್ಲಿದ್ದ ಎಣ್ಣೆ ನೆಕ್ಕಿದ ಮದ್ಯಪ್ರಿಯ, ಈತ ಮಹಾನ್‌ ಕುಡುಕನೇ ಇರ್ಬೇಕು ನೋಡಿ…

ಕೆಲ ದಿನಗಳ ಹಿಂದೆ ವಶಪಡಿಸಿಕೊಂಡ ಮದ್ಯದ ಬಾಟಲಿಗಳನ್ನು ಪೊಲೀಸರು ನಾಶ ಮಾಡಲು ಮುಂದಾದ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಜನರೆಲ್ಲಾ ಮದ್ಯದ ಬಾಟಲಿಗಳನ್ನು ಎತ್ತಿಕೊಂಡು ಓಡಿದ ವಿಡಿಯೋವೊಂದು ಸಖತ್‌ ವೈರಲ್‌ ಆಗಿತ್ತು. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಮದ್ಯದ ಬಾಟಲಿಗಳನ್ನು ಪೊಲೀಸರು ಬುಲ್ಡೋಝರ್‌ ಬಳಸಿ ನಾಶ ಮಾಡಿದಾಗ ಕುಡುಕನೊಬ್ಬ ಅಲ್ಲಿ ನೆಲದಲ್ಲಿ ಚೆಲ್ಲಿದ್ದ ಎಣ್ಣೆಯನ್ನೇ ನೆಕ್ಕಿ ಕುಡಿದಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ರೋಡಲ್ಲಿ ಚೆಲ್ಲಿದ್ದ ಎಣ್ಣೆ ನೆಕ್ಕಿದ ಮದ್ಯಪ್ರಿಯ, ಈತ ಮಹಾನ್‌ ಕುಡುಕನೇ ಇರ್ಬೇಕು ನೋಡಿ…
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 23, 2024 | 12:59 PM

ಅದೇನೋ ಗೊತ್ತಿಲ್ಲ ಈ ಕುಡುಕ ಮಹಾಶಯರಿಗೆ ಮದ್ಯ ಎಂದ್ರೆ ಎಲ್ಲಿಲ್ಲದ ಪ್ರೀತಿ. ಇವರುಗಳು ಎಣ್ಣೆಗಾಗಿ ಪ್ರಾಣವನ್ನೂ ಬೇಕಾದ್ರೂ ಬಿಡ್ತಾರೆ. ಹೀಗೆ ಎಣ್ಣೆಗಾಗಿ ಕಸರತ್ತು ಮಾಡುವವರ ಸುದ್ದಿಗಳು ಆಗಾಗ್ಗೆ ಕೇಳಿಬರುತ್ತವೆ. ಕೆಲ ದಿನಗಳ ಹಿಂದೆ ವಶಪಡಿಸಿಕೊಂಡ ಮದ್ಯದ ಬಾಟಲಿಗಳನ್ನು ಪೊಲೀಸರು ನಾಶ ಮಾಡಲು ಮುಂದಾದ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಜನರೆಲ್ಲಾ ಮದ್ಯದ ಬಾಟಲಿಗಳನ್ನು ಎತ್ತಿಕೊಂಡು ಓಡಿದ ಘಟನೆಯೊಂದು ನಡೆದಿತ್ತು. ಇದೀಗ ಅದೇ ರೀತಿಯ ಘಟನೆಯೊಂದು ನಡೆದಿದ್ದು, ಮದ್ಯ ನಾಶ ಮಾಡುವುದನ್ನು ಕಣ್ಣಾರೆ ಕಂಡ ಕುಡುಕನೊಬ್ಬ ಅಯ್ಯೋ ಎಣ್ಣೆ ಸುಮ್ನೆ ವೇಸ್ಟ್‌ ಆಯ್ತಲ್ಲಾ ಎಂದು ಹೊಟ್ಟೆ ಉರಿ ತಾಳಲಾರದೆ ಅಲ್ಲೇ ನೆಲದಲ್ಲಿ ಚೆಲ್ಲಿದ್ದ ಎಣ್ಣೆಯನ್ನು ನೆಕ್ಕಿ ಕುಡಿದಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ರಿತೇಶ್‌ ಪಾಲ್‌ (PalsSkit) ಎಂಬವರು ಈ ಕುರಿತ ವಿಡಿಯೋವನ್ನು ಸೋಷಿಯಲ್‌ ಮೀಡಿಯಾ ಪ್ಲಾಟ್‌ಫಾರ್ಮ್‌ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, “ಜಿವನದಲ್ಲಿ ಇಷ್ಟು ಸಮರ್ಪಣೆ ಇರ್ಬೇಕು ನೋಡಿ” ಎಂಬ ತಮಾಷೆಯ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಮದ್ಯ ನಾಶದ ಮೇಲೆ ಕುಡಕನೊಬ್ಬ ನೆಲದಲ್ಲಿ ಚೆಲ್ಲಿದ್ದ ಎಣ್ಣೆಯನ್ನು ನೆಕ್ಕುತ್ತಿರುವ ದೃಶ್ಯವನ್ನು ಕಾಣಬಹುದು. ಪೊಲೀಸರು ವಶಪಡಿಸಿಕೊಂಡ ಮದ್ಯವನ್ನು ಸಾಲಾಗಿ ಜೋಡಿಸಿ ಲ್ಡೋಝರ್‌ ಸಹಾಯದಿಂದ ಆ ಮದ್ಯದ ಬಾಟಲಿಗಳನ್ನು ನಾಶಪಡಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ಕುಡುಕ ಮಹಾಶಯನೊಬ್ಬ ಅಯ್ಯೋ ದೇವ್ರೆ ಯಾಕಪ್ಪಾ ಇವ್ರು ಇಷ್ಟು ಎಣ್ಣೆಯನ್ನು ವೇಸ್ಟ್‌ ಮಾಡ್ತಿದ್ದಾರೆ ಎನ್ನುತ್ತಾ ಬಗ್ಗಿ ಕುಳಿತು ನೆಲದಲ್ಲಿ ಚೆಲ್ಲಿದ್ದ ಎಣ್ಣೆಯನ್ನೇ ನೆಕ್ಕಿ ಕುಡಿದಿದ್ದಾನೆ. ನಂತರ ಅಲ್ಲಿಗೆ ಬಂದ ಪೊಲೀಸರೊಬ್ಬರು ಆತನನ್ನು ಓಡಿಸಿದ್ದಾರೆ.

ಇದನ್ನೂಓದಿ: ಪ್ಲಾಸ್ಟಿಕ್‌ ಚೀಲದಲ್ಲಿ ಮೂತ್ರ ವಿಸರ್ಜನೆ ಮಾಡಿ, ಕೈ ತೊಳೆಯದೆ ಹಣ್ಣು ಮಾರುತ್ತಿದ್ದ ಆಸಾಮಿಯ ಬಂಧನ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಸೆಪ್ಟೆಂಬರ್‌ 18 ರಂದು ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಡೆಡಿಕೇಶನ್‌ ಅಂದ್ರೆ ಹಿಂಗ್‌ ಇರ್ಬೇಕು ನೋಡಿʼ ಎಂಬ ತಮಾಷೆಯ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈ ದೃಶ್ಯ ನಿಜಕ್ಕೂ ತುಂಬಾ ಫನ್ನಿಯಾಗಿದೆʼ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Mon, 23 September 24

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !