AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಇದು ರಸ್ತೆಯಲ್ಲ, ಈಜುಕೊಳ; ಮಳೆಗೆ ನಡು ರಸ್ತೆಯಲ್ಲೇ ಈಜಾಡಿದ ವ್ಯಕ್ತಿ

ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡಿದ್ದು, ಜನರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿರುವುದನ್ನು ಕಾಣಬಹುದು. ಆದರೆ ಒಬ್ಬ ವ್ಯಕ್ತಿ ಮಾತ್ರ ನಡು ರಸ್ತೆಯಲ್ಲೇ ಈಜುತ್ತಾ ಮಳೆಯನ್ನು ಆನಂದಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಪುಣೆಯ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

Video Viral: ಇದು ರಸ್ತೆಯಲ್ಲ, ಈಜುಕೊಳ; ಮಳೆಗೆ ನಡು ರಸ್ತೆಯಲ್ಲೇ ಈಜಾಡಿದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on: Jun 14, 2024 | 12:22 PM

Share

ಪುಣೆ: ಕಳೆದ ಕೆಲವು ದಿನಗಳಿಂದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಳೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ. ಇದೀಗ ಅಂತದ್ದೇ ವಿಡಿಯೋವೊಂದು ವೈರಲ್​ ಆಗಿದ್ದು, ವಿಡಿಯೋದಲ್ಲಿ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಮಳೆ ನೀರಿನಲ್ಲಿ ಈಜಾಡುತ್ತಾ ಖುಷಿ ಪಡುತ್ತಿರುವುದು ಸೆರೆಯಾಗಿದೆ. ವಿಶೇಷವೆಂದರೆ ಈತ ಈಜುವುದನ್ನು ಕಂಡು ಜನ ಬೆರಗಾಗಿ ರಸ್ತೆಯಲ್ಲಿ ನಿಂತಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ಜನಪ್ರಿಯವಾಗಿದೆ.

ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡಿದ್ದು, ಜನರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿರುವುದನ್ನು ಕಾಣಬಹುದು. ಆದರೆ ಒಬ್ಬ ವ್ಯಕ್ತಿ ನಡು ರಸ್ತೆಯಲ್ಲೇ ಈಜುತ್ತಾ ಮಳೆಯನ್ನು ಆನಂದಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಪುಣೆಯ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮಳೆಗೆ ನಡುರಸ್ತೆಯಲ್ಲೇ ಪ್ರೇಮಿಗಳ ರೋಮ್ಯಾಂಟಿಕ್ ಡ್ಯಾನ್ಸ್; ವಿಡಿಯೋ ವೈರಲ್​​

@purankumawat76 ಎಂಬ ಟ್ವಿಟರ್​ ಖಾತೆಯಲ್ಲಿ ಜೂನ್​​ 08ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ ವಿಡಿಯೋ 14 ಸಾವಿರಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More