ಪುಣೆ: ಕಳೆದ ಕೆಲವು ದಿನಗಳಿಂದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಳೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ. ಇದೀಗ ಅಂತದ್ದೇ ವಿಡಿಯೋವೊಂದು ವೈರಲ್ ಆಗಿದ್ದು, ವಿಡಿಯೋದಲ್ಲಿ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಮಳೆ ನೀರಿನಲ್ಲಿ ಈಜಾಡುತ್ತಾ ಖುಷಿ ಪಡುತ್ತಿರುವುದು ಸೆರೆಯಾಗಿದೆ. ವಿಶೇಷವೆಂದರೆ ಈತ ಈಜುವುದನ್ನು ಕಂಡು ಜನ ಬೆರಗಾಗಿ ರಸ್ತೆಯಲ್ಲಿ ನಿಂತಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ಜನಪ್ರಿಯವಾಗಿದೆ.
ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡಿದ್ದು, ಜನರು ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿರುವುದನ್ನು ಕಾಣಬಹುದು. ಆದರೆ ಒಬ್ಬ ವ್ಯಕ್ತಿ ನಡು ರಸ್ತೆಯಲ್ಲೇ ಈಜುತ್ತಾ ಮಳೆಯನ್ನು ಆನಂದಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಪುಣೆಯ ರೈಲ್ವೆ ನಿಲ್ದಾಣದ ಬಳಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
Is the weather torrential in #Pune ? No Macha we’re chilling.
Location: Pune railway station. #Punerains #NeetUG24Controversy pic.twitter.com/51HCO9xjMI— Puran मेवाड़ी (@purankumawat76) June 8, 2024
ಇದನ್ನೂ ಓದಿ: ಮಳೆಗೆ ನಡುರಸ್ತೆಯಲ್ಲೇ ಪ್ರೇಮಿಗಳ ರೋಮ್ಯಾಂಟಿಕ್ ಡ್ಯಾನ್ಸ್; ವಿಡಿಯೋ ವೈರಲ್
@purankumawat76 ಎಂಬ ಟ್ವಿಟರ್ ಖಾತೆಯಲ್ಲಿ ಜೂನ್ 08ರಂದು ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ ವಿಡಿಯೋ 14 ಸಾವಿರಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ.
ಮತ್ತಷ್ಟು ವೈರಲ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: