Viral: ನಾಲಿಗೆಯ ಮೇಲೆ ಲವರ್‌ ಹೆಸರನ್ನು ಹಚ್ಚೆ ಹಾಕಿಸಿಕೊಂಡ ಯುವಕ

ತಾವು ಪ್ರೀತಿಸಿದ ಹುಡುಗಿ ಅಥವಾ ಹುಡುಗನ ಹೆಸರನ್ನು ಕೈ ಮೇಲೆ, ಎದೆ ಮೇಲೆ ಹಚ್ಚೆ ಹಾಕಿಸಿಕೊಳ್ಳುವವರನ್ನು ನೋಡಿರುತ್ತೀರಿ ಅಲ್ವಾ. ಆದ್ರೆ ಇಲ್ಲೊಬ್ಬ ಮಹಾನ್‌ ಪ್ರೇಮಿ ಸ್ವಲ್ಪ ಡಿಫರೆಂಟ್‌ ಆಗಿರ್ಲಿ ಅಂತ ತನ್ನ ಪ್ರಿಯತಮೆಯ ಹೆಸರನ್ನು ನಾಲಿಗೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಇದೆಂಥಾ ಲವ್‌ ಮಾರ್ರೆ ಎಂದು ನೆಟ್ಟಿಗರು ಪ್ರಶ್ನೆ ಕೇಳಿದ್ದಾರೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 23, 2024 | 4:38 PM

ಹೆಚ್ಚಿನವರು ತಮ್ಮ ಪ್ರೀತಿಪಾತ್ರರ ಅಥವಾ ತಮ್ಮ ನೆಚ್ಚಿನ ಹೀರೋಗಳ ಟ್ಯಾಟೂ ಹಾಕಿಸಿಕೊಳ್ಳುತ್ತಾರೆ. ಅದರಲ್ಲೂ ಈ ಯುವಕರು ತಾವು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುವಂತಹ ಹುಡುಗಿಯ ಹೆಸರನ್ನು ಎದೆ ಭಾಗದಲ್ಲಿ ಅಥವಾ ಕೈನಲ್ಲಿ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಇಂತಹ ಸಾಕಷ್ಟು ವಿಡಿಯೊಗಳು ಆಗೊಮ್ಮೆ ಈಗೊಮ್ಮೆ ಕಾಣಸಿಗುತ್ತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್‌ ಆಗಿದ್ದು, ಮಹಾನ್‌ ಪ್ರೇಮಿಯೊಬ್ಬ ಸ್ವಲ್ಪ ಡಿಫರೆಂಟ್‌ ಆಗಿ ಟ್ಯಾಟೂ ಹಾಕಿಸಿಕೊಳ್ಳೋಣ ಎನ್ನುತ್ತಾ ತನ್ನ ಗರ್ಲ್‌ಫ್ರೆಂಡ್‌ ಹೆಸರನ್ನು ನಾಲಿಗೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ. ಈ ದೃಶ್ಯವನ್ನು ಕಂಡು ಇದೆಂಥಾ ಲವ್‌ ಮಾರ್ರೆ ಎಂದು ನೋಡುಗರು ಬಾಯಿ ಮೇಲೆ ಬೆರಳಿಟ್ಟುಕೊಂಡಿದ್ದಾರೆ.

ತಾವು ಪ್ರೀತಿಸುವ ಜೀವದ ಹೆಸರನ್ನು ಎದೆ ಮೇಲೆ ಹಚ್ಚೆ ಹಾಕಿಸಿಕೊಳ್ಳುವವರ ಮಧ್ಯೆ ಇಲ್ಲೊಬ್ಬ ಭಂಡ ಧೈರ್ಯದ ಯುವಕ ತನ್ನ ಲವರ್‌ ಹೆಸರನ್ನು ನಾಲಿಗೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ. ಟ್ಯಾಟೂ ಆರ್ಟಿಸ್ಟ್‌ ಅಭಿಷೇಕ್‌ (abhishek_ahirwar6934) ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಯುವಕನೊಬ್ಬ ತನ್ನ ನಾಲಿಗೆಯ ಮೇಲೆ ನಿಖಿತಾ ಎಂದು ಪ್ರಿಯತಮೆಯ ಹೆಸರನ್ನು ಹಚ್ಚೆ ಹಾಕಿಸಿಕೊಂಡಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಮರುಭೂಮಿಯಲ್ಲಿ ಸಿಕ್ಕಿಹಾಕಿಕೊಂಡು ಕೊನೆಗೆ ಉಬರ್‌ನಲ್ಲಿ ಒಂಟೆ ಟ್ಯಾಕ್ಸಿ ಬುಕ್‌ ಮಾಡಿದ ಮಹಿಳೆ

ಅಕ್ಟೋಬರ್‌ 16 ರಂದು ಹಂಚಿಕೊಳ್ಳಲಾದ ಈ ವಿಡಿಯೋ 29.5 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಎಂತೆಥಾ ಹುಚ್ಚು ಜನಗಳಿದ್ದರಪ್ಪಾʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದಕ್ಕೆ ಹೇಳೋದು ಶಿಕ್ಷಣ ತುಂಬಾನೇ ಮುಖ್ಯ ಎಂದುʼ ಅನ್ನೋ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ಇದೆಂಥಾ ಲವ್‌ ಮಾರ್ರೆ ಎಂದು ಕೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಮಾತಿಗೆ ಅಡ್ಡಿಪಡಿಸುತ್ತಿದ್ದ ರಾಯರೆಡ್ಡಿಯವರಿಗೆ ಸುಮ್ಮನಿರಲು ಹೇಳಿದ ಯತ್ನಾಳ್
ಮಾತಿಗೆ ಅಡ್ಡಿಪಡಿಸುತ್ತಿದ್ದ ರಾಯರೆಡ್ಡಿಯವರಿಗೆ ಸುಮ್ಮನಿರಲು ಹೇಳಿದ ಯತ್ನಾಳ್
ಗೋಡೆ ಬಳಿ ಹೋಗಿ ಅಳುತ್ತಿರುವ ಹನುಮಂತ; ಬಿಗ್ ಬಾಸ್​ ಮನೆಯಲ್ಲಿ ಏನಾಯ್ತು?
ಗೋಡೆ ಬಳಿ ಹೋಗಿ ಅಳುತ್ತಿರುವ ಹನುಮಂತ; ಬಿಗ್ ಬಾಸ್​ ಮನೆಯಲ್ಲಿ ಏನಾಯ್ತು?
ಮಂತ್ರಿಗಳಿಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಶಾಸಕರು ನಿಲ್ಲೋದ್ಯಾಕೆ? ಯತ್ನಾ
ಮಂತ್ರಿಗಳಿಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಶಾಸಕರು ನಿಲ್ಲೋದ್ಯಾಕೆ? ಯತ್ನಾ
ವಿರೋಧಫಕ್ಷದವರು ಸಭಾತ್ಯಾಗ ಮಾಡೋದು ವಾಡಿಕೆ, ಆದರೆ ಇಲ್ಲಿ ಸಿಎಂ!
ವಿರೋಧಫಕ್ಷದವರು ಸಭಾತ್ಯಾಗ ಮಾಡೋದು ವಾಡಿಕೆ, ಆದರೆ ಇಲ್ಲಿ ಸಿಎಂ!
ಎಲ್ಲರ ಆಟಕ್ಕೆ ಅಡ್ಡಗಾಲು ಹಾಕಿದ ಮಂಜು, ಗೌತಮಿ ಫುಲ್ ಗರಂ
ಎಲ್ಲರ ಆಟಕ್ಕೆ ಅಡ್ಡಗಾಲು ಹಾಕಿದ ಮಂಜು, ಗೌತಮಿ ಫುಲ್ ಗರಂ
ಸಿಎಂ ಕರೆದಿರುವ ವಿಷಯ ಹೇಳಿದಾಗ ಸಿಸಿ ಪಾಟೀಲ್ ಕುಂಟುನೆಪ ಹೇಳಿದರು: ಸಚಿವೆ
ಸಿಎಂ ಕರೆದಿರುವ ವಿಷಯ ಹೇಳಿದಾಗ ಸಿಸಿ ಪಾಟೀಲ್ ಕುಂಟುನೆಪ ಹೇಳಿದರು: ಸಚಿವೆ
ಸ್ವಾಮೀಜಿ ಬಿಜೆಪಿಯವರಾ ಅಂತ ಕೇಳುತ್ತಿರೋದು ಹಾಸ್ಯಾಸ್ಪದ: ಅಶೋಕ
ಸ್ವಾಮೀಜಿ ಬಿಜೆಪಿಯವರಾ ಅಂತ ಕೇಳುತ್ತಿರೋದು ಹಾಸ್ಯಾಸ್ಪದ: ಅಶೋಕ
ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರ ನಡೆಸಿಕೊಟ್ಟ ರೀತಿ ಅಭಿನಂದನೀಯ: ವಿಶ್ವನಾಥ್
ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರ ನಡೆಸಿಕೊಟ್ಟ ರೀತಿ ಅಭಿನಂದನೀಯ: ವಿಶ್ವನಾಥ್
Video: ಹೆದ್ದಾರಿಯಲ್ಲಿ ವಾಹನಗಳ ಮೇಲೆ ಅಪ್ಪಳಿಸಿದ ವಿಮಾನ
Video: ಹೆದ್ದಾರಿಯಲ್ಲಿ ವಾಹನಗಳ ಮೇಲೆ ಅಪ್ಪಳಿಸಿದ ವಿಮಾನ