AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ಗಂಭೀರ ಸ್ಥಿತಿಯಲ್ಲಿದ್ದ ಕೋತಿಗೆ ಉಸಿರು ನೀಡಿ ಪ್ರಾಣ ಉಳಿಸಿದ ಕಾರು ಚಾಲಕ; ವಿಡಿಯೋ ವೈರಲ್​

ಈ ವಿಡಿಯೋದಲ್ಲಿ ಪ್ರಭು ಎಂಬ ವ್ಯಕ್ತಿ ಕೋತಿಯ ಹೃದಯವನ್ನು ಪಂಪ್ ಮಾಡಲು ಪ್ರಾರಂಭಿಸಿದನ್ನು ಮತ್ತು ಕೋತಿಯ ಬಾಯಿಯ ಮೂಲಕ ಉಸಿರು ನೀಡಿದ್ದನ್ನು ಗಮನಿಸಬಹುದು.

Viral video: ಗಂಭೀರ ಸ್ಥಿತಿಯಲ್ಲಿದ್ದ ಕೋತಿಗೆ ಉಸಿರು ನೀಡಿ ಪ್ರಾಣ ಉಳಿಸಿದ ಕಾರು ಚಾಲಕ; ವಿಡಿಯೋ ವೈರಲ್​
ಕೋತಿ ರಕ್ಷಣೆಯಲ್ಲಿ ನಿರತರಾಗಿರುವ ವ್ಯಕ್ತಿ
TV9 Web
| Edited By: |

Updated on:Dec 14, 2021 | 12:45 PM

Share

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಒಂದಿಲ್ಲಾ ಒಂದು ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತದೆ. ಸದ್ಯ ವೈರಲ್ ಆಗಿರುವ ವಿಡಿಯೋ ಪ್ರಾಣಿ ಜತೆಗಿನ ನಂಟನ್ನು ವಿವರಿಸಿ ಹೇಳುವಂತಿದೆ. ಗಾಯಗೊಂಡ ಕೋತಿಯನ್ನು (Monkey) ಗಮನಿಸಿದ ವ್ಯಕ್ತಿಯೊಬ್ಬರು ಅದಕ್ಕೆ ತುರ್ತು ಚಿಕಿತ್ಸೆಯನ್ನು ನೀಡಲು ಮುಂದಾಗಿರುವ ವಿಡಿಯೋ ಇದಾಗಿದೆ. ರಸ್ತೆಯಲ್ಲಿ ಅಪಘಾತಕ್ಕೊಳಗಾದ ಮನುಷ್ಯರನ್ನೇ ತಿರುಗಿ ನೋಡದ ಈ ಕಾಲಘಟ್ಟದಲ್ಲಿ ಕೋತಿಯ ಜೀವ ರಕ್ಷಣೆಗಾಗಿ ಅದಕ್ಕೆ ಉಸಿರು ಕೊಡುತ್ತಿರುವ ವಿಡಿಯೋ ಎಲ್ಲರನ್ನು ಆಕರ್ಷಿಸಿದೆ. ವೈರಲ್ ಆದ ಈ ವಿಡಿಯೋವನ್ನು ನೆಟ್ಟಿಗರು ಕೂಡ ಮೆಚ್ಚಿಕೊಂಡಿದ್ದಾರೆ.

ಡಿಸೆಂಬರ್ 10 ರಂದು ತಮಿಳುನಾಡಿನ ಪೆರಂಬಲೂರಿನಲ್ಲಿ ಈ ಘಟನೆ ನಡೆದಿದೆ. ಬೀದಿನಾಯಿಗಳ ದಾಳಿಗೆ ಗಾಯಗೊಂಡ ಕೋತಿಯನ್ನು ಪೆರಂಬಲೂರಿನ ಕುನ್ನಂ ತಾಲೂಕಿನ ಕಾರು ಚಾಲಕ ಎಂ. ಪ್ರಭು ರಕ್ಷಣೆ ಮಾಡಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಕೋತಿಯನ್ನು ಕಂಡ ಪ್ರಭು ಅದನ್ನು ಸ್ಥಳೀಯ ಪಶುವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದ್ದರು. ಆದರೆ ಕೋತಿಯ ನಾಡಿಮಿಡಿತ ಕಡಿಮೆಯಾಗುತ್ತಿರುವುದು ಗಮನಕ್ಕೆ ಬಂದಿದ್ದು, ನಿಂತ ಸ್ಥಳದಲ್ಲಿಯೇ ಉಸಿರು ನೀಡಿ ಪ್ರಥಮ ಚಿಕಿತ್ಸೆಗೆ ಮುಂದಾಗಿದ್ದಾರೆ.

ಈ ವಿಡಿಯೋದಲ್ಲಿ ಪ್ರಭು ಎಂಬ ವ್ಯಕ್ತಿ ಕೋತಿಯ ಹೃದಯವನ್ನು ಪಂಪ್ ಮಾಡಲು ಪ್ರಾರಂಭಿಸಿದನ್ನು ಮತ್ತು ಕೋತಿಯ ಬಾಯಿಯ ಮೂಲಕ ಆಮ್ಲಜನಕವನ್ನು ಅಥವಾ ಉಸಿರು ನೀಡಿದ್ದನ್ನು ಗಮನಿಸಬಹುದು. ಮಂಗ ಮತ್ತೆ ಉಸಿರಾಡಲು ಪ್ರಾರಂಭಿಸಿದ್ದು, ಜೀವ ರಕ್ಷಣೆಯ ಪ್ರಯತ್ನ ಫಲ ನೀಡಿದೆ ಎಂದು ಜೋರಾಗಿ ಕೂಗಿ ಖುಷಿಪಟ್ಟಿದ್ದಾರೆ. ಬಳಿಕ ಹತ್ತಿರದ ಸರ್ಕಾರಿ ಪಶುವೈದ್ಯರ ಬಳಿಗೆ ಕರೆದೊಯ್ದು ಕೋತಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ.

ಟ್ವಿಟರ್​ನಲ್ಲಿ ಈ ವಿಡಿಯೋವನ್ನು ಪೋಸ್ಟ್​ ಮಾಡಲಾಗಿದೆ. ಹೃದಯಸ್ಪರ್ಶಿ ಈ ವಿಡಿಯೋ ಕಂಡ ನೆಟ್ಟಿಗರು ಕಮೆಂಟ್ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಜನರು ದೇವರನ್ನು ಎಲ್ಲೆಲ್ಲಿ ಹುಡುಕುತ್ತಾರೆ. ನನಗೆ ಗೊತ್ತಿಲ್ಲ. ಅಲ್ಲಿ ನೋಡು ದೇವರು ನಿನ್ನ ಮುಂದೆ ಇದ್ದಾನೆ ಎಂದು ಒಬ್ಬರು ಕಮೆಂಟ್​ ಮಾಡಿದ್ದು, ಮತ್ತೊಬ್ಬರು ನಿಮ್ಮ ಪೋಷಕರು ತುಂಬಾ ಅದೃಷ್ಟವಂತರು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ಕಾಡು ಬೆಕ್ಕನ್ನು ಬೆದರಿಸಿದ ಪುಟ್ಟ ನಾಯಿ ಮರಿ; ವಿಡಿಯೋ ಆಯ್ತು ವೈರಲ್​

Viral Video: ಮ್ಯೂಸಿಕಲ್ ಚೇರ್ ಆಟದ ಕೊನೆಯಲ್ಲಿ ದೊಪ್ಪನೆ ಬಿದ್ದ ಯುವತಿ; ಕುರ್ಚಿ ಸತ್ತಿದೆ ಎಂದ ನೆಟ್ಟಿಗರು

Published On - 12:38 pm, Tue, 14 December 21

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ