Video: ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿಗಳ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿ
ವ್ಯಕ್ತಿಯೊಬ್ಬ ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿಗಳ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ವ್ಯಕ್ತಿ ಎಲ್ಲರ ಮುಂದೆಯೇ ಮೂತ್ರ ಮಾಡುತ್ತಿರುವುದನ್ನು ಕಾಣಬಹುದು.
ಮೆಟ್ರೋದಲ್ಲಿ ಹುಚ್ಚಾಟ ಆಡುವವರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಮೆಟ್ರೋದಲ್ಲಿ ಅಸಭ್ಯವಾಗಿ ನೃತ್ಯ ಮಾಡಿಕೊಂಡು ರೀಲ್ಸ್ ಮಾಡುವವರ ಸಾಕಷ್ಟು ವಿಡಿಯೋಗಳನ್ನು ನೀವು ಸೋಶಿಯಲ್ ಮೀಡಿಯಾದಲ್ಲಿ ನೋಡಿರುತ್ತೀರಿ. ಆದರೆ ಇಲ್ಲೊಬ್ಬ ಹಳಿಗಳ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಎಲ್ಲೆಡೆ ಭಾರೀ ವೈರಲ್ ಆಗುತ್ತಿದೆ. ಈ ಘಟನೆ ಜಪಾನ್ನ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
@aravind ಎಂಬ ಟ್ವಿಟರ್ ಖಾತೆಯಲ್ಲಿ ಅ. 15 ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಕೇವಲ ಮೂರು ದಿನಗಳಲ್ಲಿ ಒಂದು ಮಿಲಿಯನ್ ಅಂದರೆ 10ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋದಲ್ಲಿ ವ್ಯಕ್ತಿ ಎಲ್ಲರ ಮುಂದೆಯೇ ಮೆಟ್ರೋ ಹಳಿಗಳ ಮೇಲೆ ಮೂತ್ರ ಮಾಡುತ್ತಿರುವುದನ್ನು ಕಾಣಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:33 pm, Sat, 19 October 24