Video: ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿಗಳ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿ

ವ್ಯಕ್ತಿಯೊಬ್ಬ ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿಗಳ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ. ವಿಡಿಯೋದಲ್ಲಿ ವ್ಯಕ್ತಿ ಎಲ್ಲರ ಮುಂದೆಯೇ ಮೂತ್ರ ಮಾಡುತ್ತಿರುವುದನ್ನು ಕಾಣಬಹುದು.

ಮೆಟ್ರೋದಲ್ಲಿ ಹುಚ್ಚಾಟ ಆಡುವವರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಮೆಟ್ರೋದಲ್ಲಿ ಅಸಭ್ಯವಾಗಿ ನೃತ್ಯ ಮಾಡಿಕೊಂಡು ರೀಲ್ಸ್​​​ ಮಾಡುವವರ ಸಾಕಷ್ಟು ವಿಡಿಯೋಗಳನ್ನು ನೀವು ಸೋಶಿಯಲ್​ ಮೀಡಿಯಾದಲ್ಲಿ ನೋಡಿರುತ್ತೀರಿ. ಆದರೆ ಇಲ್ಲೊಬ್ಬ ಹಳಿಗಳ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಎಲ್ಲೆಡೆ ಭಾರೀ ವೈರಲ್​ ಆಗುತ್ತಿದೆ. ಈ ಘಟನೆ ಜಪಾನ್​​ನ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.

@aravind ಎಂಬ ಟ್ವಿಟರ್​ ಖಾತೆಯಲ್ಲಿ ಅ. 15 ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಕೇವಲ ಮೂರು ದಿನಗಳಲ್ಲಿ ಒಂದು ಮಿಲಿಯನ್​​ ಅಂದರೆ 10ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ವಿಡಿಯೋದಲ್ಲಿ ವ್ಯಕ್ತಿ ಎಲ್ಲರ ಮುಂದೆಯೇ ಮೆಟ್ರೋ ಹಳಿಗಳ ಮೇಲೆ ಮೂತ್ರ ಮಾಡುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:33 pm, Sat, 19 October 24

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us