AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಚಪ್ಪಲಿಗಳ ರಾಶಿಯಲ್ಲಿ ಕಳೆದುಹೋದ ತನ್ನ ಪಾದರಕ್ಷೆ ಹುಡುಕಲು ಚಾಟ್ ಜಿಪಿಟಿ ಮೊರೆ ಹೋದ ವ್ಯಕ್ತಿ

ಇತ್ತೀಚೆಗಿನ ದಿನಗಳಲ್ಲಿ ವೈಯುಕ್ತಿಕ ಸಮಸ್ಯೆ, ಉದ್ಯೋಗ ಸೇರಿದಂತೆ ಇನ್ನಿತ್ತರ ಸಮಸ್ಯೆಗಳಿಗೆ ಚಾಟ್ ಜಿಪಿಟಿಯಿಂದ ಸಲಹೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ವ್ಯಕ್ತಿಯೊಬ್ಬ ಚಪ್ಪಲಿಗಳ ರಾಶಿಯಲ್ಲಿ ತನ್ನ ಕಳೆದುಹೋದ ಚಪ್ಪಲಿ ಹುಡುಕಲು ಚಾಟ್ ಜಿಪಿಟಿ ಸಲಹೆ ಪಡೆದಿದ್ದಾನೆ. ಈ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ವ್ಯಕ್ತಿಯ ಬುದ್ಧಿವಂತಿಕೆಯನ್ನು ಮೆಚ್ಚಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಚಪ್ಪಲಿಗಳ ರಾಶಿಯಲ್ಲಿ ಕಳೆದುಹೋದ ತನ್ನ ಪಾದರಕ್ಷೆ ಹುಡುಕಲು ಚಾಟ್ ಜಿಪಿಟಿ ಮೊರೆ ಹೋದ ವ್ಯಕ್ತಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Aug 16, 2026 | 11:44 AM

Share

ಪ್ರತಿಯೊಂದು ಸಮಸ್ಯೆಗೂ ಪರಿಹಾರಯಿದೆ. ಹೌದು, ಏನೇ ಸಮಸ್ಯೆ ಎದುರಾದ್ರೂ ಅದಕ್ಕೆ ಪರಿಹಾರ ಹುಡುಕೋದು ಬಹಳ ಮುಖ್ಯ. ತಮ್ಮ ಆತ್ಮೀಯರ ಸಲಹೆ ಪಡೆದು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕಾಲವೊಂದಿತ್ತು. ಆದರೆ ಈಗ ಕಾಲ ಬದಲಾಗಿದ್ದು, ಚಾಟ್ ಜಿಪಿಟಿ (Chat GPT) ಮೂಲಕ ಪರಿಹಾರ ಸಾಧ್ಯ. ಹೌದು, ಈ ಚಾಟ್ ಜಿಪಿಟಿ ಹತ್ರ ಯಾವುದೇ ಸಮಸ್ಯೆಗೂ  ಶೀಘ್ರದಲ್ಲೇ ಪರಿಹಾರ ಸಿಗುತ್ತದೆ. ಈ ಚಾಟ್ ಜಿಪಿಟಿ ಸಲಹೆ ಪಡೆದು ವ್ಯಕ್ತಿಯೊಬ್ಬ ಚಪ್ಪಲಿಗಳ ರಾಶಿಯಲ್ಲಿ ಕಳೆದುಹೋದ ಚಪ್ಪಲಿ ಹುಡುಕಲು ಮುಂದಾಗಿದ್ದಾನೆ. ಈ ವಿಚಿತ್ರ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ವ್ಯಕ್ತಿಯ ಬುದ್ಧಿವಂತಿಕೆಯನ್ನು ಮೆಚ್ಚಿಕೊಂಡಿದ್ದಾರೆ.

ಶುಭಾಂಗ್ ಬೋರಕರ್ (ShubhangBorkar) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಚಿತ್ರ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಚಪ್ಪಲಿಗಳ ರಾಶಿ ಕಂಡು ಬಂದಿದ್ದು, ಇದರಲ್ಲಿ ಕಳೆದುಹೋದ ತನ್ನ ಚಪ್ಪಲಿಯನ್ನು ಹುಡುಕಿ ಸುಸ್ತಾಗಿ ಹೋಗಿದ್ದಾನೆ. ಕೊನೆಗೆ ಚಪ್ಪಲಿ ಹುಡುಕಲು ಚಾಟ್ ಜಿಪಿಟಿ ಸಹಾಯ ಪಡೆದಿದ್ದಾನೆ. ಚಪ್ಪಲಿಗಳ ರಾಶಿಯ ಫೋಟೋ ತೆಗೆದು ಕಳೆದುಕೊಂಡ ಚಪ್ಪಲಿಯನ್ನು ಹುಡುಕಿಕೊಡುವಂತೆ ಚಾಟ್ ಜಿಪಿಟಿಗೆ ಕೇಳಿಕೊಂಡಿರುವುದನ್ನು ಕಾಣಬಹುದು. ಕೆಲವೇ ಕೆಲವು ಕ್ಷಣಗಳಲ್ಲಿ ಚಾಟ್ ಜಿಪಿಟಿ ಚಪ್ಪಲಿಯನ್ನು ಪತ್ತೆಹಚ್ಚಿದೆ. ಚಾಟ್ ಜಿಪಿಟಿ ಚಪ್ಪಲಿ ಹುಡುಕಿಕೊಟ್ಟದ್ದನ್ನು ಕೇಳಿ ನಗುತ್ತಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮುಖಕ್ಕೆ ಫೇಸ್ ಪ್ಯಾಕ್‌ ಹಚ್ಚಿಕೊಂಡೇ ಆನ್ಲೈನ್ ಮೀಟಿಂಗ್‌ ಹಾಜರಾದ ಜೆನ್ ಝೆಡ್ ಉದ್ಯೋಗಿ

ಈ ವಿಡಿಯೋ 23 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಸ್ಮಾರ್ಟ್ ಐಡಿಯಾ ಎಂದಿದ್ದಾರೆ. ಇನ್ನೊಬ್ಬರು, ಚಾಟ್ ಜಿಪಿಟಿ ಯನ್ನು ಹೀಗೂ ಬಳಸಬಹುದೆಂದು ತೋರಿಸಿಕೊಟ್ಟ ಮಹಾನುಭಾವ ಎಂದು ಹೇಳಿದ್ದಾರೆ. ಮತ್ತೊಬ್ಬರು, ಜನ್ರು ಇಷ್ಟು ಅಪ್ಡೇಟ್ ಆಗಿದ್ದಾರೆ ಎಂದು ಗೊತ್ತೇ ಇರಲಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ