AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಅಮೆರಿಕದ ಬೀದಿಯಲ್ಲಿ ಲೆಹಂಗಾ ಧರಿಸಿ ಗರ್ಭಾ ನೃತ್ಯ ಮಾಡಿದ ಈ ಯುವಕ

Garbha : ಈ ಹುಡುಗನೇಕೆ ಲೆಹಂಗಾ ಹಾಕಿಕೊಂಡು ನರ್ತಿಸಿದ್ದು? ಎಂದೆನ್ನಿಸಿದರೂ ನೋಡುತ್ತ ನೋಡುತ್ತ ನೀವೇ ಕಳೆದು ಹೋಗುತ್ತೀರಿ. ಅಷ್ಟು ಅದ್ಭುತವಾದ ಲಯವಿನ್ಯಾಸ ಈ ಕಲಾವಿದರದು.

Viral Video : ಅಮೆರಿಕದ ಬೀದಿಯಲ್ಲಿ ಲೆಹಂಗಾ ಧರಿಸಿ ಗರ್ಭಾ ನೃತ್ಯ ಮಾಡಿದ ಈ ಯುವಕ
ಅಮೆರಿಕದಲ್ಲಿ ಗರ್ಭಾ ನೃತ್ಯ ಮಾಡಿದ ಯುವಕ
TV9 Web
| Edited By: ಶ್ರೀದೇವಿ ಕಳಸದ|

Updated on: Sep 02, 2022 | 3:54 PM

Share

Viral Video : ಅಮೆರಿಕದ ಬೀದಿಯಲ್ಲಿ ಯುವಕಲಾವಿದರೊಬ್ಬರು ಲೆಹಂಗಾ ಧರಿಸಿ ಗರ್ಭಾ ನೃತ್ಯ ಮಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಐಶ್ವರ್ಯಾ ರೈ ನಟಿಸಿರುವ ಹಮ್​ ದಿಲ್​ ದೇ ಚುಕೇ ಸನಮ್ ಚಿತ್ರದ ಢೋಲಿ ತಾರೋ ಢೋಲ ಬಾಜೆ ಹಾಡಿಗೆ ಈ ಯುವಕಲಾವಿದರು ಅದ್ಭುತವಾಗಿ ಹೆಜ್ಜೆ ಹಾಕಿದ್ದಾರೆ. ಅವರು ಧರಿಸಿರುವ ಉಡುಪಿನಿಂದಲೂ ನೆಟ್ಟಿಗರ ಗಮನ ಸೆಳೆಯುವಲ್ಲಿ ಈ ವಿಡಿಯೋ ಯಶಸ್ವಿಯಾಗಿದೆ ಎನ್ನಬಹುದು. ಈ ಯುವಕಲಾವಿದರ ಹೆಸರು ಜೈನಿಲ್ ಮೆಹ್ತಾ. ವೃತ್ತಿಯಲ್ಲಿ ನೃತ್ಯ ಸಂಯೋಜಕರು. ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ.

ಆಗಸ್ಟ್ 11 ರಂದು ಜೈನಿಲ್ ಇದನ್ನು ಪೋಸ್ಟ್ ಮಾಡಿದ್ದಾರೆ. 1 ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಜೈನಿಲ್ ಇದೇ ಮೊದಲಲ್ಲ, ಇನ್​ಸ್ಟಾಗ್ರಾಂನ ಅವರ ಖಾತೆಯಲ್ಲಿ ಹೀಗೆ ಲೆಹೆಂಗಾ ಧರಿಸಿ ನರ್ತಿಸಿದ ಅನೇಕ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋಗಳು ಸಾಕಷ್ಟು ಗಮನ ಸೆಳೆದಿವೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

‘ನಮಗೆ ವರ್ಷಪೂರ್ತಿಯೂ ನವರಾತ್ರಿ ಆಚರಿಸಲು ಯಾಕೆ ಸಾಧ್ಯವಿಲ್ಲ? ಹಾಗೇನಾದರೂ ಇದ್ದಿದ್ದರೆ #Miniskirts & @vastra_designer ಜೊತೆಗೆ ಯಾವಾಗಲೂ ಗರ್ಭಾ ನೃತ್ಯ ಮಾಡಬಹುದಿತ್ತು!’ ಹೀಗೆ ಈ ವಿಡಿಯೋಗೆ ನೋಟ್​ ಬರೆದಿದ್ದಾರೆ ಜೈನಿಲ್. ಇವರ ಈ ನೃತ್ಯದ ವೈಖರಿಯನ್ನು ನೆಟ್ಟಿಗರು ಬಹುವಾಗಿ ಮೆಚ್ಚಿದ್ದಾರೆ. ಅವರ ಉಡುಪಿನ ಬಗ್ಗೆಯಂತೂ ಮಾತನಾಡುತ್ತಲೇ ಇದ್ದಾರೆ. ನಿಮಗೇನು ಅನ್ನಿಸಿತು ಈ ವಿಡಿಯೋ ನೋಡಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ