AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಡಿವೈಡರ್​​ ಹಾರಿ ಸ್ಕೂಟಿಗೆ ಡಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸದ್ಯ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. BMW HR26B9454 ನಂಬರ್ ಕಾರಿದ್ದಾಗಿದ್ದು, ಚಾಲಕ ಶ್ರವಣ್ ಕುಮಾರ್ (30)ನನ್ನು ಪೊಲೀಸರು ವಶಕ್ಕೆ‌ ಪಡೆದಿದ್ದಾರೆ.

ಮಂಗಳೂರು: ಡಿವೈಡರ್​​ ಹಾರಿ ಸ್ಕೂಟಿಗೆ ಡಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಡಿವೈಡರ್​​ ಹಾರಿ ಸ್ಕೂಟಿಗೆ ಡಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Apr 09, 2022 | 7:39 PM

Share

ಮಂಗಳೂರು: ಬಿಎಂಡಬ್ಲ್ಯು ಕಾರು (BMW Car) ಡಿವೈಡರ್ ಮೇಲಕ್ಕೆ ಹಾರಿ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ 7 ವರ್ಷದ ಬಾಲಕ, ಮಹಿಳೆ ಸೇರಿದಂತೆ ಇಬ್ಬರು ಗಾಯಗೊಂಡಿರುವಂತಹ ಘಟನೆ ಶನಿವಾರ ನಡೆದಿದೆ. ಮಧ್ಯಾಹ್ನ 1:20ರ ಸುಮಾರಿಗೆ ಬಲ್ಲಾಳ್‌ಬಾಗ್ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ವಾಹನದ ಡಿಕ್ಕಿಯ ರಭಸಕ್ಕೆ ಮಹಿಳೆ ಬಿಎಂಡಬ್ಲ್ಯು ಕಾರು ನಿಲ್ಲುವ ಮುನ್ನವೇ ಮತ್ತೊಂದು ಕಾರಿನಡಿ ಸಿಲುಕಿದ್ದರು. ವರದಿಗಳ ಪ್ರಕಾರ, ಗಾಯಗೊಂಡ ಮಹಿಳೆ ಮತ್ತು ಹಾನಿಗೊಳಗಾದ ಇತರೆ ಕಾರಿನ ಚಾಲಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಸ್ತೆ ದಾಟಲು ಡಿವೈಡರ್ ಮೇಲೆ ನಿಂತಿದ್ದ ಇನ್ನೋರ್ವ ಮಹಿಳೆ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾಳೆ.

ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್ ಮೇಲೆ ನಿಂತಿದ್ದ ಮಹಿಳೆಯೂ ಸಮತೋಲನ ತಪ್ಪಿ ನೆಲಕ್ಕೆ ಬಿದ್ದಿದ್ದಾಳೆ. ರಸ್ತೆ ವಿಭಜನೆಯ ಮೇಲೆ ಜಿಗಿದ ನಂತರ ವೇಗವಾಗಿ ಬಂದ ಬಿಎಂಡಬ್ಲ್ಯು ಸ್ಕೂಟಿಗೆ ಡಿಕ್ಕಿ ಹೊಡೆದ ಬಳಿಕ ದಟ್ಟಣೆಯಿಂದ ಕೂಡಿದ್ದ ರಸ್ತೆ ಶಾಂತವಾಗಿದೆ. ಕಣ್ಣು ಮುಚ್ಚಿ, ಕಣ್ಣು ತೆಗೆಯುವುದರೊಳಗೆ ಭೀಕರ ಅಪಘಾತ ಸಂಭವಿಸಿದ್ದು, ಜನರೆಲ್ಲ ಬೆಚ್ಚಿಬಿದಿದ್ದಾರೆ. ಮಾಧ್ಯಮಗಳ ವರದಿ ಪ್ರಕಾರ, ಮಂಗಳೂರು ನಗರ ಸಂಚಾರ ಪೊಲೀಸರು ಈ ಬಗ್ಗೆ ತನಿಖೆ ನಡೆದಿದೆ. ನಶೆ ಏರಿಸಿಕೊಂಡು ಕಾರು ಚಲಾಯಿಸಿರುವ ಬಗ್ಗೆ ಅನುಮಾನ ಮೂಡಿದ್ದು, ಅಪಘಾತ ಆದ ತಕ್ಷಣ ಚಾಲಕನಿಗೆ ಸಾರ್ವಜನಿಕರಿಂದ ಧರ್ಮದೇಟು ನೀಡಿದ್ದಾರೆ. ಡ್ರಗ್ ಸೇವಿಸಿ ಚಲಾಯಿಸುತ್ತಿದ್ದೀಯಾ ಅಂತಾ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

ಸದ್ಯ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. BMW HR26B9454 ನಂಬರ್ ಕಾರಿದ್ದಾಗಿದ್ದು, ಚಾಲಕ ಶ್ರವಣ್ ಕುಮಾರ್ (30)ನನ್ನು ಪೊಲೀಸರು ವಶಕ್ಕೆ‌ ಪಡೆದಿದ್ದಾರೆ. ಇಂಟಿರಿಯರ್ ಡಕೋರೇಟರ್ ನಿರಂಜನ್ ಎಮ್.ಎನ್, ಮಣ್ಣಗುಡ್ಡ ನಿವಾಸಿ ಶ್ರವಣ್ ಕುಮಾರ್. ಎರಡು ಕಾರು ಮತ್ತು ಎರಡು ಬೈಕ್ ಡಿಕ್ಕಿ ಹೊಡೆದು ಸ್ಕೂಟರ್ ಚಾಲಕಿ ಪ್ರೀತಿ ಮನೋಜ್(47) ಗಂಭೀರ‌ಗೊಂಡಿದ್ದು, ಕಾರ್​ನಲ್ಲಿದ್ದ ಅಮನ್ ಜಯದೇವನ್ (7) ಗೆ ಗಾಯವಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, IPC ಸಕ್ಷನ್ 279, 338 ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಮಂಗಳೂರು ಪಶ್ಚಿಮ ಸಂಚಾರಿ ಪೊಲೀಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:

Viral Video: ಯುವತಿಗೆ ಸಹಾಯ ಮಾಡಲು ಹೋಗಿ ಪೇಚಿಗೆ ಸಿಲುಕಿದ ಯುವಕ; ತಮಾಷೆಯ ವಿಡಿಯೋ ವೈರಲ್

ಆಸ್ಟ್ರೇಲಿಯಾದಲ್ಲಿ ಪತ್ತೆಯಾದ ಅಪರೂಪದ ಬಿಳಿ ಕಾಂಗರೂ; ಇಲ್ಲಿದೆ ವೈರಲ್ ಫೋಟೋ

Published On - 7:36 pm, Sat, 9 April 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?