ಮಧ್ಯಪ್ರದೇಶ: ಬೈಕ್‌ನಲ್ಲಿ ಬಂದ ಮೂವರು ಮುಸುಕುಧಾರಿ ವ್ಯಕ್ತಿಗಳು ವ್ಯಾಪಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದು 8.5 ಲಕ್ಷ ರೂ. ನಗದು ಹೊಂದಿದ್ದ ಬ್ಯಾಗ್‌ನೊಂದಿಗೆ ಪರಾರಿಯಾಗಿರುವ ಘಟನೆ ಮಧ್ಯಪ್ರದೇಶದ ಮೊರೆನಾದ ಪರಾಗ್ ಆಯಿಲ್ ಮಿಲ್ ಬಳಿ ನಿನ್ನೆ(ಸೆ.07) ನಡೆದಿದೆ. ಘಟನೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಾಹಿತಿ ಪ್ರಕಾರ, ಸಂತ್ರಸ್ತ ರಾಜೇಂದ್ರ ಪ್ರಸಾದ್ ಗುಪ್ತಾ ತಂಬಾಕು ವ್ಯಾಪಾರಿಯಾಗಿದ್ದು, ಸಂಗ್ರಹಿಸಿದ ಹಣವನ್ನು ಬ್ಯಾಂಕ್‌ಗೆ ಜಮಾ ಮಾಡಲು ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಮೂವರು ದರೋಡೆಕೋರರು ಆತನ ವಾಹನಕ್ಕೆ ಡಿಕ್ಕಿ ಹೊಡೆದು ಆತನ್ನನ್ನು ಚರಂಡಿಗೆ ಬೀಳಿಸಿದ್ದಾರೆ. ನಂತರ ನಗದು ತುಂಬಿದ್ದ ಬ್ಯಾಗನ್ನು ಕಿತ್ತುಕೊಂಡು ಅಲ್ಲಿಂದ ಪರಾರಿಯಾಗಿದ್ದಾರೆ.
#WATCH | MP: Three Masked Men On Bike Knock Over Trader’s Scooter To Loot His Bag With ₹8.5 Lakh Cash In Morena#MPNews #MadhyaPradesh #IndiaNews pic.twitter.com/I2IRk0UdBW
— Free Press Madhya Pradesh (@FreePressMP) September 6, 2024
ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಸುಕುಧಾರಿಗಳು ಹಿಂದಿನಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಬ್ಯಾಗ್ ಕದಿಯುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ದರೋಡೆಕೋರರು ಸ್ಥಳದಿಂದ ಪರಾರಿಯಾಗುತ್ತಿರುವ ದೃಶ್ಯವನ್ನು ಕಾಣಬಹುದು.
ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ತರಗತಿಯಲ್ಲೇ ವಿದ್ಯಾರ್ಥಿಯ ಜಡೆ ಕತ್ತರಿಸಿದ ಶಿಕ್ಷಕ
ಮಾಹಿತಿ ಪಡೆದ ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರವ್ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಠಾಕೂರ್ ಸ್ಥಳಕ್ಕೆ ಧಾವಿಸಿ, ಆರೋಪಿಗಳ ಪತ್ತೆಗೆ ತಂಡಗಳನ್ನು ರಚಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ