Viral: ವಿದ್ಯುತ್‌ ತಂತಿಯಲ್ಲಿ ಸಿಲುಕಿ ಜೀವನ್ಮರಣದ ಹೋರಾಟದಲ್ಲಿದ್ದ ಪಾರಿವಾಳವನ್ನು ರಕ್ಷಿಸಿದ ಯುವಕರು

ಕಷ್ಟ ಕಾಲದಲ್ಲಿ ಸ್ವಂತದವರಿಗೆಯೇ ಸಹಾಯ ಮಾಡಲು ಹಿಂದೆ ಮುಂದೆ ನೋಡುವ ಜನರ ಮಧ್ಯದಲ್ಲಿ ಇಲ್ಲಿಬ್ರು ಯುವಕರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಮುಗ್ಧ ಜೀವವೊಂದನ್ನು ಕಾಪಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು ವಿದ್ಯುತ್‌ ತಂತಿಯಲ್ಲಿ ಸಿಲುಕಿ ಜೀವನ್ಮರಣ ಹೋರಾಟದಲ್ಲಿದ್ದ ಪಾರಿವಾಳವನ್ನು ಕಾಪಾಡುವ ಮೂಲಕ ಮುಗ್ಧ ಜೀವಕ್ಕೆ ಮರು ಜೀವವನ್ನೇ ನೀಡಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 30, 2024 | 5:56 PM

ಇಂದಿನ ಕಾಲದಲ್ಲಿ ಮಾನವೀಯತೆ ಎಂಬುದು ಮರೆಯಾಗುತ್ತಿದೆ. ಜನರು ಸ್ವಾರ್ಥ ಜೀವನವನ್ನೇ ನಡೆಸುತ್ತಿದ್ದು, ಗುರುತು ಪರಿಚಯವಿಲ್ಲದವರಿಗೆ ಬಿಡಿ ಜನ ತಮ್ಮ ಸ್ವಂತದವರಿಗೆಯೇ ಸಹಾಯ ಮಾಡಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಇಂತಹವರ ಮಧ್ಯದಲ್ಲಿ ಇಲ್ಲಿಬ್ರು ಯುವಕರು ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಮುಗ್ಧ ಜೀವವೊಂದನ್ನು ಕಾಪಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು ವಿದ್ಯುತ್‌ ತಂತಿಯಲ್ಲಿ ಸಿಲುಕಿ ಜೀವನ್ಮರಣ ಹೋರಾಟದಲ್ಲಿದ್ದ ಪಾರಿವಾಳವನ್ನು ಕಾಪಾಡುವ ಮೂಲಕ ಮುಗ್ಧ ಜೀವಕ್ಕೆ ಮರು ಜೀವವನ್ನೇ ನೀಡಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದ್ದು, ಯುವಕರ ಈ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.

ಈ ಕುರಿತ ವಿಡಿಯೋವನ್ನು nepalinreels ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ವಿದ್ಯುತ್‌ ತಂತಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಪಾರಿವಾಳವನ್ನು ರಕ್ಷಿಸಿದ ಧೈರ್ಯಶಾಲಿ ಯುವಕರು” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಯುವಕರಿಬ್ಬರು ಪಾರಿವಾಳವನ್ನು ರಕ್ಷಿಸುತ್ತಿರುವಂತಹ ದೃಶ್ಯವನ್ನು ಕಾಣಬಹುದು. ವಿದ್ಯುತ್‌ ತಂತಿಯೊಂದರಲ್ಲಿ ಸಿಲುಕಿ ಪಾರಿವಾಳವೊಂದು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಸಂದರ್ಭದಲ್ಲಿ ತಕ್ಷಣಕ್ಕೆ ಧಾವಿಸಿದ ಯುವಕರಿಬ್ಬರು ಕಾರ್‌ ಮೇಲೆ ಹತ್ತಿ ಪಾರಿವಾಳವನ್ನು ಅಪಾಯದಿಂದ ರಕ್ಷಣೆ ಮಾಡಿದ್ದಾರೆ.

ಇದನ್ನು ಓದಿ; ಪುಟ್ಟ ಮಗುವನ್ನು ರಂಜಿಸಲು ವಿಮಾನದಲ್ಲಿ ಹಾಡು ಹಾಡಿದ ವ್ಯಕ್ತಿ; ಹೃದಯಸ್ಪರ್ಶಿ ವಿಡಿಯೋ ವೈರಲ್‌

ಡಿಸೆಂಬರ್‌ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4.8 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇವರೇ ನೋಡಿ ನಿಜವಾದ ಹೀರೋಗಳುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಮುಗ್ಧ ಜೀವವನ್ನು ಕಾಪಾಡಿದ ಗೆಳೆಯರಿಬ್ಬರಿಗೆ ದೇವರು ಒಳ್ಳೆಯದು ಮಾಡಲಿʼ ಎಂದು ಆಶಿರ್ವಾದಿಸಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈ ರಿಯಲ್‌ ಹೀರೋಗಳಿಗೆ ನನ್ನದೊಂದು ಸಲಾಂʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೇಕು ಯುವಕರಿಬ್ಬರ ಈ ಮಾನವೀಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ