Viral Video: ಕುಸಿದು ಬಿದ್ದ ಕಾಂಪೌಂಡ್‌ ಗೋಡೆ, ಕೂದಲೆಳೆ ಅಂತರದಲ್ಲಿ ಯುವಕ ಬಚಾವ್, ಎದೆ ಝಲ್‌ ಎನಿಸುವ ದೃಶ್ಯ

ಓಣಿ ರಸ್ತೆಯಲ್ಲಿ ಯುವಕನೊಬ್ಬ ನಡೆದುಕೊಂಡು ಹೋಗುತ್ತಿದ್ದ ವೇಳೆ, ಭಾರೀ ಮಳೆಯಿಂದಾಗಿ ಶಿಥಿಲಗೊಂಡಿದ್ದ ಕಾಂಪೌಂಡ್‌ ಗೋಡೆಯೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಆ ಬಾಲಕ ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತದಿಂದ ಪಾರಾಗಿದ್ದಾನೆ. ಈ ಎದೆ ಝಲ್‌ ಎನಿಸುವ ದೃಶ್ಯದ ವಿಡಿಯೋ ತುಣುಕೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral Video: ಕುಸಿದು ಬಿದ್ದ ಕಾಂಪೌಂಡ್‌ ಗೋಡೆ, ಕೂದಲೆಳೆ ಅಂತರದಲ್ಲಿ ಯುವಕ ಬಚಾವ್, ಎದೆ ಝಲ್‌ ಎನಿಸುವ ದೃಶ್ಯ
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 04, 2024 | 12:06 PM

ಪ್ರತಿವರ್ಷ ಈ ಮಳೆಗಾಲದ ಸಮಯದಲ್ಲಿ ಮನೆಯ ಗೋಡೆ ಕುಸಿದೋ ಇಲ್ಲವೇ ವಿದ್ಯುತ್‌ ಕಂಬ ಬಿದ್ದೋ ಅಥವಾ ಜೋರಾದ ಗಾಳಿ ಮಳೆಗೆ ಬೃಹತ್‌ ಮರ ಬಿದ್ದು ಸಾವು ನೋವುಗಳು ಸಂಭವಿಸುತ್ತಿರುತ್ತವೆ. ಈ ಮಳೆಗಾಲದಲ್ಲಿ ಎಷ್ಟೇ ಜಾಗೃತಿ ವಹಿಸಿದರೂ ಕಮ್ಮಿಯೇ. ಈ ಸಮಯದಲ್ಲಿ ಅಪಾಯ ಎಲ್ಲಿಂದ ಬರುತ್ತೆ ಅಂತ ಹೇಳೋಕೆ ಸಾಧ್ಯವಿಲ್ಲ. ಇದೀಗ ಅದೇ ರೀತಿಯ ಆಘಾತಕಾರಿ ಘಟನೆಯೊಂದು ನಡೆದಿದ್ದು, ಯುವಕನೊಬ್ಬ ಓಣಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿಯೇ ಭಾರೀ ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆಯ ಕಾಂಪೌಂಡ್‌ ಗೋಡೆಯೊಂದು ದೊಪ್ಪನೆ ಕುಸಿದು ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಈ ಅವಘಡದಿಂದ ಯುವಕ ಪಾರಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಈ ಘಟನೆ ಕೇರಳದ ವಡಕರ ಎಂಬಲ್ಲಿ ನಡೆದಿದ್ದು, ಇಲ್ಲಿನ ಪುಟ್ಟ ಓಣಿ ರಸ್ತೆಯಲ್ಲಿ ಯುವಕನೊಬ್ಬ ನಡೆದುಕೊಂಡು ಹೋಗುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಮೇಲಿನ ಮನೆಯ ಕಾಂಪೌಂಡ್‌ ಗೋಡೆ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ಯುವಕ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಭೀಕರ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಕುರಿತ ವಿಡಿಯೋವನ್ನು Chachayeem Pillerum ಹೆಸರಿನ ಯೂಟ್ಯೂಬ್‌ ಚಾನೆಲ್‌ ಒಂದರಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಓಣಿ ರಸ್ತೆಯಲ್ಲಿ ಯುವಕನೊಬ್ಬ ನಡೆದುಕೊಂಡು ಹೋಗುತ್ತಿರುವ ದೃಶ್ಯವನ್ನು ಕಾಣಬಹುದು. ಆತ ನಡೆದುಕೊಂಡು ಹೋಗುತ್ತಿದ್ದಾಗಲೇ ಇದ್ದಕ್ಕಿದ್ದಂತೆ ಮೇಲಿನ ಮನೆಯ ಕಾಂಪೌಂಡ್‌ ಗೋಡೆ ಕುಸಿದು ಬಿದ್ದಿದ್ದು, ಬಾಲಕ ಸ್ವಲ್ಪದರಲ್ಲಿಯೇ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇದನ್ನೂ ಓದಿ: ಮದುವೆಯಾಗಲು ಸತಾಯಿಸಿದ ಬಾಯ್‌ಫ್ರೆಂಡ್‌, ಕೋಪದಲ್ಲಿ ಆತನ ಮರ್ಮಾಂಗ ಕತ್ತರಿಸಿ ಹಾಕಿದ ವೈದ್ಯೆ

ಎರಡು ವಾರಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 8 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಎದೆ ಝಲ್‌ ಎನಿಸುವ ದೃಶ್ಯ ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್