2024ರ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಡೆನ್ಮಾರ್ಕ್‌ನ ವಿಕ್ಟೋರಿಯಾ ಕ್ಜೇರ್

|

Updated on: Nov 17, 2024 | 3:02 PM

2024ರ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಡೆನ್ಮಾರ್ಕ್‌ನ 21 ವರ್ಷದ ವಿಕ್ಟೋರಿಯಾ ಕ್ಜೇರ್ ವಿಜೇತರಾಗಿದ್ದಾರೆ. ಇದು ಡೆನ್ಮಾರ್ಕ್‌ಗೆ ಮೊದಲ ವಿಶ್ವ ಸುಂದರಿ ಕಿರೀಟ. ಮೆಕ್ಸಿಕೋದ ಮರಿಯಾ ಫೆರ್ನಾಂಡಾ ಬೆಲ್ಟ್ರಾನ್ ಮತ್ತು ನೈಜೀರಿಯಾದ ಸಿನಿದಿಮ್ಮಾ ಅಡೆಟ್ಶಿನಾ ಕ್ರಮವಾಗಿ ಮೊದಲ ಮತ್ತು ಎರಡನೇ ರನ್ನರ್ ಅಪ್ ಆಗಿದ್ದಾರೆ. ಭಾರತದ ರಿಯಾ ಸಿಂಘಾ ಅಂತಿಮ ಸುತ್ತಿಗೆ ತಲುಪುವಲ್ಲಿ ವಿಫಲರಾಗಿದರು.

2024ರ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ  ಡೆನ್ಮಾರ್ಕ್‌ನ ವಿಕ್ಟೋರಿಯಾ ಕ್ಜೇರ್
Miss Universe 2024
Follow us on

2024ರ ಇಂಟರ್‌ನ್ಯಾಷನಲ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಯಾರೆಂಬುದು ಘೋಷಣೆಯಾಗಿದೆ. ಡೆನ್ಮಾರ್ಕ್ 21 ವರ್ಷದ ವಿಕ್ಟೋರಿಯಾ ಕ್ಜೇರ್ ವಿಜೇತರಾಗಿ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಇಂಟರ್‌ನ್ಯಾಷನಲ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ಡೆನ್ಮಾರ್ಕ್ ಮೊದಲ ಬಾರಿಗೆ ಕಿರೀಟವನ್ನು ಪಡೆದುಕೊಳ್ಳುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದೆ.

ಮೆಕ್ಸಿಕೋದ ಮರಿಯಾ ಫೆರ್ನಾಂಡಾ ಬೆಲ್ಟ್ರಾನ್ ಮೊದಲ ರನ್ನರ್ ಅಪ್ ಆಗಿ, ನೈಜೀರಿಯಾದ ಸಿನಿದಿಮ್ಮಾ ಅಡೆಟ್ಶಿನಾ ಎರಡನೇ ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಭಾರತವನ್ನು ಪ್ರತಿನಿಧಿಸಿದ್ದ ರಿಯಾ ಸಿಂಘಾ ಅಂತಿಮ ಸುತ್ತಿನಲ್ಲಿ ಟಾಪ್​ 12 ಸ್ಥಾನ ಪಡೆಯುವಲ್ಲಿ ವಿಫಲರಾಗಿದರು.

ಮೆಕ್ಸಿಕೋ ನಗರದಲ್ಲಿ ನಡೆದ 73ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ವಿವಿಧ ದೇಶಗಳಿಂದ 130 ಸುಂದರಿಯರು ಸ್ಪರ್ಧಿಸಿದ್ದರು. ಇದೀಗ 2024ರ ಮಿಸ್ ಯೂನಿವರ್ಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದ ರಿಯಾ ಸಿಂಘಾಗೆ ನಿರಾಶೆಯಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:53 am, Sun, 17 November 24