ಮಿಝೋರಾಂ; ಐಝಾವ್ಲ್​ನ ಶಿಸ್ತಿನ ವಾಹನ ಸಂಚಾರ, ನೋಡಿ ಈ ವೈರಲ್ ವಿಡಿಯೋ

Traffic : ‘ಐಝಾವ್ಲ್​ನ ರಸ್ತೆಗಳಲ್ಲಿ ಚಲಿಸುವಾಗ ಎಲ್ಲರೂ ಶಾಂತವಾಗಿ ಕಾಯುತ್ತಾರೆ. ಹಾರ್ನ್ ಹಾಕುವುದೇ ಇಲ್ಲ. ಭಾರತದ  ಪ್ರತೀ ನಗರಗಳಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವೇ?’ ಎಂದಿದ್ದಾರೆ ಈ ವ್ಲಾಗರ್.

ಮಿಝೋರಾಂ; ಐಝಾವ್ಲ್​ನ ಶಿಸ್ತಿನ ವಾಹನ ಸಂಚಾರ, ನೋಡಿ ಈ ವೈರಲ್ ವಿಡಿಯೋ
ಮಿಝೋರಾಮ್​ನ ಐಝಾವ್ಲ್​ನ ಸಂಚಾರ ಶಿಸ್ತು
Follow us
TV9 Web
| Updated By: ಶ್ರೀದೇವಿ ಕಳಸದ

Updated on:Dec 05, 2022 | 7:27 PM

Viral Video : ನಗರಪ್ರದೇಶಗಳಲ್ಲಿ ಸಂಚಾರ ದಟ್ಟಣೆಗೆ ಅರ್ಧ ತಾಳ್ಮೆ ಕುಸಿದುಹೋಗಿರುತ್ತದೆ. ಹೀಗಿರುವಾಗ ಅಡ್ಡಾದಿಡ್ಡಿಯಾಗಿ ಯಾರಾದರೂ ವಾಹನ ಚಲಿಸಿದರಂತೂ ಕಥೆ ಮುಗಿದೇ ಹೋಯಿತು. ಆದರೆ ಇದೀಗ ವೈರಲ್ ಆಗುತ್ತಿರುವ ಮಿಝೋರಾಂನ ಐಝಾವ್ಲ್​ದಲ್ಲಿ ಸಾಗುತ್ತಿರುವ ಈ ವಾಹನಗಳನ್ನು ಗಮನಿಸಿ. ಶಿಸ್ತಿನ ಸಿಪಾಯಿಯಂತೆ ಸಾಗುತ್ತಿವೆ. ದೂರದಿಂದ ನೋಡಿದರೆ ಆಟಿಕೆಗಾಡಿಗಳನ್ನು ಒಂದರ ಹಿಂದೆ ಒಂದು ಜೋಡಿಸಿಟ್ಟಂತೆ ಕಾಣುತ್ತಿದೆ ಅಲ್ಲವೆ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಟ್ರಾವೆಲ್ ಬ್ಲಾಗರ್ ಎಲಿಝೆಬತ್​ ಈ ವಿಡಿಯೋ ಅನ್ನು ಇನ್​ಸ್ಟಾಗ್ರಾಂ ಗೆ ಪೋಸ್ಟ್ ಮಾಡಿದ್ದಾರೆ. ‘ನೀವು ಭಾರತದ ನಿವಾಸಿಗಳಾಗಿದ್ದರೆ ಅಥವಾ ಭಾರತಕ್ಕೆ ಭೇಟಿ ಕೊಟ್ಟಿದ್ದರೆ ಅಲ್ಲಿಯ ಟ್ರಾಫಿಕ್​ನ ಅವಸ್ಥೆಯ ಬಗ್ಗೆ ಖಂಡಿತ ಗೊತ್ತಿರುತ್ತದೆ. ಎಷ್ಟೇ ವಾಹನದಟ್ಟಣೆ ಇದ್ದರೂ ಪ್ರತಿಯೊಬ್ಬರೂ ತಮ್ಮದೇ ಆದ ದಾರಿಯಲ್ಲಿ ನುಸುಳಿಕೊಂಡು ಸ್ವಾರ್ಥ ಸಾಧಿಸಿಕೊಳ್ಳುತ್ತಿರುತ್ತಾರೆ. ಆದರೆ ಕಾಯುವುದು ಅನಿವಾರ್ಯವಾದಾಗ ಹಾರ್ನ್​ ಕೂಡ ಹಾಕಬಾರದು ಎನ್ನುವುದನ್ನು ನಾವು ಅರ್ಥ ಮಾಡಿಕೊಳ್ಳಬೇಕು. ದಯವಿಟ್ಟು ನನ್ನ ಬಗ್ಗೆ ತಪ್ಪು ತಿಳಿದುಕೊಳ್ಳಬೇಡಿ. ನಾನು ಭಾರತವನ್ನು ಪ್ರೀತಿಸುತ್ತೇನೆ. ಐಝಾವ್ಲ್​ನ ರಸ್ತೆಗಳಲ್ಲಿ ಚಲಿಸಲು ಎಲ್ಲರೂ ಶಾಂತವಾಗಿ ಕಾಯುತ್ತಾರೆ. ಹಾರ್ನ್ ಹಾಕುವುದೇ ಇಲ್ಲ. ಭಾರತದ  ಪ್ರತೀ ನಗರಗಳಲ್ಲಿಯೂ ಇದನ್ನು ಜಾರಿಗೆ ತರಲು ಸಾಧ್ಯವೇ?’ ಎಂದಿದ್ದಾರೆ

ಕಳೆದ ತಿಂಗಳು ಅವರು ಹಂಚಿಕೊಂಡ ಈ ವಿಡಿಯೋ ಅನ್ನು ಈತನಕ 6.4 ಮಿಲಿಯನ್​ ಜನರು ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ. ಮಿಝೋರಾಂ ಸುಂದರವಾಗಿದೆ. ನಾನು ಒಂದು ವಾರ ಇಲ್ಲಿ ವಾಸವಾಗಿದ್ದೆ ಎಂದಿದ್ದಾರೆ ಒಬ್ಬರು. ಈ ವಿಡಿಯೋದಲ್ಲಿ ಪ್ರತಿಯೊಬ್ಬರೂ ಹೆಲ್ಮೆಟ್​ ಧರಿಸಿದ್ದಾರೆ ಗಮನಿಸಿ ಎಂದಿದ್ದಾರೆ ಇನ್ನೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 7:26 pm, Mon, 5 December 22

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ