Viral Video: “ಎ ಆರ್‌ ರೆಹಮಾನ್ ನನಗೆ ತಂದೆ ಸಮಾನ”; ಮೌನ ಮುರಿದ ಮೋಹಿನಿ ಡೇ

ಮೋಹಿನಿ ಡೇ ಅವರು ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಹರಡುತ್ತಿರುವ ಎ.ಆರ್. ರೆಹಮಾನ್ ಅವರ ವಿಚ್ಛೇದನದ ಊಹಾಪೋಹಗಳಿಗೆ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ, ಅವರು ರೆಹಮಾನ್ ಅವರೊಂದಿಗಿನ ತಮ್ಮ ಸಂಬಂಧವನ್ನು ವಿವರಿಸಿದ್ದಾರೆ ಮತ್ತು ಸುಳ್ಳು ಸುದ್ದಿಗಳನ್ನು ಹರಡದಂತೆ ಮನವಿ ಮಾಡಿದ್ದಾರೆ.

Viral Video: ಎ ಆರ್‌ ರೆಹಮಾನ್ ನನಗೆ ತಂದೆ ಸಮಾನ; ಮೌನ ಮುರಿದ ಮೋಹಿನಿ ಡೇ
Mohini Dey and A.R. Rahman
Follow us
ಅಕ್ಷತಾ ವರ್ಕಾಡಿ
|

Updated on: Nov 26, 2024 | 11:37 AM

ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಅವರು ತಮ್ಮ ಪತ್ನಿ ಸೈರಾ ಬಾನು ಜೊತೆಗಿನ 29 ವರ್ಷಗಳ ದಾಂಪತ್ಯ ಜೀವನಕ್ಕೆ ಕೊನೆ ಹಾಡಿದ್ದಾರೆ. ಇತ್ತೀಚಿಗಷ್ಟೇ ವಿಚ್ಛೇದನ ಪಡೆದಿದ್ದು,ಇದರ ಬೆನ್ನಲ್ಲೇ ರೆಹಮಾನ್ ಬ್ಯಾಂಡ್​ನಲ್ಲಿ ಇದ್ದ ಮೋಹಿನಿ ಡೇ ಅವರು ಪತಿ ಮಾರ್ಕ್​ ಜೊತೆ ವಿಚ್ಛೇದನ ಪಡೆದಿದ್ದರು. ಈ ಎರಡೂ ವಿಚ್ಛೇದನವನ್ನು ಲಿಂಕ್ ಮಾಡಿ ರೆಹಮಾನ್ ವಿಚ್ಛೇದನಕ್ಕೆ ಮೋಹಿನಿ ಕಾರಣ ಎಂದು ಸಾಕಷ್ಟು ಸುದ್ದಿ ಸೋಶಿಯಲ್​ ಮೀಡಿಯಾಗಳ್ಲಿ ಹಬ್ಬಿತ್ತು. ಇದೀಗ ಈ ಊಹಾಪೋಹಗಳಿಗೆ ಮೋಹಿನಿ ತೆರೆ ಎಳೆದಿದ್ದಾರೆ.

ಹೌದು ಮೋಹಿನಿ ಡೇ ತಮ್ಮ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ವಿಡಿಯೋದಲ್ಲಿ ಎ ಆರ್‌ ರೆಹಮಾನ್ ಅವರ ಜೊತೆಗಿನ ತನ್ನ ಸಂಬಂಧದ ಬಗ್ಗೆ ಹೇಳಿಕೊಂಡಿದ್ದಾರೆ. “ನಾನು ರೆಹಮಾನ್‌ ಅವರ ಜೊತೆ ಬಾಲ್ಯದಿಂದ ಎಂಟೂವರೆ ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಅವರನ್ನು ನಾನು ತುಂಬಾ ಗೌರವಿಸುತ್ತೇನೆ. ಅಷ್ಟೇ ಅಲ್ಲದೇ ಅವರು ನನ್ನ ತಂದೆಯ ಸಮಾನ. ರೆಹಮಾನ್​ ಅವರಿಗೆ ನನ್ನ ವಯಸ್ಸಿನ ಹೆಣ್ಣು ಮಕ್ಕಳಿದ್ದಾರೆ. ವಿನಾ ಕಾರಣ ಸುಳ್ಳು ಸುದ್ದಿ ಹರಡಬೇಡಿ, ನಮ್ಮ ಗೌಪ್ಯತೆಯನ್ನು ಗೌರವಿಸಿ” ಎಂದು ಹೇಳಿಕೊಂಡಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Mohini Dey (@dey_bass)

ಇದನ್ನೂ ಓದಿ: ರೆಸ್ಟೋರೆಂಟ್‌ನ ಬಿರಿಯಾನಿಯಲ್ಲಿ ಸಿಗರೇಟ್ ಪತ್ತೆ; ವಿಡಿಯೋ ವೈರಲ್​​

dey_bass ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೇವಲ 17 ಗಂಟೆಗಳಲ್ಲಿ ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!