AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬಾಲಕನ ಮೇಲೆ ಮಂಗಗಳ ದಾಳಿ; ಮಗುವಿನ ಸಹಾಯಕ್ಕೂ ಬಾರದೆ ಓಡಿ ಹೋದ ಹೆಂಗಸರು

ಮಂಗಗಳು, ಬೀದಿ ನಾಯಿಗಳು ಮನೆಯಂಗಳದಲ್ಲಿ ಆಡುತ್ತಿರುವ ಮಕ್ಕಳ ಮೇಲೆ ದಾಳಿ ನಡೆಸುವ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಪುಟ್ಟ ಬಾಲಕನ ಮೇಲೆ ಮಂಗಗಳ ಗುಂಪೊಂದು ದಾಳಿ ಮಾಡಿದ್ದು, ಆ ಸಂದರ್ಭದಲ್ಲಿ ಬಾಲಕ ಸಹಾಯಕ್ಕೂ ಬಾರದೇ ಅಲ್ಲಿದ್ದ ಮಹಿಳೆಯರು ಕ್ಯಾರೇ ಅನ್ನದೇ ಓಡಿ ಹೋಗಿದ್ದಾರೆ. ನಂತರ ಸ್ಥಳೀಯ ವ್ಯಕ್ತಿಯೊಬ್ರು ಬಂದು ಮಗುವನ್ನು ರಕ್ಷಿಸಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗಿದ್ದು, ಹೆಂಗಸರ ಈ ಅಮಾನವೀಯ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

Viral Video: ಬಾಲಕನ ಮೇಲೆ ಮಂಗಗಳ ದಾಳಿ; ಮಗುವಿನ ಸಹಾಯಕ್ಕೂ ಬಾರದೆ ಓಡಿ ಹೋದ ಹೆಂಗಸರು
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ|

Updated on: Jul 16, 2024 | 3:07 PM

Share

ಈ ಸ್ವಾರ್ಥ ತುಂಬಿದ ಪ್ರಪಂಚದಲ್ಲಿ ನಡೆಯುವ ಕೆಲವೊಂದು ಘಟನೆಗಳನ್ನು ನೋಡಿದಾಗ ಮಾನವೀಯತೆ ನಿಜಕ್ಕೂ ಸತ್ತು ಹೋಗಿದೆ ಎಂದು ಅನಿಸಿ ಬಿಡುತ್ತದೆ. ಏಕೆಂದರೆ ಕೆಲವು ಜನರು ಕೆಲವೊಂದು ಬಾರಿ ಕಟುವಾಗಿ ವರ್ತಿಸುತ್ತಾರೆ. ಇಂತಹದೊಂದು ಘಟನೆ ಇದೀಗ ನಡೆದಿದ್ದು, ತನ್ನ ಮೇಲೆ ಮಂಗಗಳು ದಾಳಿ ನಡೆಸುತ್ತಿರುವಾಗ ಅಳುತ್ತಾ ಯಾರಾದ್ರೂ ಸಹಾಯ ಮಾಡಿ ಎಂದು ಪುಟ್ಟ ಬಾಲಕನೊಬ್ಬ ಗೋಳಾಡಿದರೂ ಅಲ್ಲಿದ್ದ ಮೂರು ನಾಲ್ಕು ಮಹಿಳೆಯರು ಬಾಲಕನ ಸಹಾಯಕ್ಕೂ ಬಾರದೇ ಕ್ಯಾರೇ ಅನ್ನದೇ ಹೋಗಿದ್ದಾರೆ. ಈ ಹೆಂಗಸರ ಅಮಾನವೀಯ ನಡೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದ್ದು, ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 5 ವರ್ಷ ವಯಸ್ಸಿನ ಬಾಲಕನ ಮೇಲೆ ಮಂಗಗಳ ಗುಂಪೊಂದು ದಾಳಿ ನಡೆಸಿದೆ. ಮಂಗಗಳು ದಾಳಿ ನಡೆಸುತ್ತಿದ್ದಂತೆ ಅಲ್ಲಿದ್ದ ಮೂರು ನಾಲ್ಕು ಹೆಂಗಸರು ಮಗುವಿನ ಸಹಾಯಕ್ಕೂ ಬಾರದೇ ಎಸ್ಕೇಪ್‌ ಆಗಿದ್ದು, ನಂತರ ಸ್ಥಳೀಯ ವ್ಯಕ್ತಿಯೊಬ್ಬರು ಓಡಿ ಬಂದು ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಈ ದೃಶ್ಯ ಅಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ಕುರಿತ ಪೋಸ್ಟ್‌ ಒಂದನ್ನು gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಬೀದಿಯಲ್ಲಿ ಓಡಿ ಬರುತ್ತಿದ್ದ ಬಾಲಕನ ಮೇಲೆ ಮಂಗಗಳು ದಾಳಿ ನಡೆಸುವಂತಹ ದೃಶ್ಯವನ್ನು ಕಾಣಬಹುದು. ಬಾಲಕ ಸಹಾಯಕ್ಕಾಗಿ ಕಿರುಚಿದಾಗ ಅಲ್ಲಿದ್ದ ಮೂವರು ಹೆಂಗಸರು ಆತನ ಸಹಾಯಕ್ಕೂ ಬಾರದೇ ಮಾನವೀಯತೆಯನ್ನೂ ಮರೆತು ಅಲ್ಲಿಂದ ಸೀದಾ ಹೋಗಿದ್ದಾರೆ. ನಂತರ ಸ್ಥಳೀಯ ವ್ಯಕ್ತಿಯೊಬ್ಬರು ಓಡಿ ಬಂದು ಬಾಲಕನನ್ನು ರಕ್ಷಣೆ ಮಾಡಿದ್ದಾರೆ.

ಮತ್ತಷ್ಟು ಓದಿ: Viral Video: ಫೋಟೋ ಶೂಟ್‌ ವೇಳೆ ಬಂದ ರೈಲು, ಪ್ರಾಣ ಉಳಿಸಿಕೊಳ್ಳಲು ಕಂದಕಕ್ಕೆ ಹಾರಿದ ದಂಪತಿ; ವಿಡಿಯೋ ವೈರಲ್‌

ಜುಲೈ 14 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.7 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼನೋಡಿ ಆ ಹೆಂಗಸರು ಅಷ್ಟು ಹತ್ತಿರದಲ್ಲಿದ್ದರೂ ಮಗುವಿಗೆ ಸಹಾಯ ಮಾಡಲಿಲ್ಲʼ ಎಂದು ಕಿಡಿ ಕಾರಿದ್ದಾರೆ. ಇನ್ನೂ ಅನೇಕರು ಮಗುವಿನ ಸಹಾಯಕ್ಕೆ ಧಾವಿಸದ ಆ ಹೆಂಗಸರ ನಡೆಗೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್