AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೊಟೆಲ್​ನಲ್ಲಿ ಪಾತ್ರೆ ತೊಳೆದ ಕೋತಿ ನೋಡಿ; ವಿಡಿಯೊ ವೈರಲ್​

ಇಲ್ಲೋಂದು ಕೋತಿ ಪಾತ್ರೆ ತೊಳೆಯುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೊಟೆಲ್​ನಲ್ಲಿ ಪಾತ್ರೆ ತೊಳೆಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Viral Video: ಹೊಟೆಲ್​ನಲ್ಲಿ ಪಾತ್ರೆ ತೊಳೆದ ಕೋತಿ ನೋಡಿ; ವಿಡಿಯೊ ವೈರಲ್​
ಪಾತ್ರೆ ತೊಳೆಯುತ್ತಿರುವ ಕೋತಿ
TV9 Web
| Edited By: |

Updated on: Oct 26, 2021 | 10:51 AM

Share

ಸಾಮಾನ್ಯವಾಗಿ ಹೊಟೆಲ್​ಗಳಲ್ಲಿ ಪಾತ್ರೆ ತೊಳೆದು, ಕಸಗುಡಿಸಿ, ಅಡುಗೆ ಕೋಣೆಯನ್ನು ಕ್ಲೀನ್ ಮಾಡುವ ಕೆಲಸಗಾರರನ್ನು ನೀವು ನೋಡಿಯೇ ಇರ್ತೀರಿ. ಅವರನ್ನು ನೋಡಿರುವ ಈ ಕೋತಿ ಪಾತ್ರೆ ತೊಳೆಯುವ ಸಾಹಸಕ್ಕೆ ಕೈ ಹಾಕಿದೆ. ನೀರಿನಲ್ಲಿ ಪಾತ್ರೆಗಳನ್ನೆಲ್ಲಾ ಅದ್ದಿ ತೊಳೆದು ಬದಿಗಿಡುತ್ತಿದೆ. ವಿಡಿಯೋ ನೋಡಿದ ನೆಟ್ಟಿಗರು ಈ ಕೋತಿಯ ಚಾಣಾಕ್ಷತನವನ್ನು ಮೆಚ್ಚಿಕೊಂಡಿದ್ದಾರೆ. ಮನುಷ್ಯರನ್ನು ನೋಡಿಕೊಂಡು ಕೋತಿಯೂ ಕೆಲಸವನ್ನು ಕಲಿಯುತ್ತಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೊದಲ್ಲಿ ಕೋತಿಯು ಪಾತ್ರೆ ತೊಳೆಯುತ್ತಿರುವುದನ್ನು ನೋಡಬಹುದು. ಈ ಬುದ್ಧಿವಂತ ಕೋತಿಯನ್ನು ಕಂಡು ಜನರು ಬೆರಗಾಗಿ ನೋಡಿದ್ದಾರೆ. ಪಾತ್ರೆ ತೊಳೆಯುತ್ತಿರುವ ಕೋತಿಯ ಶೈಲಿಯು ವಿಶಿಷ್ಟವಾಗಿದೆ. ಪಾತ್ರೆ ತೊಳೆದ ಬಳಿಕ ಪಾತ್ರೆಯಲ್ಲಿ ಕೊಳೆಗಳು ಹಾಗೆಯೇ ಇದೆಯೇ ಎಂದು ಪರಿಶೀಲಿಸಿ ಎಂಬ ಪ್ರತಿಕ್ರಿಯೆಗಳು ಕೇಳಿ ಬಂದಿವೆ.

ಮನುಷ್ಯರಂತೆಯೇ ಪಾತ್ರೆ ತೊಳೆಯುತ್ತಿರುವ ಕೋತಿಯ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ವಿಡಿಯೊವನ್ನು ಅಕ್ಟೋಬರ್ 23ರಂದು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೊ ನೆಟ್ಟಿಗರಿಗೆ ತುಂಬಾ ಇಷ್ಟವಾಗಿದೆ. ತಮ್ಮ ಅನಿಸಿಕೆಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡ ನೆಟ್ಟಿಗರಲ್ಲಿ ಕೆಲವರು ತಮಾಷೆ ಮಾಡಿ ನಕ್ಕಿದ್ದಾರೆ. ಇನ್ನು ಕೆಲವರು ನಗುವ ಎಮೋಜಿಗಳನ್ನು ಕಳುಹಿಸುವ ಮೂಲಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಚಲಿಸುತ್ತಿರುವ ರೈಲು ಹತ್ತಲು ಹೋಗಿ ಜಾರಿ ಬಿದ್ದ ಮಹಿಳೆಯನ್ನು ಪ್ರಾಣಾಪಾಯದಿಂದ ರಕ್ಷಿಸಿದ ಕಾನ್​ಸ್ಟೇಬಲ್

Viral Video: ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಂಡ ಸೈನಿಕರಿಗೆ ಸಲ್ಯೂಟ್ ಮಾಡಿದ 4 ವರ್ಷದ ಬಾಲಕ; ವಿಡಿಯೋ ವೈರಲ್

Follow Us
TV9 Web
TV9 Web

TV9 Kannada

Read More
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ