Video: ಪುಟ್ಟ ಪುಟ್ಟ ಹೆಜ್ಜೆಯಿಟ್ಟು ಕಂದಮ್ಮ ನಡೆಯುತ್ತಿದ್ದಂತೆ ಭಾವುಕಳಾದ ತಾಯಿ

ಪುಟಾಣಿ ಮಕ್ಕಳ ಆಟ ತುಂಟಾಟ ತೊದಲು ನುಡಿಗಳನ್ನು ಕೇಳುವುದೇ ಚಂದ. ಮೊದಲ ಬಾರಿಗೆ ಅಮ್ಮ ಎಂದು ಕರೆದರೆ, ಪುಟ್ಟ ಪುಟ್ಟ ಹೆಜ್ಜೆಯಿಟ್ಟು ನಡೆಯಲು ಕಲಿತರೆ ಹೆತ್ತವರಿಗೆ ಆಗುವ ಸಂತೋಷ ಅಷ್ಟಿಷ್ಟಲ್ಲ. ಇದೀಗ ಕಂದಮ್ಮನು ಮೊದಲ ಬಾರಿಗೆ ಪುಟ್ಟ ಹೆಜ್ಜೆ ಇಟ್ಟು ನಡೆಯುತ್ತಿದ್ದಂತೆ ತಾಯಿಯೊಬ್ಬಳು ಭಾವುಕಳಾಗಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೆಟ್ಟಿಗರ ಕಣ್ಣನ್ನು ಒದ್ದೆಯಾಗಿಸಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಪುಟ್ಟ ಪುಟ್ಟ ಹೆಜ್ಜೆಯಿಟ್ಟು ಕಂದಮ್ಮ ನಡೆಯುತ್ತಿದ್ದಂತೆ ಭಾವುಕಳಾದ ತಾಯಿ
ವೈರಲ್‌ ವಿಡಿಯೋ
Image Credit source: Instagram

Updated on: May 12, 2026 | 11:32 AM

ತಾಯಿಯ (mother love) ಪ್ರೀತಿಯೇ ಹಾಗೇ, ಮಕ್ಕಳ ಆರೈಕೆಯಲ್ಲೇ ಖುಷಿ ಕಾಣುವ ಜೀವವದು. ಮಗುವಿಗೆ ಎಣ್ಣೆ ಹಚ್ಚಿ ಸ್ನಾನ ಮಾಡಿಸುವುದು, ಆಹಾರ ನೀಡುವುದು ಆಕೆಯ ದಿನನಿತ್ಯ ರೂಟೀನ್ ಆಗಿರುತ್ತದೆ. ಮಗುವಿನ ತೊದಲು ನುಡಿ ಕೇಳುತ್ತ ತನ್ನೆಲ್ಲಾ ನೋವುಗಳನ್ನು ಮರೆಯುತ್ತಾಳೆ. ಇದೀಗ ಪುಟಾಣಿಯೊಂದು  ಮೊದಲ ಬಾರಿಗೆ ಹೆಜ್ಜೆ ಇಟ್ಟು ನಡೆಯುತ್ತಿದ್ದರೆ, ತಾಯಿ ತನ್ನ ಮಗಳ ಮೊದಲ ನಡಿಗೆಯನ್ನು ಕಣ್ತುಂಬಿಸಿಕೊಂಡು ಭಾವುಕಳಾಗಿದ್ದಾಳೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ

fun_factorss ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಈ ಕ್ಲಿಪಿಂಗ್‌ನಲ್ಲಿ ತಾಯಿಯೊಬ್ಬಳು ಕುರ್ಚಿ ಮೇಲೆ ಕುಳಿತುಕೊಂಡು ಮೊಬೈಲ್ ನೋಡುತ್ತಿದ್ದಾಳೆ. ಅಲ್ಲೇ ಇದ್ದ ಪುಟಾಣಿಯೊಂದು ಪುಟ್ಟ ಪುಟ್ಟ ಹೆಜ್ಜೆ ಇಟ್ಟು ನಡೆಯಲು ಶುರು ಮಾಡಿದೆ. ತನ್ನ ಕಂದಮ್ಮನು ಮೊದಲ  ಬಾರಿಗ ನಡೆಯುವುದನ್ನು ನೋಡಿ ತಾಯಿ ಭಾವುಕಳಾಗಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕೈಗಳಿಲ್ಲದಿದ್ದರೂ ಮಗನಿಗೆ ಬಾಯಿಂದಲೇ ತುತ್ತು ನೀಡಿದ ತಾಯಿ, ವೈರಲ್‌ ಆಯ್ತು ದೃಶ್ಯ

ಈ ವಿಡಿಯೋ ಹದಿನಾಲ್ಕು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮುದ್ದಾದ ವಿಡಿಯೋ ಎಂದರೆ, ಇನ್ನೊಬ್ಬರು, ಮೊಬೈಲ್ ನಲ್ಲಿ ಈ ತರಹ ದೃಶ್ಯವನ್ನು ಯಾಕೆ ಸೆರೆ ಹಿಡಿಯಬೇಕು ಎಂದು ಕೇಳಿದ್ದಾರೆ. ಮತ್ತೊಬ್ಬರು, ಹೆತ್ತ ತಾಯಿಗೆ ಇದಕ್ಕಿಂತ ಖುಷಿ ಏನಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 11:31 am, Tue, 12 May 26

Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Follow Us