AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಲಾಟೆ ಮಾಡ್ತಿದ್ದ ಪುಟಾಣಿ ಕೈಗೆ ಐಫೋನ್ ಕೊಟ್ಟ ತಾಯಿ, ಮುಂದೇನಾಯ್ತು ಗೊತ್ತಾ?

ಮಕ್ಕಳೇ ಹಾಗೆ ಕೈಗೆ ಏನಾದ್ರೂ ಸಿಕ್ಕಿದ್ರೆ ಸಾಕು ಎತ್ತಿ ಕೆಳಗೆ ಬಿಸಾಡುತ್ತವೆ. ಹೀಗಾಗಿ ಮನೆಯಲ್ಲಿ ಅಮ್ಮಂದಿರು ಪುಟಾಣಿಗಳ ಕೈಗೆ ಏನು ಸಿಗದಂತೆ ಇಟ್ಟಿರುತ್ತಾರೆ. ಆದ್ರೆ ಗಲಾಟೆ ಮಾಡುತ್ತಿದ್ದ ಪುಟಾಣಿಗೆ ತಾಯಿಯೊಬ್ಬಳು ಐಫೋನ್ ಕೊಟ್ಟಿದ್ದಾಳೆ. ಆದರೆ ಕೈಗೆ ಮೊಬೈಲ್ ಸಿಗುತ್ತಿದ್ದಂತೆ ಈ ಪುಟ್ಟ ಬಾಲಕ ಮಾಡಿದ ಕೆಲಸ ನೋಡಿದ್ರೆ ನೀವು ಶಾಕ್ ಆಗ್ತೀರಾ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಗಲಾಟೆ ಮಾಡ್ತಿದ್ದ ಪುಟಾಣಿ ಕೈಗೆ ಐಫೋನ್ ಕೊಟ್ಟ ತಾಯಿ, ಮುಂದೇನಾಯ್ತು ಗೊತ್ತಾ?
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Jun 19, 2026 | 4:37 PM

Share

ಹುಟ್ಟಿದ ಮಕ್ಕಳು (little kids) ಕೂಡ ಮೊದಲು ಈ ಮೊಬೈಲ್ ನ್ನೇ ಹುಡುಕುತ್ತಾರೆ. ಇನ್ನು ಮಕ್ಕಳು ಅತ್ತರೆ, ಊಟ ಮಾಡಲ್ಲ ಅಂತ ಹಠ ಮಾಡಿದ್ರೆ ಪೋಷಕರು ಮೊಬೈಲ್ ಕೊಟ್ಟು ಸಮಾಧಾನ ಪಡಿಸ್ತಾರೆ. ನೀವು ನಿಮ್ಮ ಮಕ್ಕಳಿಗೆ ಫೋನ್ ಕೊಟ್ಟು ಸಮಾಧಾನ ಪಡಿಸುವ ಮುನ್ನ ಈ ಸ್ಟೋರಿ ಓದೋದು ಒಳ್ಳೆಯದು. ಹೌದು, ಬೋಟಿಂಗ್ ಗೆ ಹೋಗಿದ್ದ ವೇಳೆ ಮಹಿಳೆ ಪುಟಾಣಿಯನ್ನು ಸಮಾಧಾನ ಪಡಿಸಲು ತನ್ನ ಕೈಯಲ್ಲಿದ್ದ ಐಫೋನ್ ಕೊಟ್ಟಿದ್ದಾಳೆ. ಆದರೆ ಪುಟ್ಟ ಹುಡುಗನು ತನ್ನ ಕೈಯಲ್ಲಿದ್ದ ಫೋನ್ ನೀರಿಗೆ ಎಸೆದಿರುವ ವಿಡಿಯೋ ವೈರಲ್ ಆಗಿದೆ. ನೆಟ್ಟಿಗರು ಈ ವಿಡಿಯೋ ನೋಡಿ ಒಂದು ಕ್ಷಣ ಶಾಕ್ ಆಗಿದ್ದಾರೆ.

ಯಜ್ಞಶ್ರೀ (@yajnashri) ಹೆಸರಿನ ಎಕ್ಸ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಬೋಟಿಂಗ್‌ಗೆ ತೆರಳಿದ್ದ ತಾಯಿ ತನ್ನ ಪುಟ್ಟ ಮಗುವನ್ನು ಸಮಾಧಾನಪಡಿಸಲು ಐಫೋನ್ ಕೈಗೆ ಕೊಡುವುದನ್ನು ಕಾಣಬಹುದು. ಕೈಯಲ್ಲಿ ಫೋನ್ ಹಿಡಿದು ಆಟವಾಡುತ್ತಿದ್ದ ಪುಟ್ಟ ಕಂದಮ್ಮ ನೋಡ ನೋಡುತ್ತಿದ್ದಂತೆ ನದಿಗೆ ಎಸೆದಿದೆ.  ಮಹಿಳೆ ಮೊಬೈಲ್‌ನ್ನು ಕೈಯಲ್ಲಿ ಹಿಡಿಯಲು ಪ್ರಯತ್ನಿಸುತ್ತಿದ್ದಂತೆ ನೀರಿಗೆ ಬಿದ್ದಿದೆ. ಮಗನ ಕೆಲಸ ನೋಡಿ ಮಹಿಳೆ ಕೆಲ ಕಾಲ ಗಾಬರಿಗೊಂಡು ಕುಳಿತಿರುವ ದೃಶ್ಯವನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಚಪಾತಿ ಮಾಡಲು ಹೋಗಿ ಮೈ ತುಂಬಾ ಹಿಟ್ಟು ಮೆತ್ತಿಕೊಂಡ ಪುಟಾಣಿ

ಈ ವಿಡಿಯೋ 1.2 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಮೊಬೈಲ್ ಗೆ ದಾಸರಾಗಿರುವ ಹೆತ್ತವರಿಗೆ ಈ ರೀತಿಯೇ ಬುದ್ಧಿ ಕಲಿಸಬೇಕು ಎಂದಿದ್ದಾರೆ. ಮತ್ತೊಬ್ಬರು, ಮಗುವಿಗೆ ಲೈಫ್ ಜಾಕೆಟ್ ಹಾಕಿಲ್ಲ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನೊಬ್ಬರು, ಬೋಟಿಂಗ್ ಗೆ ಹೋಗುವಾಗ ಲೈಫ್ ಜಾಕೆಟ್ ನಂತಹ ಸುರಕ್ಷತಾ ಸಾಧನಗಳನ್ನು ಬಳಸುವುದು ಕಡ್ಡಾಯ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ