AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಗನ ಕ್ಲಾಸ್ ಮಿಸ್ ಆಗುತ್ತೆ ಎಂದು ಸ್ಕೂಲ್ ಬಸ್ ಹಿಂದೆ ಓಡಿದ ತಾಯಿ, ವೈರಲ್‌ ಆಯ್ತು ದೃಶ್ಯ

ತಾಯಿ ಪ್ರೀತಿಯೇ ಹಾಗೆ, ಬೆಲೆ ಕಟ್ಟಲು ಸಾಧ್ಯವಿಲ್ಲ. ತನ್ನ ಮಕ್ಕಳು ಒಂದೊಳ್ಳೆ ಬದುಕು ಕಟ್ಟಿಕೊಳ್ಳಲಿ ಎನ್ನುವ ಕಾರಣಕ್ಕೆ ತಾಯಿಯಾದವಳು ಎಲ್ಲವನ್ನು ತ್ಯಾಗ ಮಾಡುತ್ತಾಳೆ. ಈ ದೃಶ್ಯ ನೋಡಿದ್ರೆ ನಿಮ್ಮ ಕಣ್ಣಲ್ಲಿ ನೀರು ಬರೋದು ಖಂಡಿತ. ಮಗನ ಕ್ಲಾಸ್ ಮಿಸ್ ಆಗಬಾರದೆನ್ನುವ ಕಾರಣಕ್ಕೆ ಸ್ಕೂಲ್ ಬಸ್ ಹಿಂದೆ ಓಡುತ್ತಿರುವ ತಾಯಿ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರ ಕಣ್ಣಂಚಲಿ ನೀರು ಬಂದಿದೆ.

Video: ಮಗನ ಕ್ಲಾಸ್ ಮಿಸ್ ಆಗುತ್ತೆ ಎಂದು ಸ್ಕೂಲ್ ಬಸ್ ಹಿಂದೆ ಓಡಿದ ತಾಯಿ, ವೈರಲ್‌ ಆಯ್ತು ದೃಶ್ಯ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Feb 20, 2026 | 1:13 PM

Share

ತಾಯಿಗೆ (mother) ಮಕ್ಕಳೇ ಪ್ರಪಂಚ. ಹೀಗಾಗಿ ಹೊಟ್ಟೆ ಬಟ್ಟೆ ಕಟ್ಟಿ ಮಕ್ಕಳಿಗೆ ಒಂದೊಳ್ಳೆ ಭವಿಷ್ಯ ಕಟ್ಟಿ ಕೊಡಲು ಒದ್ದಾಡುತ್ತಾಳೆ. ಹೀಗಾಗಿ ಅಮ್ಮ ಅಂದ್ರೆ ತ್ಯಾಗಮಯಿ. ಮಕ್ಕಳಿಗಾಗಿ ಎಲ್ಲಾ ಕಷ್ಟವನ್ನು ಸಹಿಸಿಕೊಳ್ಳುತ್ತಾರೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಮಗನ ಸ್ಕೂಲ್ ಬಸ್ (school bus) ಹೊರಟಿತೆಂದು ಬ್ಯಾಗ್ ಹೆಗಲಿಗೇರಿಸಿಕೊಂಡು ತಾಯಿಯೂ ಬಸ್ ಹಿಂದೆ ಓಡುತ್ತಿರುವ ದೃಶ್ಯವು ಎಲ್ಲರ ಗಮನ ಸೆಳೆದಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ತಾಯಿ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ.

ಟಿವಿ ಇಶಾ ಟ್ರಾವೆಲ್ ಡೈರಿ (tvishatraveldairy) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ತಾಯಿಯೊಬ್ಬಳು ಮಗನ ಬ್ಯಾಗ್‌ನ್ನು ಹೆಗಲಿಗೇರಿಸಿಕೊಂಡು ಸ್ಕೂಲ್ ಬಸ್ ಹಿಂದೆ ಓಡುತ್ತಿರುವುದನ್ನು ಕಾಣಬಹುದು. ಮಗನು ತನ್ನ ತಾಯಿಯ ಜತೆಗೆ ಓಡಿ ಹೋಗುತ್ತಿದ್ದು, ಕೊನೆಗೂ ಸ್ಕೂಲ್ ಬಸ್ ನಿಲ್ಲಿಸಿ ಮಗನನ್ನು ಹತ್ತಿಸಿದ್ದಾಳೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಕರುವನ್ನು ಕಂಡೊಡನೆ ಓಡೋಡಿ ಬಂದು ಮುದ್ದಿಸಿದ ಹಸು

ಈ ವಿಡಿಯೋ ಒಂದು ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಕಂಡಿದ್ದು, ಒಬ್ಬ ಬಳಕೆದಾರ, ತಾಯಿಗೆ ಈ ಜಗದಲ್ಲಿ ಸರಿಸಾಟಿ ಯಾರಿಲ್ಲ ಎಂದು ಹೇಳಿದ್ದಾರೆ. ಇನ್ನೊಬ್ಬರು, ಮಕ್ಕಳ ಭವಿಷ್ಯಕ್ಕಾಗಿ ತಾಯಿಯ ಹೋರಾಟ, ಕಣ್ಣಲ್ಲಿ ನೀರು ಬಂತು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಕಾಮೆಂಟ್ ಮಾಡಿ ಮಕ್ಕಳಿಗೆ ತಾಯಿ ಏನನ್ನು ಬೇಕಾದ್ರು ಮಾಡ್ತಾಳೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!