ಕೈಗಳಿಗೆ ಹಸಿರು ಬಳೆ ತೊಟ್ಟು, ವಧುವಿನಂತೆ ಸಿಂಗಾರಗೊಂಡು ಹಾಸ್ಟೆಲ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಯುವಕ ಕೈಗಳಿಗೆ ಹಸಿರು ಬಳೆಗಳನ್ನು ತೊಟ್ಟು, ಮದುವನಗಿತ್ತಿಯಂತೆ ಸಿಂಗಾರಗೊಂಡು ಹಾಸ್ಟೆಲ್​​ನ ತನ್ನ ಕೊಠಡಿಯಲ್ಲಿರುವ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾನೆ. ವಿದ್ಯಾರ್ಥಿಯ ಆತ್ಮಹತ್ಯೆಗೆ ಕಾರಣವೇನು ಎನ್ನುವುದೇ ಪೊಲೀಸರಿಗೆ ಅರ್ಥವಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪುನೀತ್‌ನ ಲ್ಯಾಪ್‌ಟಾಪ್, ಮೊಬೈಲ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೈಗಳಿಗೆ ಹಸಿರು ಬಳೆ ತೊಟ್ಟು, ವಧುವಿನಂತೆ ಸಿಂಗಾರಗೊಂಡು ಹಾಸ್ಟೆಲ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ
ಮೃತ ಪುನೀತ್ ದುಬೆ
Follow us
ಅಕ್ಷತಾ ವರ್ಕಾಡಿ
|

Updated on:May 21, 2024 | 11:21 AM

ಮಧ್ಯಪ್ರದೇಶದ ಸಿವಿಲ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 21 ವರ್ಷದ ಯುವಕ ಪುನೀತ್ ದುಬೆ ಶುಕ್ರವಾರ ರಾತ್ರಿ (ಮೇ.17) ಇಂದೋರ್‌ನ ಹಾಸ್ಟೆಲ್ ಕೊಠಡಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾನೆ.  ಯುವಕ ಕೈಗಳಿಗೆ ಹಸಿರು ಬಳೆಗಳನ್ನು ತೊಟ್ಟು, ಮದುವನಗಿತ್ತಿಯಂತೆ ಸಿಂಗಾರಗೊಂಡು ಹಾಸ್ಟೆಲ್​​ನ ತನ್ನ ಕೊಠಡಿಯಲ್ಲಿರುವ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾನೆ. ಯುವಕನ ಮೃತದೇಹ ಕಂಡ ಪೋಷಕರು ಇದು ಕೊಲೆ ಎನ್ನುವ ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಇದು ಕೊಲೆಯೋ? ಆತ್ಮಹತ್ಯೆಯೋ? ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಕಂಡು ಹಾಸ್ಟೆಲ್​​​ ಸಿಬ್ಬಂದಿಗೆ ಕರೆ ಮಾಡಿದ್ದು, ಭನ್ವಾರ್ಕುವಾನ್ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಬಂದಿದ್ದು, ತನಿಖೆ ಪ್ರಾರಂಭಿಸಿದ್ದಾರೆ. ಸಿಂಗಾರಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕೇಸ್‌ ಚರ್ಚೆಗೆ ಕಾರಣವಾಗಿದ್ದು, ವಿದ್ಯಾರ್ಥಿಯ ಆತ್ಮಹತ್ಯೆಗೆ ಕಾರಣವೇನು ಎನ್ನುವುದೇ ಪೊಲೀಸರಿಗೆ ಅರ್ಥವಾಗಿಲ್ಲ.

ಎರಡನೇ ವರ್ಷದ ಬಿಎಸ್ಸಿ ಓದುತ್ತಿರುವ ವಿದ್ಯಾರ್ಥಿ ಪುನೀತ್, ಇಂದೋರ್‌ನ ರಂಜಿತ್ ಸಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್‌ನಲ್ಲಿ, ಮಧ್ಯಪ್ರದೇಶ ಸಾರ್ವಜನಿಕ ಸೇವಾ ಆಯೋಗದ (MPPSC) ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು. ಪತ್ತೆಯಾದಾಗ ಶವದ ಬಳಿ ನೆಲದ ಮೇಲೆ ರಕ್ತದ ಮಡುವಿತ್ತು. ಪುನೀತ್ ಸಾವನ್ನು ಆತ್ಮಹತ್ಯೆ ಮತ್ತು ಕೊಲೆ ಕೋನ ಎರಡರಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಅವ್ರು ಅದೃಷ್ಟ ದೇವತೆ ಕಣ್ರೋ; RCB ಸೋಲಿಗೆ ಅಶ್ವಿನಿ ಕಾರಣ ಎಂದು ನಿಂದಿಸಿದವರಿಗೆ ಇದು ಸರಿಯಾದ ಉತ್ತರ

ಮೂಲತಃ ರಾಜ್ಯದ ಉದಯಪುರ ಪಟ್ಟಣದವರಾದ ಪುನೀತ್, ಎರಡು ವರ್ಷಗಳ ಹಿಂದೆ ತಮ್ಮ ಅಧ್ಯಯನಕ್ಕಾಗಿ ಇಂದೋರ್‌ಗೆ ಸ್ಥಳಾಂತರಗೊಂಡಿದ್ದ ಎಂದು ಅವರ ತಂದೆ ತ್ರಿಭುವನ್ ದುಬೆ ಬಹಿರಂಗಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪುನೀತ್‌ನ ಲ್ಯಾಪ್‌ಟಾಪ್, ಮೊಬೈಲ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸದ್ಯ ಆತನ ಹಾಸ್ಟೆಲ್ ರೂಂ ಮೇಟ್‌ಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:03 am, Tue, 21 May 24

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್