Viral Video: ಸಮುದ್ರ ಪಾಲಾಗುತ್ತಿದ್ದ ಮಹಿಳೆಯ ಜೀವ ರಕ್ಷಿಸಿದ ಆರಕ್ಷಕರು, ರೋಚಕ ವಿಡಿಯೋ ವೈರಲ್
ಕೆಲವೊಮ್ಮೆ ಕಷ್ಟಕಾಲದಲ್ಲಿ ಮನುಷ್ಯರೇ ದೇವರ ರೂಪದಲ್ಲಿ ಬಂದು ನಮಗೆ ಸಹಾಯ ಮಾಡುತ್ತಾರೆ ಅಂತ ಹೇಳುತ್ತಾರೆ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಪೊಲೀಸ್ ಅಧಿಕಾರಿಗಳಿಬ್ಬರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಭೀಕರ ಅಲೆಗಳ ನಡುವೆಯೂ ಸಮುದ್ರಕ್ಕೆ ಇಳಿದು ಸಮುದ್ರ ಪಾಲಾಗುತ್ತಿದ್ದ ಮಹಿಳೆಯ ಜೀವ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಮುಂಬೈನ ಮರೈನ್ ಡ್ರೈವ್‌ನ ಸಮುದ್ರ ತೀರದ ಬಳಿ ಇಬ್ಬರು ಪೊಲೀಸ್ ಅಧಿಕಾರಿಗಳು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸಮುದ್ರ ಪಾಲಾಗುತ್ತಿದ್ದ ಮಹಿಳೆಯ ಪ್ರಾಣ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ. ಈ ವಿಡಿಯೋ ಇದೀಗ ಸೊಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಘಟನೆ ಮುಂಬೈನ ಮರೈನ್ ಡ್ರೈವ್‌ನ ಸಮುದ್ರ ತೀರದ ಬಳಿ ನಡೆದಿದ್ದು, ಪೊಲೀಸರಿಬ್ಬರು ತಮ್ಮ ಪ್ರಾಣದ ಹಂಗು ತೊರೆದು ಜೋರು ಅಲೆಗಳ ನಡುವೆಯೂ ಸಮುದ್ರಕ್ಕೆ ಹಾರಿ ಸಮುದ್ರ ಪಾಲಾಗುತ್ತಿದ್ದ ಮಹಿಳೆಯ ಪ್ರಾಣವನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.
ಕರ್ತವ್ಯದಲ್ಲಿ ನಿರತರಾಗಿದ್ದ ಪೊಲೀಸ್ ಅಧಿಕಾರಿಗಳಾದ ಪಿಸಿ ಕಿರಣ್ ಠಾಕ್ರೆ ಹಾಗೂ ಪಿಸಿ ಅನ್ಮೋಲ್ ದಹಿಫಲೆ ಸಮುದ್ರ ಪಾಲಾಗುತ್ತಿದ್ದ ಮಹಿಳೆಯ ಜೀವ ರಕ್ಷಿಸಿದ್ದಾರೆ. ನಂತರ ಆ ಮಹಿಳೆಯನ್ನು ಪೊಲೀಸರ ಮೊಬೈಲ್ ವ್ಯಾನ್‌ನಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದೀಗ ಆ ಮಹಿಳೆ ಆರೋಗ್ಯ ಸುಧಾರಿಸಿದ್ದು, ಪೊಲೀಸರಿಬ್ಬರ ಈ ಮಾನವೀಯ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗಿದೆ.
View this post on Instagram
ಈ ಕುರಿತ ವಿಡಿಯೋವೊಂದನ್ನು @mumbaipolice ಅಧೀಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಪೊಲೀಸರಿಬ್ಬರು ಬೃಹತ್ ಅಲೆಗಳು ಅಪ್ಪಳಿಸಿದರೂ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಸಮುದ್ರ ಪಾಲಾಗುತ್ತಿದ್ದ ಮಹಿಳೆಯ ಪ್ರಾಣವನ್ನು ರಕ್ಷಿಸುವ ದೃಶ್ಯವನ್ನು ಕಾಣಬಹುದು. ನಂತರ ಆ ಮಹಿಳೆಯನ್ನು ಸಮುದ್ರದಿಂದ ಮೇಲಕ್ಕೆತ್ತಿ, ಭಯದಲ್ಲಿ ನಡುಗಿ ಹೋಗಿದ್ದ ಆ ಮಹಿಳೆಗೆ ಧೈರ್ಯ ತುಂಬಿ ಮೊಬೈಲ್ ವ್ಯಾನ್‌ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಇದನ್ನೂ ಓದಿ: ಸೋರುವ ರೈಲಿನಲ್ಲಿ ಕೊಡೆ ಹಿಡಿದು ಪ್ರಯಾಣ; ವಿಡಿಯೋ ವೈರಲ್
ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1.5 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಪೊಲೀಸರ ಈ ಮಾನವೀಯ ಕಾರ್ಯಕ್ಕೆ ನೆಟ್ಟಿಗರು ತಲೆ ಬಾಗಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:44 pm, Mon, 1 July 24