AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಜಿಮ್ ಟ್ರೈನರ್​​ನಿಂದಲೇ ಯುವಕನ ಮೇಲೆ ಹಲ್ಲೆ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ

ಯುವಕನೊಬ್ಬ ಜಿಮ್​​ನಲ್ಲಿ ವರ್ಕೌಟ್​​​​​​ ಮಾಡುತ್ತಿರುವಾಗಲೇ ಏಕಾಏಕಿ ಬಂದ ತರಬೇತುದಾರ ವ್ಯಾಯಾಮಕ್ಕೆ ಬಳಸುವ ಭಾರವಾದ ಮರದ ದೊಣ್ಣೆಯಿಂದ ಯುವಕನ ತಲೆ ಮೇಲೆ ಬಲವಾಗಿ ಹೊಡೆದಿದ್ದಾನೆ. ಪರಿಣಾಮ ತಲೆಬುರುಡೆಯ ಎಡಭಾಗದಲ್ಲಿ ತೀವ್ರ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on:Jul 20, 2024 | 10:39 AM

Share

ಮಹಾರಾಷ್ಟ್ರ: ಜಿಮ್‌ನಲ್ಲಿ ತರಬೇತುದಾರನೊಬ್ಬ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ವ್ಯಾಯಾಮಕ್ಕೆ ಬಳಸುವ ಭಾರವಾದ ಮರದ ದೊಣ್ಣೆಯಿಂದ ಯುವಕನ ತಲೆ ಮೇಲೆ ಬಲವಾಗಿ ಹೊಡೆದಿದ್ದು, ಪರಿಣಾಮ ತಲೆಬುರುಡೆಯ ಎಡಭಾಗದಲ್ಲಿ ತೀವ್ರ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗಿದೆ. ಈ ಭೀಕರ ಘಟನೆಗೆ ಜಿಮ್​​ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಯೋಗೇಶ್ ಶಿಂಧೆ(20) ಕಳೆದ ಎರಡು ವರ್ಷಗಳಿಂದ ಮುಲುಂಡ್ ಪೂರ್ವದಲ್ಲಿರುವ ಜಿಮ್‌ಗೆ ಹೋಗುತ್ತಿದ್ದ. ಇದರಂತೆ ಬುಧವಾರ(ಜುಲೈ 17) ದಂದು ಜಿಮ್‌ನಲ್ಲಿ ತರಬೇತುದಾರರ ಸಹಾಯದಿಂದ ವ್ಯಾಯಾಮ ಮಾಡುತ್ತಿದ್ದಾಗ ಜಿಮ್‌ನ ಮತ್ತೊಂದು ಬದಿಯಲ್ಲಿ ನಿಂತಿದ್ದ ಮತ್ತೊಬ್ಬ ತರಬೇತುದಾರ ಧಾರಾವಿ ಎಂಬುವರು ವ್ಯಾಯಾಮಕ್ಕೆ ಬಳಸುತ್ತಿದ್ದ ಮರದ ದೊಣ್ಣೆಯನ್ನು ಕೈಯಲ್ಲಿ ಹಿಡಿದುಕೊಂಡು ಬಂದಿದ್ದಾರೆ. ಇದಕ್ಕಿದ್ದಂತೆ ಯೋಗೇಶ್ ತಲೆಯ ಮೇಲೆ ಬಲವಾಗಿ ಹೊಡೆದಿದ್ದು, ಇದೆಲ್ಲವೂ ಜಿಮ್‌ನಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಮೂರಡಿ ಕುಳ್ಳನಿಗೆ ಈ ಬ್ಯೂಟಿ ಲವರ್​​, ದುಡ್ಡಿದ್ರೆ ಏನು ಬೇಕಾದ್ರೂ ಸಾಧ್ಯ ಎಂದ ನೆಟ್ಟಿಗರು

ಗಾಯಾಳು ಯೋಗೇಶ್ ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಂಆರ್‌ಐ ಸ್ಕ್ಯಾನ್‌ನಲ್ಲಿ ಅವರ ತಲೆಬುರುಡೆಯ ಎಡಭಾಗದಲ್ಲಿ ಎರಡು ಮುರಿತಗಳು ಕಂಡುಬಂದಿವೆ. ಮತ್ತೊಂದೆಡೆ, ಹಲ್ಲೆ ಮಾಡಿದ ಜಿಮ್ ಟ್ರೈನರ್ ವಿರುದ್ಧ ಸಂತ್ರಸ್ತ ಯೋಗೇಶ್ ಪೊಲೀಸರಿಗೆ ದೂರು ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:35 am, Sat, 20 July 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ