Viral News: ಮೊದಲ ಮುಟ್ಟಿನ ನೋವಿಗೆ ಹೆದರಿ 14ವರ್ಷದ ಬಾಲಕಿ ಆತ್ಮಹತ್ಯೆ

ಮೊದಲ ಋತುಸ್ರಾವದ ನೋವು ತಡೆದುಕೊಳ್ಳಲಾಗದೆ 14 ವರ್ಷದ ಬಾಲಕಿ ಚಡಪಡಿಸಿ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಮುಟ್ಟಿನ ಬಗ್ಗೆ ಬಾಲಕಿಗೆ ಯಾವುದೇ ಮಾಹಿತಿ ತಿಳಿಯದೇ ಇರುವುದು ಸಾವಿಗೆ ಕಾರಣವಾಯಿತು ಎಂದು ಪೊಲೀಸರ ತನಿಖೆಯ ವೇಳೆ ತಿಳಿದುಬಂದಿದೆ.

Viral News: ಮೊದಲ ಮುಟ್ಟಿನ ನೋವಿಗೆ ಹೆದರಿ 14ವರ್ಷದ ಬಾಲಕಿ ಆತ್ಮಹತ್ಯೆ
ಮೊದಲ ಮುಟ್ಟಿನ ನೋವಿಗೆ ಹೆದರಿ 14ವರ್ಷದ ಬಾಲಕಿ ಆತ್ಮಹತ್ಯೆ
Follow us
ಅಕ್ಷತಾ ವರ್ಕಾಡಿ
|

Updated on:Mar 29, 2024 | 3:09 PM

14 ವರ್ಷದ ಬಾಲಕಿಯೊಬ್ಬಳು ತನ್ನ ಮೊದಲ ಋತುಚಕ್ರದ (Menstrual cycle) ನೋವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಮುಂಬೈನ ಮಲಾಡ್‌ನಲ್ಲಿ ನಡೆದಿದೆ. ಮುಟ್ಟಿನ ಬಗ್ಗೆ ಬಾಲಕಿಗೆ ಯಾವುದೇ ಮಾಹಿತಿ ತಿಳಿಯದೇ ಇರುವುದು ಸಾವಿಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರ್ಚ್ 26 ರಂದು ತಡರಾತ್ರಿ ಈ ಘಟನೆ ನಡೆದಿದೆ. ಮೊದಲ ಬಾರಿಗೆ ಋತುಸ್ರಾವವಾದಾಗ ನೋವಿನ ಬಗ್ಗೆ ಕುಟುಂಬ ಸದಸ್ಯರಿಗೆ ತಿಳಿಸಿದ್ದಳು. ಇದಲ್ಲದೆ ನೋವಿನ ಜೊತೆಗೆ ಮಾನಸಿಕ ಒತ್ತಡವನ್ನು ಅನುಭವಿಸಿದ್ದಳು. ನೋವು ತಡೆದುಕೊಳ್ಳಲಾಗದೆ ಬಾಲಕಿ ಚಡಪಡಿಸಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಈ ದೇವಾಲಯದಲ್ಲಿ 1 ನಿಂಬೆ ಹಣ್ಣನ್ನು ಹರಾಜಿನ ಮೂಲಕ ಲಕ್ಷ ಲಕ್ಷ ಕೊಟ್ಟು ಖರೀದಿಸುತ್ತಾರೆ; ಯಾಕಿಷ್ಟು ದುಬಾರಿ?

ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟೋತ್ತಿಗಾಗಲೇ ಬಾಲಕಿ ಸಾವನ್ನಪ್ಪಿರುವುದಾಗಿ ವೈದ್ಯರು ಫೋಷಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಯಾವುದೇ ದುಷ್ಕೃತ್ಯ ಕಂಡುಬಂದಿಲ್ಲದ ಕಾರಣ  ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿರುವುದು ವರದಿಯಾಗಿದೆ.

ಪೊಲೀಸರು ಇದೀಗ ಬಾಲಕಿಯ ಕುಟುಂಬ ಸದಸ್ಯರು ಮತ್ತು ಶಾಲೆ ಮತ್ತು ಸ್ಥಳೀಯ ಸ್ನೇಹಿತರ ಹೇಳಿಕೆಗಳನ್ನು ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ.  ತನಿಖೆಯ ಸಲುವಾಗಿ ಆಕೆಯ ಖಿನ್ನತೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಆಕೆಯ ಸ್ನೇಹಿತರ ಜೊತೆಗೆ ಮಾತನಾಡುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:04 pm, Fri, 29 March 24

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ