14 ವರ್ಷದ ಬಾಲಕಿಯೊಬ್ಬಳು ತನ್ನ ಮೊದಲ ಋತುಚಕ್ರದ (Menstrual cycle) ನೋವಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಮುಂಬೈನ ಮಲಾಡ್‌ನಲ್ಲಿ ನಡೆದಿದೆ. ಮುಟ್ಟಿನ ಬಗ್ಗೆ ಬಾಲಕಿಗೆ ಯಾವುದೇ ಮಾಹಿತಿ ತಿಳಿಯದೇ ಇರುವುದು ಸಾವಿಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾರ್ಚ್ 26 ರಂದು ತಡರಾತ್ರಿ ಈ ಘಟನೆ ನಡೆದಿದೆ. ಮೊದಲ ಬಾರಿಗೆ ಋತುಸ್ರಾವವಾದಾಗ ನೋವಿನ ಬಗ್ಗೆ ಕುಟುಂಬ ಸದಸ್ಯರಿಗೆ ತಿಳಿಸಿದ್ದಳು. ಇದಲ್ಲದೆ ನೋವಿನ ಜೊತೆಗೆ ಮಾನಸಿಕ ಒತ್ತಡವನ್ನು ಅನುಭವಿಸಿದ್ದಳು. ನೋವು ತಡೆದುಕೊಳ್ಳಲಾಗದೆ ಬಾಲಕಿ ಚಡಪಡಿಸಿ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಈ ದೇವಾಲಯದಲ್ಲಿ 1 ನಿಂಬೆ ಹಣ್ಣನ್ನು ಹರಾಜಿನ ಮೂಲಕ ಲಕ್ಷ ಲಕ್ಷ ಕೊಟ್ಟು ಖರೀದಿಸುತ್ತಾರೆ; ಯಾಕಿಷ್ಟು ದುಬಾರಿ?
ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟೋತ್ತಿಗಾಗಲೇ ಬಾಲಕಿ ಸಾವನ್ನಪ್ಪಿರುವುದಾಗಿ ವೈದ್ಯರು ಫೋಷಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಯಾವುದೇ ದುಷ್ಕೃತ್ಯ ಕಂಡುಬಂದಿಲ್ಲದ ಕಾರಣ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿರುವುದು ವರದಿಯಾಗಿದೆ.
ಪೊಲೀಸರು ಇದೀಗ ಬಾಲಕಿಯ ಕುಟುಂಬ ಸದಸ್ಯರು ಮತ್ತು ಶಾಲೆ ಮತ್ತು ಸ್ಥಳೀಯ ಸ್ನೇಹಿತರ ಹೇಳಿಕೆಗಳನ್ನು ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಸಲುವಾಗಿ ಆಕೆಯ ಖಿನ್ನತೆಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಆಕೆಯ ಸ್ನೇಹಿತರ ಜೊತೆಗೆ ಮಾತನಾಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:04 pm, Fri, 29 March 24