AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಿಯಂತ್ರಣ ತಪ್ಪಿ 3ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು; ಸಿಸಿಟಿವಿಯಲ್ಲಿ ಸೆರೆ

ಮಂಗಳವಾರ (ಜುಲೈ 16) ಮಧ್ಯಾಹ್ನ 2.40 ರ ಸುಮಾರಿಗೆ, ಕೆಲಸದ ವಿರಾಮದ ಸಮಯದಲ್ಲಿ ಕಟ್ಟಡದ ಮೂರನೇ ಮಹಡಿಯಲ್ಲಿನ ಮೆಟ್ಟಿಲುಗಳ ಬಳಿ ನಾಗಿನಾ ಕುಳಿತಿರುವುದು ಕಂಡುಬಂದಿದೆ. ಸಹೋದ್ಯೋಗಿಗಳೊಂದಿಗೆ ನಗುತ್ತಾ ಮಾತನಾಡುತ್ತಿರುವ ವೇಳೆ ಹಿಡಿತ ತಪ್ಪಿ ಮೂರನೇ ಮಹಡಿಯಿಂದ ಮಹಿಳೆ ಕೆಳಗೆ ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on:Jul 18, 2024 | 12:13 PM

Share

ಮುಂಬೈ: ಮಹಿಳೆಯೊಬ್ಬಳು ನಿಯಂತ್ರಣ ತಪ್ಪಿ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಮೃತ ಮಹಿಳೆ ನಾಗಿನಾ ದೇವಿ ಅಲಿಯಾಸ್ ಗುಡಿಯಾ ದೇವಿ ಎಂದು ಗುರುತಿಸಲಾಗಿದ್ದು, ಈಕೆ ಡೊಂಬಿವಲಿಯಲ್ಲಿರುವ ಗ್ಲೋಬ್ ಸ್ಟೇಟ್ ಬಿಲ್ಡಿಂಗ್ ಕಾಂಪ್ಲೆಕ್ಸ್‌ನ ಕ್ಲೀನಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಳು. ಮಂಗಳವಾರ (ಜುಲೈ 16) ಮಧ್ಯಾಹ್ನ 2.40 ರ ಸುಮಾರಿಗೆ, ವಿರಾಮದ ಸಮಯದಲ್ಲಿ ಕಟ್ಟಡದ ಮೂರನೇ ಮಹಡಿಯಲ್ಲಿನ ಮೆಟ್ಟಿಲುಗಳ ಬಳಿ ನಾಗಿನಾ ಕುಳಿತಿರುವುದು ಕಂಡುಬಂದಿದೆ.

ಸಹೋದ್ಯೋಗಿಗಳೊಂದಿಗೆ ನಗುತ್ತಾ ಹಿಡಿತ ತಪ್ಪಿ ಅಲ್ಲಿಂದ ಕೆಳಗೆ ಬಿದ್ದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅವಳ ಜೊತೆಗೆ ಅವಳ ಹಿಂದೆಯಿದ್ದ ವ್ಯಕ್ತಿ ಕೂಡ ಬಿದ್ದಿದ್ದು, ಆದರೆ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇದನ್ನೂ ಓದಿ; ಪರ ಸ್ತ್ರೀಯೊಂದಿಗೆ ರೋಮ್ಯಾನ್ಸ್​​​ ಮಾಡುತ್ತಿದ್ದ ವೇಳೆ ಪತ್ನಿಯ ಎಂಟ್ರಿ, ಪತಿಗೆ ಹಿಗ್ಗಾಮುಗ್ಗಾ ಥಳಿತ

ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ನಾಗಿನಾ ದೇವಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಈ ಭೀಕರ ಅಪಘಾತ ಹೇಗೆ ಸಂಭವಿಸಿತು ಎಂಬುದನ್ನು ಅರ್ಥಮಾಡಿಕೊಳ್ಳಲು ಅಧಿಕಾರಿಗಳು ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:00 pm, Thu, 18 July 24

Follow Us
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ
ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ