AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ತುಂಡುಡುಗೆ ತೊಟ್ಟು ರೈಲಿನಲ್ಲಿ ಯುವತಿಯ ಅಸಹ್ಯಕರ ರೀಲ್ಸ್;‌ ಸಹ ಪ್ರಯಾಣಿಕರ ರಿಯಾಕ್ಷನ್‌ ಹೇಗಿತ್ತು ನೋಡಿ

ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುವ ಕೆಲವೊಂದು ಅತಿರೇಕವೆನಿಸುವ ವಿಡಿಯೋಗಳು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ದೃಶ್ಯವೊಂದು ವೈರಲ್‌ ಆಗಿದ್ದು, ತುಂಡುಡುಗೆ ತೊಟ್ಟು ರೈಲಿನೊಳಗೆ ಎಂಟ್ರಿ ಕೊಟ್ಟ ಯುವತಿಯೊಬ್ಬಳು ಬೋಲ್ಡ್‌ ಆಗಿ ಡ್ಯಾನ್ಸ್‌ ಮಾಡಿದ್ದಾಳೆ. ಈಕೆಯ ಈ ಅಸಹ್ಯಕರ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

Viral: ತುಂಡುಡುಗೆ ತೊಟ್ಟು ರೈಲಿನಲ್ಲಿ ಯುವತಿಯ ಅಸಹ್ಯಕರ ರೀಲ್ಸ್;‌ ಸಹ ಪ್ರಯಾಣಿಕರ ರಿಯಾಕ್ಷನ್‌ ಹೇಗಿತ್ತು ನೋಡಿ
Viral VideoImage Credit source: instagram
ಮಾಲಾಶ್ರೀ ಅಂಚನ್​
| Edited By: |

Updated on: Jan 11, 2025 | 10:56 AM

Share

ಈ ಸೋಷಿಯಲ್‌ ಮೀಡಿಯಾದಲ್ಲಿ ಲೈಕ್ಸ್‌, ವೀವ್ಸ್‌ ಗಳಿಸಲು, ರಾತ್ರೋರಾತ್ರಿ ಫೇಮಸ್‌ ಆಗಲು ಜನ ಹುಚ್ಚು ಸಾಹಸಗಳನ್ನು ಮಾಡುತ್ತಿರುತ್ತಾರೆ. ಅದರಲ್ಲೂ ಕೆಲವರಂತೂ ಟ್ರೈನ್‌, ಮೆಟ್ರೋ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಇತರರಿಗೆ ತೊಂದರೆ ಕೊಡುತ್ತಾ, ವಿಡಿಯೋಗಳನ್ನು ಮಾಡುತ್ತಿರುತ್ತಾರೆ. ಇನ್ನೂ ಕೆಲವರಂತೂ ಅತಿರೇಕವಿನಿಸುವಂತೆ ವರ್ತಿಸಿ ಇತರರಿಗೂ ಮುಜುಗರವನ್ನುಂಟುಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬಳು ಯುವತಿ ಕೂಡಾ ಅಹಸ್ಯಕರ ವರ್ತನೆಯನ್ನು ತೋರಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾಳೆ. ಹೌದು ತುಂಡುಡುಗೆ ತೊಟ್ಟು ರೈಲಿನೊಳಗೆ ಎಂಟ್ರಿ ಕೊಟ್ಟ ಆಕೆ ಸಹ ಪ್ರಯಾಣಿಕರ ಎದುರಲ್ಲಿಯೇ ಬೋಲ್ಡ್‌ ಡ್ಯಾನ್ಸ್‌ ಮಾಡಿದ್ದಾಳೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಮುಂಬೈನ ಲೋಕಲ್‌ ಟ್ರೈನ್‌ ಒಂದರಲ್ಲಿ ನಡೆದ ಘಟನೆ ಇದಾಗಿದ್ದು, ಯುವತಿಯೊಬ್ಬಳು ತುಂಡುಡುಗೆ ತೊಟ್ಟು ರೈಲಿನೊಳಗೆ ಎಂಟ್ರಿ ಕೊಟ್ಟ ಯುವತಿಯೊಬ್ಬಳು ಬೋಲ್ಡ್‌ ಆಗಿ ಡ್ಯಾನ್ಸ್‌ ಮಾಡಿದ್ದಾಳೆ. ಈಕೆಯ ಅಶ್ಲೀಲ ವರ್ತನೆಯನ್ನು ಸಹ ಪ್ರಯಾಣಿಕರಿಗೆ ಮುಜುಗರವನ್ನು ಉಂಟು ಮಾಡಿದ್ದು, ಅದರಲ್ಲೂ ಆಕೆಯ ಪಕ್ಕದಲ್ಲಿದ್ದ ವಯಸ್ಸಾದ ವ್ಯಕ್ತಿಯೊಬ್ಬರು ಆಕೆಯ ಅವತಾರವನ್ನು ಕಂಡು ಅಲ್ಲಿಂದ ಎದ್ದು ಹೋಗಿದ್ದಾರೆ.

ಈ ಕುರಿತ ವಿಡಿಯೋವನ್ನು WokePandemic ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಪ್ರಯಾಣಿಕರ ಮನರಂಜನೆಗಾಗಿ ರೈಲಿನಲ್ಲಿ ಪೋಲ್‌ ಡ್ಯಾನ್ಸ್‌ ಮಾಡಿಸಿದ್ದಕ್ಕಾಗಿ ಭಾರತೀಯ ರೈಲ್ವೆ ಇಲಾಖೆಗೆ ಧನ್ಯವಾದಗಳು; ಅಮೇರಿಕನ್ನರು ಕೂಡಾ ಇಂತಹ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿಲ್ಲ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ಈ ವಿಡಿಯೋದಲ್ಲಿ ಮುಂಬೈ ಲೋಕಲ್‌ ಟ್ರೈನ್‌ನಲ್ಲಿ ತುಂಡುಡುಗೆ ತೊಟ್ಟು ಯುವತಿಯೊಬ್ಬಳು ಬೋಲ್ಡ್‌ ಪೋಸ್‌ ಕೊಟ್ಟುಕೊಂಡು ಡ್ಯಾನ್ಸ್‌ ಮಾಡುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಮತ್ತಷ್ಟು ಓದಿ:ಮನುಷ್ಯರನ್ನು ನೀರಿಗಿಳಿಯುವಂತೆ ಮಾಡಲು ಸಾವಿನ ನಾಟಕವಾಡುವ ಖತರ್ನಾಕ್‌ ಮೊಸಳೆಗಳು; ವಿಡಿಯೋ ವೈರಲ್‌

ಜನವರಿ 8 ರಂದು ಹಂಚಿಕೊಳ್ಳಲಾದ ಈ ವಿಡಿಯೋ 6.8 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಅದೇ ಪುರುಷರು ಈ ರೀತಿ ವರ್ತಿಸಿದ್ದರೆ ದೊಡ್ಡ ರಂಪಾಟವನ್ನೇ ಮಾಡ್ತಿದ್ರುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ವರ್ತಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕುʼ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್