Video: ಪ್ಲೀಸ್ ನನ್ನ ಬಿಟ್ಟು ಹೋಗ್ಬೇಡ; ಪ್ರೇಯಸಿಯ ಕಾಲಿಗೆ ಬಿದ್ದು ಅಂಗಲಾಚಿ ಬೇಡಿಕೊಂಡ ಯುವಕ

ಬಸ್ಸು, ರೈಲು, ಮೆಟ್ರೋಗಳಲ್ಲಿ ಪ್ರೇಮಿಗಳು ರೋಮ್ಯಾನ್ಸ್ ಸೇರಿದಂತೆ ಇನ್ನಿತ್ತರ ವಿಚಾರಗಳಿಂದ ಸುದ್ದಿಯಾಗುವುದೇ ಹೆಚ್ಚು. ಮುಂಬೈ ರೈಲ್ವೆ ಸ್ಟೇಷನ್ ನಲ್ಲಿ ಯುವಕನೋರ್ವ ತನ್ನ ಪ್ರೇಯಸಿಯ ಕಾಲಿಗೆ ಬಿದ್ದು ಬಿಟ್ಟು ಹೋಗಬೇಡ ಎಂದು ಗೋಳಾಡಿದ್ದಾನೆ. ಈ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತಾದ ಕಂಪ್ಲೀಟ್‌ ಮಾಹಿತಿ ಇಲ್ಲಿದೆ.

Video: ಪ್ಲೀಸ್ ನನ್ನ ಬಿಟ್ಟು ಹೋಗ್ಬೇಡ; ಪ್ರೇಯಸಿಯ ಕಾಲಿಗೆ ಬಿದ್ದು ಅಂಗಲಾಚಿ ಬೇಡಿಕೊಂಡ ಯುವಕ
ವೈರಲ್‌ ವಿಡಿಯೋ
Image Credit source: Instagram

Updated on: Jul 12, 2026 | 12:53 PM

ಮುಂಬೈ, ಜುಲೈ 12: ಪ್ರೀತಿ (love) ಯೇ ಹಾಗೆ, ಒಮ್ಮೆ ಪ್ರೀತಿಯಲ್ಲಿ ಬಿದ್ದರೆ ಈ ಜಗತ್ತೇ ಕಾಣುವುದಿಲ್ಲ. ಹುಡುಗರು ತನ್ನನ್ನು ಪ್ರೀತಿಸುವ ಜೀವದ ಖುಷಿಗಾಗಿ ಏನು ಬೇಕಾದರೂ ಮಾಡಲು ಸಿದ್ಧವಿರುತ್ತಾರೆ. ಇದೀಗ ಪ್ರೇಮಿಯೊಬ್ಬನು ಮುಂಬೈನ (Mumbai) ಬೋರಿವಳ್ಳಿ ರೈಲ್ವೆ ಸ್ಟೇಷನ್ ನಲ್ಲಿ ತನ್ನ ಪ್ರೇಯಸಿಯ ಕಾಲಿಗೆ ಬಿದ್ದಿದ್ದಾನೆ. ನನ್ನನ್ನು ಬಿಟ್ಟು ಹೋಗಬೇಡ ಎಂದು ಅಂಗಲಾಚಿ ಬೇಡಿಕೊಂಡಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರ ಗಮನ ಸೆಳೆದಿದೆ.

ಭಾರತೀಯ ಇನ್ ಲಾಸ್ಟ್ 24 ಹವರ್ (Bharatiyainlast24hr) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ಕ್ಲಿಪಿಂಗ್ ನಲ್ಲಿ ಯುವಕನೊಬ್ಬ ತನ್ನ ಪ್ರೇಮಿಯ ಕಾಲಿಗೆ ಬಿದ್ದು ಬೇಡಿಕೊಳ್ಳುತ್ತಿರುವುದನ್ನು ಕಾಣಬಹುದು. ಪ್ಲೀಸ್ ನನ್ನ ಬಿಟ್ಟು ಹೋಗ್ಬೇಡ ಎನ್ನುತ್ತಿದ್ದಂತೆ ಯುವತಿ ಆತನಿಂದ ಬಿಡಿಸಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಸಾರ್ವಜನಿಕರು ಯುವಕ ಯುವತಿಯನ್ನು ಕಣ್ಣು ಬಾಯಿ ಬಿಟ್ಟು ನೋಡುತ್ತಿದ್ದಾರೆ. ಈ ವಿಡಿಯೋದ ಕೊನೆಯಲ್ಲಿ ಪೋಲಿಸರು ಸ್ಥಳಕ್ಕೆ ಆಗಮಿಸಿ ಯುವಕನನ್ನು ತರಾಟೆಗೆ ತೆಗೆದುಕೊಂಡಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಇದು ಜನರೇಷನ್ ಝೆಡ್ ಡೇಟಿಂಗ್ ಎಫೆಕ್ಟ್; ಪ್ರೀತಿ ಹೆಸರಿನಲ್ಲಿ ರಿಲೇಷನ್ಶಿಪ್‌ಗೆ ನಾನಾ ಅರ್ಥ ನೀಡಿದ್ದಾರೆ ಯುವಜನತೆ

ಈ ವಿಡಿಯೋ ಹದಿಮೂರು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಈ ರೀತಿ ಮಾಡ್ಬೇಡಿ. ಒಮ್ಮೆ ನಿಮ್ಮ ಹೆತ್ತವರನ್ನು ಯೋಚಿಸಿ, ದುಡ್ಡು ಸಂಪಾದಿಸಿ ಹಾಗೂ ಎಲ್ಲವನ್ನೂ ಸಂಪಾದಿಸಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ಇದು ನಿಜವಾದ ಪ್ರೀತಿ ಎಂದು ಹೇಳಿದ್ದಾರೆ. ಇನ್ನೊಬ್ಬರು, ಪ್ರಾಮಾಣಿಕ ಪ್ರೀತಿಗೆ ಯಾವಾಗಲೂ ಹೀಗೆ ಆಗೋದು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Loading...
Unable to load recommendations.
Follow Us