Viral News: ಮಗುವಿಗೆ ‘ಮಹಾಲಕ್ಷ್ಮಿ’ ಎಂದು ನಾಮಕರಣ ಮಾಡಿದ ಮುಸ್ಲಿಂ ದಂಪತಿ

ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ನಲ್ಲಿ ರೈಲಿನಲ್ಲಿಯೇ ಮಗು ಜನಿಸಿದ್ದು, ಜೊತೆಗೆ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಮಗು ಜನಿಸಿದ್ದರಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕರು ಮಗುವನ್ನು ಮಹಾಲಕ್ಷ್ಮಿಗೆ ಹೋಲಿಕೆ ಮಾಡಿದ್ದಾರೆ. ಅದಕ್ಕಾಗಿಯೇ ಮಗಳಿಗೆ ಮಹಾಲಕ್ಷ್ಮಿ ಎಂದು ಹೆಸರಿಡಲು ನಿರ್ಧರಿಸಿದ್ದೇನೆ ಎಂದು ಪತಿ ದಯಾಬ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Viral News: ಮಗುವಿಗೆ ಮಹಾಲಕ್ಷ್ಮಿ ಎಂದು ನಾಮಕರಣ ಮಾಡಿದ ಮುಸ್ಲಿಂ ದಂಪತಿ
ಮಗುವಿಗೆ 'ಮಹಾಲಕ್ಷ್ಮಿ' ಎಂದು ನಾಮಕರಣ ಮಾಡಿದ ಮುಸ್ಲಿಂ ದಂಪತಿ

Updated on: Jun 11, 2024 | 5:48 PM

ಮಹಾರಾಷ್ಟ್ರ: ಮುಸ್ಲಿಂ ದಂಪತಿಯೊಂದು ತಮ್ಮ ಮಗುವಿಗೆ ಮಹಾಲಕ್ಷ್ಮಿ ಎಂದು ನಾಮಕರಣ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಜೂನ್ 6ರಂದು ಕೊಲ್ಹಾಪುರ-ಮುಂಬೈ ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ನಲ್ಲಿ ಪತಿ ದಯಾಬ್ ಜೊತೆಗೆ ಪ್ರಯಾಣಿಸುತ್ತಿದ್ದ ಗರ್ಭಿಣಿ ಫಾತಿಮಾ (31) ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಕೆಲ ಕ್ಷಣದಲ್ಲೇ ಫಾತಿಮಾ ರೈಲಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ ರೈಲು ಹೆಸರು ಒಂದೆಡೆಯಾದರೆ ಇನ್ನೊಂದೆಡೆ ತಿರುಪತಿಯಿಂದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಹೋಗುತ್ತಿದ್ದ ದಾರಿಯಲ್ಲೇ ಮಗು ಜನಿಸಿದ್ದರಿಂದ ದಂಪತಿ ಮಗುವಿಗೆ ಮಹಾಲಕ್ಷ್ಮಿ ಎಂದೇ ಹೆಸರಿಟ್ಟಿದ್ದಾರೆ.

ಹೆರಿಗೆ ನೋವಿನಿಂದ ನರಳುತ್ತಿದ್ದ ಫಾತಿಮಾ ಅವರಿಗೆ ರೈಲಿನಲ್ಲಿದ್ದ ಇತರ ಮಹಿಳಾ ಪ್ರಯಾಣಿಕರು ಸಹಾಯ ಮಾಡಿದ್ದಾರೆ. ತಕ್ಷಣ ಸಹ ಪ್ರಯಾಣಿಕರು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಮುಂದಿನ ನಿಲ್ಧಾಣ ಅಂದರೆ ಕರ್ಜತ್ ರೈಲು ನಿಲ್ದಾಣ ತಲುಪಿದಾಗ, ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಿ ತಾಯಿ ಮತ್ತು ಮಗುವನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಮಗು ಮತ್ತು ತಾಯಿ ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಕೆರೆಯಲ್ಲಿ ಹಾಯಾಗಿ ಮಲಗಿದ ವ್ಯಕ್ತಿ, ಸಾವನ್ನಪ್ಪಿದ್ದಾನೆ ಎಂದು ಪೊಲೀಸರನ್ನು ಕರೆಸಿದ ಸ್ಥಳೀಯರು

ಮಹಾಲಕ್ಷ್ಮಿ ಎಕ್ಸ್‌ಪ್ರೆಸ್‌ನಲ್ಲಿ ರೈಲಿನಲ್ಲಿಯೇ ಮಗು ಜನಿಸಿದ್ದು, ಜೊತೆಗೆ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ಮಗು ಜನಿಸಿದ್ದರಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕರು ಮಗುವನ್ನು ಮಹಾಲಕ್ಷ್ಮಿಗೆ ಹೋಲಿಕೆ ಮಾಡಿದ್ದಾರೆ. ಅದಕ್ಕಾಗಿಯೇ ಮಗಳಿಗೆ ಮಹಾಲಕ್ಷ್ಮಿ ಎಂದು ಹೆಸರಿಡಲು ನಿರ್ಧರಿಸಿದ್ದೇನೆ ಎಂದು ಪತಿ ದಯಾಬ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:47 pm, Tue, 11 June 24

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us