Viral : ಪ್ರತಿಭಟನೆಯ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯ ಸೊಂಟಕ್ಕೆ ಕೈ ಹಾಕಿದ ವ್ಯಕ್ತಿ, ವಿಡಿಯೋ ವೈರಲ್
ಪ್ರತಿಭಟನೆಯ ವೇಳೆ ಆಘಾತಕಾರಿ ಘಟನೆಗಳು ನಡೆಯುತ್ತಿರುವ ಬಗ್ಗೆ ಆಗಾಗ ಕೇಳುತ್ತಿರುತ್ತೇವೆ. ಆದರೆ ಇದೀಗ ಪ್ರತಿಭಟನೆಯ ವೇಳೆ ವ್ಯಕ್ತಿಯೊಬ್ಬನನ್ನು ಬಂಧಿಸುತ್ತಿದ್ದಂತೆ ಮತ್ತೊಬ್ಬ ವ್ಯಕ್ತಿಯೂ ಮಹಿಳಾ ಪೊಲೀಸ್ ಸಿಬ್ಬಂದಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ನಾಗ್ಪುರ, ಏಪ್ರಿಲ್ 10: ಭಾರತ (india) ದಂತಹ ದೇಶದಲ್ಲಿ ಪ್ರತಿಭಟನೆ (protest) ಗಳು ಸರ್ವೇ ಸಾಮಾನ್ಯವಾಗಿರುತ್ತದೆ. ಪ್ರತಿಭಟನೆಯ ವೇಳೆ ಹಲ್ಲೆ (attack) ಸೇರಿದಂತೆ ಕಹಿ ಘಟನೆಗಳು ನಡೆಯುವ ಸಂಭವಿಸುವುದೇ ಹೆಚ್ಚು. ಹೀಗಾಗಿ ಪ್ರತಿಭಟನೆಯ ವೇಳೆ ಅಹಿತಕರ ಘಟನೆಗಳು ನಡೆಯಬಾರದೆನ್ನುವ ಉದ್ದೇಶದಿಂದ ಪೊಲೀಸ (police) ರು ಕರ್ತವ್ಯದಲ್ಲಿ ತೊಡಗಿಕೊಂಡಿರುತ್ತಾರೆ. ಆದರೆ ಇದೀಗ ವೈರಲ್ (viral) ಆಗಿರುವ ವಿಡಿಯೋದಲ್ಲಿ ಪ್ರತಿಭಟನೆಯ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿ ಯ ಜೊತೆ ಅನುಚಿತವಾಗಿ ವರ್ತಿಸಿದ ಘಟನೆಯೂ ನಾಗ್ಪುರ (nagpur) ದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧ ಪಟ್ಟ ವಿಡಿಯೋವೊಂದು ಸೋಶಿಯಲ್ ಮೀಡಿಯಾ (social media) ದಲ್ಲಿ ವೈರಲ್ ಆಗಿವೆ.
ಈ ವಿಡಿಯೋವನ್ನು Sikandar ಹೆಸರಿನ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದ್ದು, ಮಹಿಳಾ ಪೊಲೀಸ್ ಸಿಬ್ಬಂದಿಯ ಸೊಂಟಕ್ಕೆ ಕೈ ಹಾಕುವ ಈ ವ್ಯಕ್ತಿಯನ್ನು ಒಮ್ಮೆ ನೋಡಿ. ಕೆಟ್ಟ ದೃಷ್ಟಿಯಿಂದ ಹೆಣ್ಣು ಮಕ್ಕಳನ್ನು ಕಾಪಾಡಲು ಇರುವ ಒಂದೇ ಮಾರ್ಗ ಅಂದ್ರೆ ಎಲ್ಲಾ ಹೆಣ್ಣು ಮಕ್ಕಳು ತಮ್ಮ ತಮ್ಮ ಬ್ಯಾಗ್ ನಲ್ಲಿ ತ್ರಿಶೂಲ ಇಟ್ಕೊಬೇಕು’ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ:
भीमटे को देखो, पुलिसवाली की कमर में हाथ डाल रहा है, आज इसको पूरे 75% आरक्षण मिलेगा 👇😂pic.twitter.com/kXAX8CIA8U
— Sakshi Sonam … 👭 (@Sakshi__Sonam__) April 9, 2025
ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ ಪ್ರತಿಭಟನೆಯೂ ನಡೆಯುತ್ತಿರುವುದನ್ನು ಕಾಣಬಹುದು. ಈ ವೇಳೆಯಲ್ಲಿ ಪ್ರತಿಭಟನೆಯಲ್ಲಿ ನಿರತರಾದ ವ್ಯಕ್ತಿಗಳು ತಳ್ಳಾಟ ನಡೆಸುತ್ತಿದ್ದಾರೆ. ಈ ವೇಳೆ ಪೊಲೀಸ್ ತಂಡವು ವ್ಯಕ್ತಿ ಗಳನ್ನು ಬಂಧಿಸಲು ಮುಂದಾಗಿದ್ದಾರೆ. ಇದೇ ವೇಳೆ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಯ ವೇಳೆ ಅನುಚಿತವಾಗಿ ವರ್ತಿಸಿದ್ದಾರೆ. ಹೌದು, ಹಿಂದೆಯಲ್ಲಿದ್ದ ವ್ಯಕ್ತಿಯೂ ಮಹಿಳಾ ಪೊಲೀಸ್ ಸಿಬ್ಬಂದಿಯ ಸೊಂಟವನ್ನು ಹಿಡಿದು ಅನುಚಿತವಾಗಿ ವರ್ತಿಸಿದ್ದಾನೆ. ಈ ವೇಳೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯೂ ತಕ್ಷಣವೇ ಪ್ರತಿಕ್ರಿಯೆ ನೀಡಿದ್ದು, ಆ ವ್ಯಕ್ತಿಯನ್ನು ಬಂಧಿಸಲು ವ್ಯಾನ್ ಕಡೆಗೆ ಎಳೆದುಕೊಂಡು ಹೋಗುವುದನ್ನು ಕಾಣಬಹುದು.
ಇದನ್ನೂ ಓದಿ: ಈ ಟೊಮೆಟೊದ ಬೆಲೆ 1,300 ರೂ., ಇದು ಯಾಕಿಷ್ಟು ದುಬಾರಿ, ಇಲ್ಲಿದೆ ನೋಡಿ
ಈ ವಿಡಿಯೋ ಆರು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಬಳಕೆದಾರರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ಈ ವಿಡಿಯೋಗೆ ಬಳಕೆದಾರರೊಬ್ಬರು ಪ್ರತಿಕ್ರಿಯಿಸಿದ್ದು, ‘ಅಣ್ಣಯ್ಯ ಎಲ್ಲ ಪಕ್ಷಗಳ ಕೆಲವೊಂದು ಜನ ಹೀಗೆ ಇದ್ದಾರೆ ಅದನ್ನು ಬಿಡಿಸಿ ಹೇಳ್ಬೆದ ಮೊದಲು ನಿಮ್ಮ ತಪ್ಪುಗಳ ಬಗ್ಗೆ ಸ್ವಲ್ಪ ಗಮನ ಕೊಡಿ ಬಂದುಬಿಟ್ಟ ಇಲ್ಲಿ ಹೋಗೋ ಮೊದಲು ನಿನ್ನ ಇತಿಹಾಸ ನೀನು ತಿಳಿದುಕೋ ಆಯ್ತಾ.. ಥೂ ನಿಮ್ ಜನ್ಮಕ್ಕೆ’ ಎಂದಿದ್ದಾರೆ. ಮತ್ತೊಬ್ಬರು, ‘ಅವನು ಸಿಕ್ಕ ಅವಕಾಶಗಳನ್ನು ಬಳಸಿಕೊಂಡಿದ್ದಾನೆ’ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು, ‘ಕರ್ತವ್ಯ ನಿರತರಾಗಿರುವ ಮಹಿಳಾ ಸಿಬ್ಬಂದಿಯ ಜೊತೆಗೆ ಈ ರೀತಿ ವರ್ತಿಸುವುದು ಎಷ್ಟು ಸರಿ, ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳು ಇಲ್ಲವೇ’ ಎಂದು ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ