ಮಾದಕ ವಸ್ತುಗಳ ಸೇವನೆಯ ಅಮಲಿನಲ್ಲೋ ಅಥವಾ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡೋ ಕೆಲವೊಬ್ಬರು ಸಾರ್ವಜನಿಕ ಸ್ಥಳಗಳಲ್ಲಿ ಸಂಪೂರ್ಣ ಬೆತ್ತಲಾಗಿ ಅಡ್ಡಾಡುತ್ತಿರುತ್ತಾರೆ. ವಿದೇಶಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಕೆಲವೊಬ್ಬರು ಬೆತ್ತಾಗಿ ಓಡಾಡುವ ಮೂಲಕ ಸಾರ್ವಜನಿಕರಿಗೆ ಇರಿಸು ಮುರಿಸು ಉಂಟು ಮಾಡುತ್ತಿರುತ್ತಾರೆ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬ ಸಂಪೂರ್ಣವಾಗಿ ಬೆತ್ತಲಾಗಿ ನಡುರಸ್ತೆಯಲ್ಲಿ ನಿಲ್ಲುವ ಮೂಲಕ ವಾಹನ ಸಂಚಾರಕ್ಕೆ ಅಡ್ಡಿಯುಂಟುಮಾಡಿದ್ದಾನೆ. ಈತನ ಈ ದುರ್ವರ್ತನೆಯಿಂದ ಕೋಪಗೊಂಡ ವ್ಯಕ್ತಿಯೊಬ್ಬ ಕಾರಿನಿಂದ ಇಳಿದು ಬಂದು ಈತನ ಕಾಪಳಕ್ಕೆ ಬಾರಿಸಿ ಗ್ರಹಚಾರ ಬಿಡಿಸಿದ್ದಾರೆ, ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈ ಘಟನೆ ರಷ್ಯಾದಲ್ಲಿ ನಡೆದಿದ್ದು, ನಗರದ ಬೀದಿಯೊಂದರಲ್ಲಿ ಬೆತ್ತಲಾಗಿ ಬಂದಂತಹ ವ್ಯಕ್ತಿಯೊಬ್ಬ ರಸ್ತೆ ಮಧ್ಯ ನಿಂತು ವಾಹನ ಸಂಚಾರಕ್ಕೆ ಅಡ್ಡಿಯುಂಟುಮಾಡಿದ್ದಾನೆ. ಇದರಿಂದ ಕೋಪಗೊಂಡ ವಾಹನ ಸವಾರನೊಬ್ಬ ಕಾರಿನಿಂದ ಇಳಿದು ಬಂದು ನಗ್ನ ವ್ಯಕ್ತಿಯ ಕಪಾಳಕ್ಕೆ ಬಾರಿಸುವ ಮೂಲಕ ಆತನಿಗೆ ತಕ್ಕ ಪಾಠ ಕಲಿಸಿದ್ದಾನೆ. 2020 ರಲ್ಲಿ ನಡೆದ ಈ ಘಟನೆಯ ವಿಡಿಯೋ ಇದೀಗ ಮತ್ತೊಮ್ಮೆ ವೈರಲ್ ಆಗುತ್ತಿದೆ.
Knocked his egg roll in the dirt. pic.twitter.com/YtOXzAEI6p
— Steve Inman (@SteveInmanUIC) June 13, 2024
ಈ ವಿಡಿಯೋವನ್ನು @SteveInmanUIC ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ನಡು ರಸ್ತೆಯಲ್ಲಿ ಬೆತ್ತಲಾಗಿ ನಿಂತಿರುವ ದೃಶ್ಯವನ್ನು ಕಾಣಬಹುದು. ಈತ ಕೇವಲ ಬೆತ್ತಲಾಗಿ ಬಂದಿದ್ದು ಮಾತ್ರವಲ್ಲದೆ ನಡು ರಸ್ತೆಯಲ್ಲಿ ನಿಂತುಕೊಳ್ಳುವ ಮೂಲಕ ವಾಹನ ಸಂಚಾರಕ್ಕೂ ಅಡ್ಡಿಪಡಿಸಿದ್ದಾನೆ. ಈತ ರಸ್ತೆಯಿಂದ ಪಕ್ಕ ಸರಿಯದೇ ಇರುವುದನ್ನು ಕಂಡ ವಾಹನ ಸವಾರನೊಬ್ಬ ಕಾರಿನಿಂದ ಇಳಿದು ಬಂದು ಒಂದೇಟು ಆತನ ಕಪಾಳಕ್ಕೆ ಹೊಡೆದಿದ್ದಾನೆ. ಕೊಟ್ಟ ಒಂದು ಏಟಿಗೆ ನಗ್ನ ವ್ಯಕ್ತಿ ಅಲ್ಲೇ ಕುಸಿದು ಬಿದ್ದಿದ್ದಾನೆ.
ಇದನ್ನೂ ಓದಿ: ಮಳೆಗೆ ನಡುರಸ್ತೆಯಲ್ಲೇ ಪ್ರೇಮಿಗಳ ರೋಮ್ಯಾಂಟಿಕ್ ಡ್ಯಾನ್ಸ್; ವಿಡಿಯೋ ವೈರಲ್
ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 5 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಹೀಗೆ ಹುಚ್ಚಾಟ ಮೆರೆಯುವವರಿಗೆ ಇದು ತಕ್ಕ ಶಿಕ್ಷೆ ಎಂದು ನೆಟ್ಟಿಗರು ಕಾಮೆಂಟ್ಸ್ ಮಾಡಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: