Viral Video: ನಡುರಸ್ತೆಯಲ್ಲಿ ಬೆತ್ತಲೆಯಾಗಿ ಓಡಿ ಕಾರಿಗೆ ಡಿಕ್ಕಿ ಹೊಡೆದ ವ್ಯಕ್ತಿ

| Updated By: ಅಕ್ಷಯ್​ ಪಲ್ಲಮಜಲು​​

Updated on: May 20, 2024 | 12:39 PM

ತಾವು ಹುಚ್ಚಾಟ ಮೆರೆಯುತ್ತಾ ಸಾರ್ವಜನಿಕರಿಗೆ ತೊಂದರೆ ಕೊಡುವಂತಹ ಪುಂಡ ಹುಡುಗರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಸದ್ಯ ಅಂತಹದ್ದೇ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ ಬೆತ್ತಲಾಗಿ ಓಡುತ್ತಾ ಬಂದು ರಸ್ತೆ ಮಧ್ಯೆ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಕುರಿತ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Viral Video: ನಡುರಸ್ತೆಯಲ್ಲಿ ಬೆತ್ತಲೆಯಾಗಿ ಓಡಿ ಕಾರಿಗೆ ಡಿಕ್ಕಿ ಹೊಡೆದ ವ್ಯಕ್ತಿ
Follow us on

ಕೆಲವು ಸೈಕೋ  ಅಥವಾ ಮಾದಕ ವ್ಯಸನಿಗಳು ಸಾರ್ವಜನಿಕ ಸ್ಥಳಗಳಲ್ಲಿ ಹುಚ್ಚಾಟ ಮೆರೆಯುತ್ತಾ ಇತರರಿಗೂ ತೊಂದರೆ ಕೊಡುತ್ತಿರುತ್ತಾರೆ. ಇಂತಹ ಅತಿರೇಕರದ ವರ್ತನೆಗಳ ಕುರಿತ ಸುದ್ದಿಗಳು ಆಗಾಗ್ಗೆ ಕೇಳಿಬರುತ್ತಿರುತ್ತವೆ. ಸೋಷಿಯಲ್ ಮೀಡಿಯಾಗಳಲ್ಲೂ ಇಂತಹ ವಿಡಿಯೋಗಳು ಹರಿದಾಡುತ್ತಿರುತ್ತದೆ. ಇದೀಗ ಅಂತಹದ್ದೇ ವಿಡಿಯೋವೊಂದು ಹರಿದಾಡುತ್ತಿದ್ದು, ಯುವಕನೊಬ್ಬ ಸಾರ್ವಜನಿಕವಾಗಿ ಬೆತ್ತಲಾಗಿ ಓಡುತ್ತಾ ಬಂದು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಕುರಿತ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಈ ಘಟನೆ ಅಮೇರಿಕಾದ ಲಾಸ್ ಏಂಜಲೀಸ್ ಅಲ್ಲಿ ನಡೆದಿದ್ದು, ಯುವಕನೊಬ್ಬ ಅರೆಬೆತ್ತಲಾಗಿ ಓಡುತ್ತಾ ರಸ್ತೆ ಮಧ್ಯೆ ಬಂದು ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆ ಯುವಕ ಮಾನಸಿಕ ಅಸ್ವಸ್ಥನಾಗಿದ್ದು, ಆತನಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ:


ಈ ಕುರಿತ ವಿಡಿಯೋವನ್ನು @RestrictedVids ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಬೆತ್ತಲೆ ವ್ಯಕ್ತಿ ಟ್ರಾಫಿಕ್ ಮಧ್ಯೆ ಓಡುತ್ತಾ ಹೋಗಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ಇದನ್ನೂ ಓದಿ: ಅವ್ರು ಅದೃಷ್ಟ ದೇವತೆ ಕಣ್ರೋ; RCB ಸೋಲಿಗೆ ಅಶ್ವಿನಿ ಕಾರಣ ಎಂದು ನಿಂದಿಸಿದವರಿಗೆ ಇದು ಸರಿಯಾದ ಉತ್ತರ

ವೈರಲ್ ಆಗಿರುವ ವಿಡಿಯೋದಲ್ಲಿ ಬೆತ್ತಲಾಗಿದ್ದ ವ್ಯಕ್ತಿಯೊಬ್ಬ ಬೇಲಿಯಿಂದ ಜಿಗಿದು ನೇರ ಸಾರ್ವಜನಿಕರು ಓಡಾಡುವಂತಹ ರಸ್ತೆಯ ಬಳಿ ಓಡುತ್ತಾ ಬರುತ್ತಾನೆ. ರಸ್ತೆಯಲ್ಲಿ ವಾಹನಗಳು ಓಡಾಡುತ್ತಿರುತ್ತವೆ, ನಿಧಾನಕ್ಕೆ ಚಲಿಸಬೇಕು ಎಂಬ ಪರಿಜ್ಞಾನವೂ ಇಲ್ಲದೆ ಆತ ನಡುರಸ್ತೆಯಲ್ಲಿ ಓಡುತ್ತಾ ಹೋಗಿ, ನಿಧಾನಕ್ಕೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳುವಂತಹ ದೃಶ್ಯವನ್ನು ಕಾಣಬಹುದು.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ