AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: “ನಮಾಜ್” ಸಂಸ್ಕೃತ ಪದ; ವೈರಲ್ ಆಗುತ್ತಿದೆ ಮುಸ್ಲಿಂ ಧರ್ಮಗುರು ಹೇಳಿಕೆ

ನಮಾಜ್ ಎನ್ನುವುದು ಸಂಸ್ಕೃತ ಪದವಂತೆ. ಈ ಕುರಿತ ಅರ್ಥಪೂರ್ಣ ಮಾಹಿತಿಯೊಂದನ್ನು ಮುಸ್ಲಿಂ ಧರ್ಮ ಗುರುಗಳೊಬ್ಬರು ಸಂದರ್ಶನವೊಂದರಲ್ಲಿ ಹಂಚಿಕೊಂಡಿದ್ದು, ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

Video: ನಮಾಜ್ ಸಂಸ್ಕೃತ ಪದ; ವೈರಲ್ ಆಗುತ್ತಿದೆ ಮುಸ್ಲಿಂ ಧರ್ಮಗುರು ಹೇಳಿಕೆ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Jul 23, 2024 | 5:54 PM

Share

ಆಧ್ಯಾತ್ಮ ಭಾವವನ್ನು ವೃದ್ಧಿಗೊಳಿಸಿ ಆತ್ಮಶುದ್ಧಿಗಾಗಿ ಮುಸ್ಲಿಮರು ಪ್ರತಿದಿನ 5 ಬಾರಿ ನಮಾಜ್ ಮಾಡುತ್ತಾರೆ. ಹೆಚ್ಚಿನವರು ಈ ನಮಾಜ್ ಎಂಬ ಪದ ಉರ್ದು ಭಾಷೆಯಿಂದ ಬಂದಿರಬಹುದು ಅಂತ ಭಾವಿಸಿರುತ್ತಾರೆ. ಆದ್ರೆ ನಿಮ್ಗೊತ್ತಾ ನಮಾಜ್ ಎಂಬುದು ಸಂಸ್ಕೃತ ಪದ. ಈ ಕುರಿತ ಮಾಹಿತಿಯನ್ನು ಮುಸ್ಲಿಂ ಧರ್ಮ ಗುರುಗಳೊಬ್ಬರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಸಂದರ್ಶನವೊಂದರಲ್ಲಿ ಅಖಿಲ ಭಾರತ ಇಮಾಮ್ ಸಂಘದ ಮುಖ್ಯಸ್ಥ ಡಾ. ಇಮಾಮ್ ಉಮರ್ ಇಲ್ಯಾಸಿ ಅವರು ನಮಾಜ್ ಎಂಬುದು ಸಂಸ್ಕೃತ ಪದ ಎಂಬ ವಿಚಾರವನ್ನು ಹಂಚಿಕೊಂಡಿದ್ದಾರೆ. ಅವರು ಹೇಳುತ್ತಾರೆ, ನಮಾಜ್ ಎಂಬ ಪದದ ಮೂಲ ಭಾರತದ್ದು, ಅದು ಸಂಸ್ಕೃತ ಪದವಾದ ನಮಃ ದಿಂದ ಬಂದಿದೆ. ಅದರ ಅರ್ಥ ಈಶ್ವರನಿಗೆ ತಲೆ ಬಾಗಿ ನಮಸ್ಕರಿಸುವುದು ಅಂತಾ. ಅರಬ್ ದೇಶದವರಿಗೆ ನಮಾಜ್ ಎಂಬ ಪದದ ಬಗ್ಗೆ ಗೊತ್ತಿಲ್ಲ. ಅವರು ಪ್ರಾರ್ಥನೆಗೆ ಸಲಾಹ್ ಎಂದು ಹೇಳುತ್ತಾರೆ ಎಂಬುದನ್ನು ವಿವರಿಸಿದ್ದಾರೆ.

ಇದನ್ನೂ ಓದಿ: ಗಂಗಾ ನದಿಯಲ್ಲಿ ಮುಳುಗುತ್ತಿದ್ದ ಶಿವಭಕ್ತನ ಪ್ರಾಣ ಉಳಿಸಿದ ಮುಸ್ಲಿಂ ಯೋಧ; ಇದು ಭಾರತೀಯ ಸಂಸ್ಕೃತಿ ಎಂದ ನೆಟ್ಟಿಗರು

ಈ ಕುರಿತ ಇಂಟೆರೆಸ್ಟಿಂಗ್ ವಿಡಿಯೋವನ್ನು religionworld ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಜುಲೈ 9 ರಂದು ಹಂಚಿಕೊಳ್ಳಲಾದ ಈ ವಿಡಿಯೋ 5 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಈ ವಿಚಾರ ನಮಗೆ ಗೊತ್ತೇ ಇರ್ಲಿಲ್ಲ, ಇಂತಹ ಅದ್ಭುತ ಮಾಹಿತಿ ತಿಳಿಸಿಕೊಟ್ಟಿದ್ದಕ್ಕೆ ನಿಮಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ‘ಒಳ್ಳೆಯ ಮಾಹಿತಿ’ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!