ಕಾಲೇಜಿನಲ್ಲಿ ಏರ್ಪಡಿಸಿದ್ದ ಸರಸ್ವತಿ ಪೂಜೆಯಲ್ಲಿ ವಿದ್ಯಾರ್ಥಿನಿಯ ಅಶ್ಲೀಲ ನೃತ್ಯ ಪ್ರದರ್ಶನ; ವಿಡಿಯೋ ವೈರಲ್‌

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ದೃಶ್ಯಗಳು ನೆಟ್ಟಿಗರ ಕೆಂಗಣ್ಣಿನಿಗೆ ಗುರಿಯಾಗುತ್ತಿರುತ್ತವೆ. ಸದ್ಯ ಅಂತಹದ್ದೊಂದು ವಿಡಿಯೋ ಇದೀಗ ವೈರಲ್‌ ಆಗಿದ್ದು, ವಿದ್ಯಾರ್ಥಿನಿಯೋರ್ವಳು ಕಾಲೇಜಿನಲ್ಲಿ ಏರ್ಪಡಿಸಿದ್ದ ಸರಸ್ವತಿ ಪೂಜೆಯಲ್ಲಿ ಅಸಭ್ಯವಾಗಿ ಡ್ಯಾನ್ಸ್‌ ಮಾಡಿದ್ದಾಳೆ. ಸರಸ್ವತಿ ಪೂಜೆಯ ವೇಳೆ ಹೀಗೆ ಅಸಭ್ಯ ನೃತ್ಯ ಮಾಡಿದ್ದಕ್ಕೆ ನೋಡುಗರು ಯುವತಿಯ ವಿರುದ್ಧ ಭಾರಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಕಾಲೇಜಿನಲ್ಲಿ ಏರ್ಪಡಿಸಿದ್ದ ಸರಸ್ವತಿ ಪೂಜೆಯಲ್ಲಿ ವಿದ್ಯಾರ್ಥಿನಿಯ ಅಶ್ಲೀಲ ನೃತ್ಯ ಪ್ರದರ್ಶನ; ವಿಡಿಯೋ ವೈರಲ್‌
ವೈರಲ್ ವಿಡಿಯೋ
Updated By: ಅಕ್ಷಯ್​ ಪಲ್ಲಮಜಲು​​

Updated on: Feb 11, 2025 | 5:41 PM

ಸರಸ್ವತಿ ಪೂಜೆಯನ್ನು ಪ್ರತಿವರ್ಷ ಬಹಳ ಭಕ್ತಿಪೂರ್ವಕವಾಗಿ ಆಚರಿಸಲಾಗುತ್ತದೆ. ಇನ್ನೂ ಕೆಲವು ಶಾಲಾ ಕಾಲೇಜುಗಳಲ್ಲೂ ಸರಸ್ವತಿ ಪೂಜೆಯನ್ನು ಆಚರಿಸಲುವ ಸಂಪ್ರದಾಯವಿದೆ. ಅದೇ ರೀತಿ ಇಲ್ಲೊಂದು ಎಂಜಿನಿಯರಿಂಗ್‌ ಕಾಲೇಜಿನಲ್ಲೂ ಸರಸ್ವತಿ ಪೂಜೆ ಏರ್ಪಡಿಸಿದ್ದು, ದುಃಖಕರ ಸಂಗತಿಯೇನೆಂದರೆ ಈ ಪವಿತ್ರ ಕಾರ್ಯ ನಡೆಯುವ ಸಂದರ್ಭದಲ್ಲಿ ವಿದ್ಯಾರ್ಥಿನಿಯೋರ್ವಳು ಅಶ್ಲೀಲ ಡ್ಯಾನ್ಸ್‌ ಮಾಡಿದ್ದಾಳೆ. ಹೌದು ಆಕೆ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಸರಸ್ವತಿ ಪೂಜೆಯ ಸಂದರ್ಭದಲ್ಲಿ ಸ್ಟೇಜ್‌ ಮೇಲೆ ಅಸಭ್ಯ ನೃತ್ಯ ಪ್ರದರ್ಶನ ಮಾಡಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದ್ದು, ಹೀಗೆ ಅಸಭ್ಯ ನೃತ್ಯ ಮಾಡಿದ್ದಕ್ಕೆ ನೆಟ್ಟಿಗರು ಯುವತಿಯ ವಿರುದ್ಧ ಭಾರಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಘಟನೆ ನೇಪಾಳದಲ್ಲಿ ನಡೆದಿದ್ದು, ಎಂಜಿನಿಯರಿಂಗ್‌ ಕಾಲೇಜು ವಿದ್ಯಾರ್ಥಿನಿಯೋರ್ವಳು ಸರಸ್ವತಿ ಪೂಜೆಯ ಸಂದರ್ಭದಲ್ಲಿ ಅಶ್ಲೀಲ ನೃತ್ಯ ಪ್ರದರ್ಶನ ಮಾಡಿ ಟೀಕೆಗೆ ಗುರಿಯಾಗಿದ್ದಾಳೆ. ಈ ಕುರಿತ ವಿಡಿಯೋವನ್ನು tedhi.soch ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಶೇರ್‌ ಮಾಡಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಸರಸ್ವತಿ ಪೂಜೆಯ ವೇಳೆ ವಿದ್ಯಾರ್ಥಿನಿಯೋರ್ವಳು ಸ್ಟೇಜ್‌ ಮೇಲೆ ಅಶ್ಲೀಲ ನೃತ್ಯ ಪ್ರದರ್ಶನ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:


ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 41 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಹೀಗೆ ಡ್ಯಾನ್ಸ್‌ ಮಾಡಲು ಅವಕಾಶ ಮಾಡಿಕೊಟ್ಟವರು ಯಾರುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇದರಲ್ಲಿ ತಪ್ಪೇನಿದೆʼ ಎಂದು ಕೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼನಿಜಕ್ಕೂ ಇದು ಬೇಸರದ ಸಂಗತಿʼ ಎಂದು ಹೇಳಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ