ಬೆಂಗಳೂರಿನಲ್ಲಿ ಭಾರೀ ಮಳೆ; ವರ್ಕ್​ ಫ್ರಂ ಹೋಮ್​ಗೆ ವಿನಂತಿಸಿಕೊಳ್ಳುತ್ತಿರುವ ನೆಟ್ಟಿಗರು

BengaluruRains : ‘ಬೆಂಗಳೂರಿನಲ್ಲಿ ರಸ್ತೆಗಳು ಮುಳುಗಿವೆ. ಕ್ಯಾಬ್​ಗಳ ಬೆಲೆ ಗಗನಕ್ಕೆ. ಆಟೋಗಳು ದುಪ್ಪಟ್ಟು ಹಣ, ಟ್ರಾಫಿಕ್ ಜಾಮ್​, ದಯವಿಟ್ಟು ಕಂಪೆನಿಗಳು ವರ್ಕ್​ ಫ್ರಂ ಹೋಂಗೆ ಅವಕಾಶ ಕಲ್ಪಿಸಿಕೊಡಬೇಕು’ ಎಂದು ನೆಟ್ಟಿಗರು ಕೇಳಿಕೊಳ್ಳುತ್ತಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಮಳೆ; ವರ್ಕ್​ ಫ್ರಂ ಹೋಮ್​ಗೆ ವಿನಂತಿಸಿಕೊಳ್ಳುತ್ತಿರುವ ನೆಟ್ಟಿಗರು
ಮಳೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Oct 21, 2022 | 6:37 PM

Viral Video : ಮಳೆಯ ರೌದ್ರಾವತಾರದಿಂದ ಬೆಂಗಳೂರು ಮುಳುಗೇಳುತ್ತಿದೆ. ಹಾಗಾಗಿ ನೆಟ್ಟಿಗರು ಮನೆಯಿಂದಲೇ ಕೆಲಸ ಮಾಡಲು ಅನುಕೂಲ ಮಾಡಿಕೊಡುವಂತೆ ಕಂಪೆನಿಗಳಿಗೆ ವಿನಂತಿಸಿಕೊಳ್ಳುತ್ತಿದ್ದಾರೆ. ನೀರಿನಿಂದ ಆವೃತಗೊಂಡಿರುವ ಇಲ್ಲಿಯ ಪ್ರದೇಶಗಳು, ರಸ್ತೆಗಳು, ಮನೆಗಳನ್ನು ನೋಡುತ್ತಿದ್ದರೆ ಭಯವಾಗುತ್ತಿದೆ. ಹಾಗಾಗಿ ಕಂಪೆನಿಗಳು ತಮ್ಮ ನೌಕರರಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಹೇಳುತ್ತ ಮಳೆಗೆ ಸಂಬಂಧಿಸಿದ ವಿಡಿಯೋ, ಫೋಟೋಗಳೊಂದಿಗೆ #bengalururains ಎಂಬ ಹ್ಯಾಶ್‌ಟ್ಯಾಗಿನಡಿ ಟ್ವೀಟ್​ ಮಾಡಲಾರಂಭಿಸಿದ್ದಾರೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಬೆಂಗಳೂರಿನಲ್ಲಿ ಬುಧವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಪ್ರವಾಹದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳು ನೀರಿನಲ್ಲಿ ಮುಳುಗಿ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದೆ. ಟ್ರಾಫಿಕ್​ ಜಾಮ್​ನಿಂದಾಗಿ ಜನರು ಮನೆ ಮತ್ತು ಆಫೀಸು ತಲುಪಲು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಜೊತೆಗೆ ಕ್ಯಾಬ್​ಗಳ ಬೆಲೆ ಗಗನಕ್ಕೇರುತ್ತಿವೆ. ಕ್ಯಾಬ್​ ಬುಕ್ ಮಾಡುವುದು ಕಷ್ಟವಾಗುತ್ತಿದೆ. ಬುಕ್​ ಮಾಡಿದರೂ ಕ್ಯಾನ್ಸಲ್ ಚಾಲಕರು  ಮಾಡುತ್ತಿದ್ದಾರೆ. ಇನ್ನು ಆಟೋ ಡ್ರೈವರ್​ಗಳು ಮೀಟರ್​ ಹಾಕದೆ ದುಪ್ಪಟ್ಟು ಹಣವನ್ನು ಕೇಳುತ್ತಿದ್ದಾರೆ. ಒಟ್ಟಾರೆಯಾಗಿ ಮಳೆಯಿಂದ ಎಲ್ಲರಿಗೂ ತೊಂದರೆಯಾಗಿ ಪರಿಸ್ಥಿತಿ ಬಿಗಡಾಯಿಸುತ್ತಿದೆ ಎಂಬ ಕಾರಣಗಳನ್ನು ನೆಟ್ಟಿಗರು ವಿವರಿಸಿದ್ದಾರೆ.

ಇನ್ನು ಬೆಂಗಳೂರು ಐಟಿ ರಾಜಧಾನಿ. ಸಾಮಾನ್ಯವಾಗಿ ಎಲ್ಲ ಕಂಪೆನಿಗಳು ಕೊರೊನಾ ಸಂದರ್ಭದಲ್ಲಿಯೇ ವರ್ಕ್​ ಫ್ರಂ ಹೋಂ ಸಂಸ್ಕೃತಿಯನ್ನು ರೂಢಿಸಿಕೊಂಡಾಗಿದೆ. ಹಾಗಾಗಿ ಈಗಲೂ ವರ್ಕ್​ ಫ್ರಂ ಹೋಂ ಮುಂದುವರಿಸಿದರೆ ಸಮಸ್ಯೆ ಉಂಟಾಗಲಾರದು ಎಂದಿದ್ದಾರೆ ಇನ್ನೂ ಕೆಲವರು.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸೂಚನೆ ಇದೆ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 6:30 pm, Fri, 21 October 22

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ