Viral: ಅಪ್ರಾಪ್ತ ಬಾಲಕನ ಜತೆ ಲೈಂಗಿಕ ಸಂಬಂಧ, ಪೊಲೀಸರ ಅತಿಥಿಯಾದ ಶಿಕ್ಷಕಿ

ಪುರುಷ ಶಿಕ್ಷಕರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಹಲವು ಪ್ರಕರಣಗಳು ಈ ಹಿಂದೆಯೂ ನಡೆದಿದೆ. ಅಂತಹದೇ ಆಘಾತಕಾರಿ ಘಟನೆಯೊಂದು ಇದೀಗ ನಡೆದಿದ್ದು, ಮಹಿಳಾ ಶಿಕ್ಷಕಿಯೊಬ್ಬರು ತನ್ನ ಕರ್ತವ್ಯವನ್ನೇ ಮರೆತು ಶಾಲೆಯ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌಜರ್ನ್ಯವೆಸಗಿದ್ದಾರೆ. ಲೈಂಗಿಕ ಕಿರುಕುಳದ ಆರೋಪದಡಿ ಶಿಕ್ಷಕಿಯನ್ನು ಬಂಧಿಸಲಾಗಿದ್ದು, ಈ ಆಘಾತಕಾರಿ ಸುದ್ದಿ ಇದೀಗ ವೈರಲ್‌ ಆಗುತ್ತಿದೆ.

Viral: ಅಪ್ರಾಪ್ತ ಬಾಲಕನ ಜತೆ ಲೈಂಗಿಕ ಸಂಬಂಧ, ಪೊಲೀಸರ ಅತಿಥಿಯಾದ ಶಿಕ್ಷಕಿ
ವೈರಲ್​​ ಚಿತ್ರ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 03, 2024 | 10:13 AM

ಪ್ರತಿಯೊಬ್ಬ ವಿದ್ಯಾರ್ಥಿಗಳ ಜೀವನದಲ್ಲೂ ಶಿಕ್ಷಕರ ಪಾತ್ರ ಅಪಾರವಾದದ್ದು. ಅವರು ನಡೆಯುವ ದಾರಿ ಸಾವಿರಾರು ಮಕ್ಕಳಿಗೆ ದಾರಿದೀಪ. ಹೀಗೆ ತಮ್ಮ ಶಿಷ್ಯರನ್ನು ತಿದ್ದಿ ತೀಡಿ ಅವರಿಗೆ ಉತ್ತಮ ಸಂಸ್ಕಾರ, ವಿದ್ಯೆಯನ್ನು ಧಾರೆಯೆರೆಯುವ ಗುರುಗಳಿಗೆ ದೇವರ ಸ್ಥಾನವನ್ನು ನೀಡಲಾಗಿದೆ. ಆದ್ರೆ ಇಲ್ಲೊಬ್ಬ ಶಿಕ್ಷಕಿ ವೃತ್ತಿ ಮೌಲ್ಯ, ತನ್ನ ಕರ್ತವ್ಯವನ್ನೇ ಮರೆತು ಶಾಲೆಯ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಇದೀಗ ಲೈಂಗಿಕ ಕಿರುಕುಳದ ಆರೋಪದಡಿ ಶಿಕ್ಷಕಿಯನ್ನು ಬಂಧಿಸಲಾಗಿದೆ.

ಈ ಆಘಾತಕಾರಿ ಘಟನೆ ಅಮೇರಿಕಾದ ನ್ಯೂಜೆರ್ಸಿಯಲ್ಲಿ ನಡೆದಿದ್ದು, ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಇಲ್ಲಿನ ಫ್ರೀಹೋಲ್ಡ್‌ ಇಂಟರ್‌ ಮೀಡಿಯೇಟ್‌ ಶಾಲೆಯ ಶಿಕ್ಷಕಿ ಅಲಿಸನ್‌ ಹ್ಯಾವ್‌ಮೆನ್‌ (43) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ದಿನಗಳ ಹಿಂದೆ ಅಮೇರಿಕಾದ ನ್ಯೂಯಾರ್ಕ್‌ ನಗರದಲ್ಲಿನ ಪ್ರತಿಷ್ಠಿತ ಶಾಲೆಯೊಂದರಲ್ಲಿ ಇದೇ ರೀತಿಯ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಇದೀಗ ನ್ಯೂಜೆರ್ಸಿಯ ಶಾಲೆಯೊಂದರಲ್ಲಿಯೂ ಇಂತಹದೇ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಈ ಚಿಂಪಾಂಜಿಗೂ ಇನ್‌ಸ್ಟಾಗ್ರಾಮ್‌ ಹುಚ್ಚು, ಇದು ಫೋನ್‌ ನೋಡ್ತಾ ಕೂತ್ರೆ ಏಳೋದೇ ಇಲ್ಲ

ಈ ವರ್ಷದ ಆರಂಭದಲ್ಲಿಯೇ ಅಲಿಸನ್‌ ವಿದ್ಯಾರ್ಥಿಯೊಬ್ಬನಿಗೆ ಲೈಂಗಿಕ ಕಿರುಕುಳವನ್ನು ನೀಡಲು ಪ್ರಾರಂಭಿಸಿದ್ದು, ಈ ವಿಷಯ ಹೊರ ಬೀಳುತ್ತಿದ್ದಂತೆ ಪೊಲೀಸರು ಶಿಕ್ಷಕಿಯ ವಿರುದ್ಧ ಪ್ರಕರಣವನ್ನು ದಾಖಲಿಸಿ, ಆಕೆಯನ್ನು ಬಂಧಿಸಿದ್ದಾರೆ. ಪ್ರಸ್ತುತ ಈ ಶಿಕ್ಷಕಿಯನ್ನು ಹೆಚ್ಚಿನ ವಿಚಾರಣೆಗಾಗಿ ಮಾನ್‌ಮೌತ್‌ ಕೌಂಟಿಯ ಜೈಲಿನಲ್ಲಿ ಇರಿಸಲಾಗಿದೆ ಎಂದು ನ್ಯೂಯಾರ್ಕ್‌ ಪೋಸ್ಟ್‌ ವರದಿ ಮಾಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್