AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ನನ್ನ ಮಗುವಿನ ಫಸ್ಟ್‌ ಫ್ಲೈಟ್; ಹೃದಯಸ್ಪರ್ಶಿ ಸಂದೇಶದೊಂದಿಗೆ ಸಹಪ್ರಯಾಣಿಕರಿಗೆ ಕ್ಯೂಟ್ ಗಿಫ್ಟ್‌ ಹಂಚಿದ ತಾಯಿ

ಸಾಮಾನ್ಯವಾಗಿ ವಿಮಾನದಲ್ಲಿ ಪ್ರಯಾಣಿಸುವಾಗ ಮಕ್ಕಳು ಅಳಲು ಆರಂಭಿಸುತ್ತಾರೆ. ಕೆಲವೊಂದು ಬಾರಿ ಪುಟಾಣಿ ಮಕ್ಕಳ ಚೀರಾಟ ಸಹ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತವೆ. ಈ ನಿಟ್ಟಿನಲ್ಲಿ ಇಲ್ಲೊಬ್ಬರು ನವಜಾತ ಶಿಶುವಿನ ತಾಯಿ ಗೂಡೀಸ್‌ ಬ್ಯಾಗ್‌ ಜೊತೆ ಹೃದಯಸ್ಪರ್ಶಿ ಸಂದೇಶವೊಂದನ್ನು ಬರೆದು ಸಹ ಪ್ರಯಾಣಿಕರಿಗೆ ಹಂಚಿದ್ದಾರೆ. ಮಗುವಿನ ಸಲುವಾಗಿ ತಾಯಿ ಕೊಟ್ಟ ಈ ಕ್ಯೂಟ್‌ ಗಿಫ್ಟ್‌ ಕಂಡು ಪ್ರಯಾಣಿಕರು ಭಾವುಕರಾಗಿದ್ದು, ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

ಇದು ನನ್ನ ಮಗುವಿನ ಫಸ್ಟ್‌ ಫ್ಲೈಟ್; ಹೃದಯಸ್ಪರ್ಶಿ ಸಂದೇಶದೊಂದಿಗೆ ಸಹಪ್ರಯಾಣಿಕರಿಗೆ ಕ್ಯೂಟ್ ಗಿಫ್ಟ್‌ ಹಂಚಿದ ತಾಯಿ
Trending News In Kannada (26)
ಮಾಲಾಶ್ರೀ ಅಂಚನ್​
| Edited By: |

Updated on: Feb 13, 2025 | 2:05 PM

Share

ಸಾಮಾನ್ಯವಾಗಿ ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣಿಸುವಾಗ ದೊಡ್ಡವರಾದ ನಮಗೆಯೇ ಸಿಕ್ಕಾಪಟ್ಟೆ ಭಯವಾಗುತ್ತದೆ. ಇನ್ನೂ ಪುಟಾಣಿ ಮಕ್ಕಳ ವಿಷಯ ಕೇಳಬೇಕೇ, ಖಂಡಿತವಾಗಿಯೂ ಆ ಮಕ್ಕಳು ಭಯ ಮತ್ತು ಕಿರಿಕಿರಿಯಿಂದ ಜೋರಾಗಿ ಅಳುತ್ತಾರೆ. ಹೀಗೆ ವಿಮಾನ ಪ್ರಯಾಣದ ಸಂದರ್ಭದಲ್ಲಿ ಮಕ್ಕಳು ಅಳುವಂತಹದ್ದು ಸಾಮಾನ್ಯ. ಆದ್ರೆ ಮಕ್ಕಳ ಈ ಚೀರಾಟ ಸಹ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುತ್ತದೆ. ಹೀಗಿರುವಾಗ ಇಲ್ಲೊಬ್ರು ನವಜಾತ ಶಿಶುವಿನ ತಾಯಿ ತಮ್ಮ ಮಗುವಿನ ಸಲುವಾಗಿ ಸಹ ಪ್ರಯಾಣಿಕರಿಗೆ ಕ್ಯೂಟ್‌ ಗಿಫ್ಟ್‌ ಒಂದನ್ನು ನೀಡಿದ್ದಾರೆ. ಗೂಡೀಸ್‌ ಬ್ಯಾಗ್‌ ಜೊತೆ ಹೃದಯಸ್ಪರ್ಶಿ ಸಂದೇಶವೊಂದನ್ನು ಬರೆದು ಸಹ ಪ್ರಯಾಣಿಕರಿಗೆ ಕೊಟ್ಟಿದ್ದು, ತಾಯಿ ಕೊಟ್ಟ ಈ ಕ್ಯೂಟ್‌ ಗಿಫ್ಟ್‌ ಕಂಡು ಪ್ರಯಾಣಿಕರು ಭಾವುಕರಾಗಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗುತ್ತಿದೆ.

“ಇದು ನನ್ನ ಮೊದಲ ವಿಮಾನಯಾನ. ನಾನು ಉತ್ತಮ ನಡವಳಿಕೆಯನ್ನು ತೋರುತ್ತೇನೆ ಎಂದು ಒಪ್ಪಂದ ಮಾಡಿಕೊಂಡಿದ್ದೇನೆ. ಆದರೆ ನಾನು ಯಾವುದೇ ಭರವಸೆಗಳನ್ನು ನೀಡಲು ಸಾಧ್ಯವಿಲ್ಲ. ನನ್ನ ಕಿವಿಗಳಲ್ಲಿ ನೋವು ಕಾಣಿಸಿಕೊಂಡರೆ ನಾನು ನಾನು ಅಳಬಹುದು. ಆಗ ನನ್ನೊಂದಿಗೆ ನೀವು ತಾಳ್ಮೆಯಿಂದ ಇರುತ್ತೀರಿ ಎಂದು ಭಾವಿಸುತ್ತೇನೆ. ಧನ್ಯವಾದ” ಎಂದು ಮಗುವಿನ ಪರವಾಗಿ ಭಾವನಾತ್ಮಕ ಸಂದೇಶವನ್ನು ಬರೆದು ತಾಯಿಯೊಬ್ಬರು ವಿಮಾನದಲ್ಲಿ ಸಹ ಪ್ರಯಾಣಿಕರಿಗೆ ಗೂಡೀಸ್‌ ಬ್ಯಾಗ್‌ ಹಂಚಿದ್ದಾರೆ.

ಈ ಕುರಿತ ವಿಡಿಯೋವನ್ನು ಎಲಿಯಾಟ್‌ ನಾರ್ರಿಸ್‌ (elliottnorris) ಎಂಬವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ನನ್ನ ಕಣ್ಣಂಚಲಿ ನೀರು ಬಂತು, ವಿಮಾನದಲ್ಲಿ ನವಜಾತ ಶಿಶುವಿನ ತಾಯಿ ಈ ಗೂಡೀಸ್‌ ಬ್ಯಾಗ್‌ನ್ನು ನಮ್ಗೆ ಕೊಟ್ರು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಯುವಕನೊಬ್ಬ ಮಗುವಿನ ಸಲುವಾಗಿ ತಾಯಿಯೊಬ್ಬರು ವಿಮಾನದಲ್ಲಿ ಸಹಪ್ರಯಾಣಿಕರಿಗೆಲ್ಲರಿಗೂ ಕೊಟ್ಟ ಗೂಡೀಸ್‌ ಬ್ಯಾಗ್‌ ಹಾಗೂ ಅದರಲ್ಲಿದ್ದ ಸಂದೇಶವನ್ನು ಕಂಡು ಭಾವುಕನಾದ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಭಾವಿ ಮಾವ ಕೊಟ್ಟ ಉಡುಗೊರೆ ಬಗ್ಗೆ ವ್ಯಂಗ್ಯವಾಡಿದ ಯುಪಿಎಸ್‌ಸಿ ಆಕಾಂಕ್ಷಿ; ರದ್ದಾದ ಮದುವೆ

ನಾಲ್ಕು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1.4 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದಂತೂ ತುಂಬಾ ಮುದ್ದಾಗಿದೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಿಜಕ್ಕೂ ಆಕೆ ಗ್ರೇಟ್‌ ತಾಯಿʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್