Viral News: ಏರ್‌ಪೋರ್ಟ್‌ಗೆ ಡ್ರಾಪ್ ಮಾಡಲು ಬರದ ಪ್ರಿಯಕರ; ಕೋರ್ಟ್ ಮೆಟ್ಟಿಲೇರಿದ ಯುವತಿ
ಇಂತಹ ಸಣ್ಣ ವಿಚಾರಗಳಿಗೆ ಯುವತಿ ತನ್ನ ಪ್ರಿಯಕರನೊಂದಿಗಿನ ಆರು ವರ್ಷಗಳ ಸಂಬಂಧವನ್ನು ಮುರಿದುಕೊಂಡಿದ್ದಾಳೆ. ಇದಲ್ಲದೆ, ವಿಮಾನದ ಟಿಕೇಟ್ಗೆ ಪಾವತಿಸಿದ ಹಣವನ್ನು ಆತ ನೀಡುವಂತೆ ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದಾಳೆ.
ಸಣ್ಣದೊಂದು ಮನಸ್ತಾಪ ಸಂಬಂಧವನ್ನು ಮುರಿಯಲು ಕಾರಣವಾಗಬಹುದು. ಇತ್ತೀಚೆಗೆ ಇಂತಹದ್ದೇ ಘಟನೆ ಬೆಳಕಿಗೆ ಬಂದಿದೆ. ಕ್ಷುಲ್ಲಕ ವಿಚಾರಕ್ಕೆ ಜಗಳವಾಡಿದ ಗೆಳತಿಯೊಬ್ಬಳು ತನ್ನ ಪ್ರಿಯಕರನನ್ನು ಕೋರ್ಟ್ ಮೆಟ್ಟಿಲೇರುವಂತೆ ಮಾಡಿದ್ದಾಳೆ. ನ್ಯೂಯಾರ್ಕ್ ಪೋಸ್ಟ್ ಪ್ರಕಾರ ‘ಈ ಘಟನೆ ನಡೆದಿರುವುದು ನ್ಯೂಜಿಲೆಂಡ್ ನಲ್ಲಿ. ಯುವತಿಯೊಬ್ಬಳು ತನ್ನ ಪ್ರಿಯಕರ ತನ್ನನ್ನು ವಿಮಾನ ನಿಲ್ದಾಣಕ್ಕೆ ಬಿಡಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡು ಕೇಸು ದಾಖಲಿಸಿದ್ದಾಳೆ. ಇದಲ್ಲದೇ ಆತನಿಂದಾಗಿ ತನ್ನ ಫ್ಲೈಟ್ ಮಿಸ್ ಆಯ್ತು, ಇದಲ್ಲದೇ ಮರುದಿನ ಬೇರೆ ಫ್ಲೈಟ್ನಲ್ಲಿ ಹೋಗಲು ಹೆಚ್ಚುವರಿ ಹಣವನ್ನು ಖರ್ಚು ಮಾಡಬೇಕಾಗಿತ್ತು.
ಇಷ್ಟೆಲ್ಲಾ ಕಾರಣಗಳಿಂದ ಪ್ರಿಯಕರನ ಮೇಲೆ ತೀವ್ರ ಕೋಪಿಸಿಕೊಂಡಿದ್ದ ಯುವತಿ ತಮ್ಮ ಆರು ವರ್ಷಗಳ ಸಂಬಂಧವನ್ನು ಮುರಿದುಕೊಂಡಿದ್ದಾಳೆ. ಇದಲ್ಲದೆ, ವಿಮಾನಕ್ಕಾಗಿ ಪಾವತಿಸಿದ ಹಣವನ್ನು ಆತ ನೀಡುವಂತೆ ನ್ಯಾಯಾಲಯದ ನ್ಯಾಯಾಧೀಶರಲ್ಲಿ ಮನವಿ ಮಾಡಿದ್ದಾಳೆ.
ಇದನ್ನೂ ಓದಿ: ಮಗುವಿನ ಬೆಡ್ ರೂಂನಲ್ಲಿ ಕಂಬಳಿಯೊಳಗೆ ಬೆಚ್ಚಗೆ ಮಲಗಿದ್ದ ವಿಷಕಾರಿ ಹಾವು
ನ್ಯಾಯಾಧೀಶರ ತೀರ್ಮಾನವೇನು?
ಯುವತಿಯ ವಾದವನ್ನು ಆಲಿಸಿದ ನ್ಯಾಯಾಧೀಶ ರೆಫ್ರಿ ಕ್ರಿಶ್ಯಾ ಕೌವಿ, ಯುವತಿ ಹೇಳಿದ ಅಪರಾಧಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ವಾಗ್ದಾನವನ್ನು ಉಲ್ಲಂಘಿಸಿದ್ದಕ್ಕಾಗಿ ಯಾರನ್ನೂ ಶಿಕ್ಷಿಸುವುದು ಅಸಾಧ್ಯ ಎಂದು ತೀರ್ಪು ನೀಡಿದ್ದಾರೆ. ಇದಲ್ಲದೇ ಇಂತಹ ಸಣ್ಣ ವಿಚಾರಗಳಿಗೆ ಸಂಬಂಧ ಕಡಿದುಕೊಳ್ಳುವುದು ಸರಿಯಲ್ಲ ಎಂದು ಸಲಹೆ ನೀಡಿದ್ದಾರೆ.
ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ