AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಾಯ್‌ ಫ್ರೆಂಡ್ಸ್‌ ಇವತ್ತು ನಮ್ಮ ಫಸ್ಟ್‌ ನೈಟ್‌, ಮೊದಲ ರಾತ್ರಿಯ ವಿಡಿಯೋ ಹಂಚಿಕೊಂಡ ನವ ಜೋಡಿ…

ಸೋಷಿಯಲ್‌ ಮೀಡಿಯಾದಲ್ಲಿ ಲೈಕ್ಸ್‌, ಫಾಲೋವರ್ಸ್‌ ಗಿಟ್ಟಿಸಿಕೊಳ್ಳಲು ಹಾಗೂ ಫೇಮಸ್‌ ಆಗುವ ಸಲುವಾಗಿ ಕೆಲವೊಬ್ಬರು ಎಂತಹ ಹುಚ್ಚಾಟಕ್ಕೂ ಬೇಕಾದರೂ ಕೈ ಹಾಕುತ್ತಾರೆ. ಹೀಗೆ ರಾತ್ರೋ ರಾತ್ರಿ ಫೇಮಸ್‌ ಆಗಲು ಹುಚ್ಚು ವಿಡಿಯೋಗಳನ್ನು ಮಾಡಿ ಹರಿಬಿಡುವ ಹಲವರಿದ್ದಾರೆ. ಅದೇ ರೀತಿ ಇಲ್ಲೊಂದು ನವ ಜೋಡಿ ಕೂಡಾ ತಮ್ಮ ಫಸ್ಟ್‌ ನೈಟ್‌ ವ್ಲಾಗ್‌ ಮಾಡಿದ್ದು, ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದ್ದು, ಲೈಕ್ಸ್‌, ಫಾಲೋವರ್ಸ್‌ಗಾಗಿ ಈ ಜನ ಏನ್‌ ಬೇಕಾದ್ರೂ ಮಾಡ್ತಾರೆ ಎಂದು ನೆಟ್ಟಿಗರು ಗರಂ ಆಗಿದ್ದಾರೆ.

Viral Video: ಹಾಯ್‌ ಫ್ರೆಂಡ್ಸ್‌ ಇವತ್ತು ನಮ್ಮ ಫಸ್ಟ್‌ ನೈಟ್‌, ಮೊದಲ ರಾತ್ರಿಯ ವಿಡಿಯೋ ಹಂಚಿಕೊಂಡ ನವ ಜೋಡಿ…
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Jul 08, 2024 | 4:23 PM

Share

ಪ್ರಸ್ತುತ ಕಾಲಘಟ್ಟದಲ್ಲಿ ಸೋಷಿಯಲ್‌ ಮೀಡಿಯಾದ ಜನರ ಜೀವನದ ಭಾಗವಾಗಿ ಹೋಗಿದೆ. ಅದರಲ್ಲೂ ಯೂಟ್ಯೂಬ್‌ ಸಾವಿರಾರು ಕ್ರಿಯೇಟರ್ಸ್‌ಗಳಿಗೆ ಹಣ ಗಳಿಸುವ ಒಂದು ಉತ್ತಮ ವೇದಿಕೆಯಾಗಿದೆ. ಹೆಚ್ಚಿನವರು ತಾವು ದಿನದಲ್ಲಿ ಏನೆಲ್ಲಾ ಮಾಡುತ್ತೇವೆ ಎಂಬುದನ್ನು ವ್ಲಾಗ್‌ ಮಾಡಿ, ತಮ್ಮ ಜೀವನಕ್ಕೆ ಸಂಬಂಧಿಸಿದ ಪ್ರತಿ ಕ್ಷಣವನ್ನು ಅಂತರ್ಜಾಲದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅದರಲ್ಲಿ ಕೆಲವೊಬ್ಬರು ಲೈಕ್ಸ್‌, ಫಾಲೋವರ್ಸ್‌ಗಳಿಗಾಗಿ ಹುಚ್ಚು ವಿಡಿಯೋಗಳನ್ನು ಮಾಡಿ ಶೇರ್‌ ಮಾಡುತ್ತಾರೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್‌ ಆಗಿದ್ದು, ನವ ಜೋಡಿಯೊಂದು ತಮ್ಮ ಫಸ್ಟ್‌ ನೈಟ್‌ ವ್ಲಾಗ್‌ ಮಾಡಿ ಅದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಸುನಂದಾ ರಾಯ್‌ (SaffronSunanda) ಎಂಬವರು ಈ ಕುರಿತ ಪೋಸ್ಟ್‌ ಒಂದನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಶೋಭನದ ವ್ಲಾಗ್‌ ಅಂತೆ, ಈ ವ್ಲಾಗರ್ಸ್‌ ಸಂಪೂರ್ಣವಾಗಿ ಹುಚ್ಚರಾಗುತ್ತಿದ್ದಾರೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ (ಎಕ್ಸ್​​​​ ಖಾತೆ)

ವೈರಲ್‌ ವಿಡಿಯೋದಲ್ಲಿ ಹಾಯ್‌ ಎಂದು ವ್ಲಾಗ್‌ ಶುರು ಮಾಡಿದ ಮದುಮಗ ತನ್ನ ಪತ್ನಿಯನ್ನು ಪರಿಚಯಿಸಿ ನಂತರ ರೂಮ್‌ ಡೆಕೋರೇಷನ್‌ ಮಾಡಿರುವುದನ್ನು ತೋರಿಸಿ ಪತ್ನಿಗೆ ಸಿಹಿ ಮುತ್ತನ್ನು ನೀಡಿದ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ; ದೇವರಂತೆ ಬಂದು ಆಕೆಯನ್ನು ಕಾಪಾಡಿದ ಬೀದಿ ನಾಯಿ

ಜುಲೈ 5 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು “ಇತ್ತೀಚಿಗೆ ಜನರು ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ” ಎಂದು ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಅನೇಕರು ಈ ಜನರು ಲೈಕ್ಸ್‌, ಫಾಲೋವರ್ಸ್‌ಗಾಗಿ ಯಾವ ಮಟ್ಟಕ್ಕೂ ಬೇಕಾದ್ರೂ ಹೋಗ್ತಾರೆ ಎಂದು ಕಾಮೆಂಟ್ಸ್‌ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?